ಬೇಗೂರಿನ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಶಿಕ್ಷಕರ ಕಾರ್ಯಾಗಾರ । ವಿಜ್ಞಾನ, ಗಣಿತ, ಇಂಗ್ಲೀಷ್ ನಲ್ಲಿ ಮಕ್ಕಳ ಆತಂಕ ನಿವಾರಿಸುವಂತೆ ಸಲಹೆ
ವಿಜ್ಞಾನ ವಿಷಯ ಸಮುದ್ರವಿದ್ದಂತೆ, ನಾವು ಎಷ್ಟೇ ಕಲಿತರೂ ಅದರ ಆಳ ಹೆಚ್ಚು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ತಾಲೂಕಿನ ಬೇಗೂರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಎಸ್ಎಸ್ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ವಿಜ್ಞಾನ ಮತ್ತು ಗಣಿತ ವಿಷಯ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಹೊರ ಬಂದ ಮಾಹಿತಿಯನ್ನು ತರಬೇತಿಗೆ ಬಂದ ಶಿಕ್ಷಕರು ಮಕ್ಕಳೊಂದಿಗೆ ಹಂಚಿಕೊಂಡು ಹೆಚ್ಚಿನ ಅಂಕಗಳಿಸಲು ತಯಾರಿಸಬೇಕು ಎಂದರು.
ವಿಜ್ಞಾನದಲ್ಲಿ ಪ್ರಾಯೋಗಿಕ ಬೋಧನೆ ಬಹಳ ಮುಖ್ಯ. ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಕಾಳಜಿ ವಹಿಸಬೇಕು. ಕಾರ್ಯಾಗಾರ ಶಿಕ್ಷಕರ ವೃತ್ತಿಪರ ಅಭಿವೃದ್ಧಿಗೆ ಪೂರಕ ಎಂದರು.
----
ಗುಂಡ್ಲುಪೇಟೆ ತಾಲೂಕಿನ ಬೇಗೂರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ನಡೆದ ಶಿಕ್ಷಕರ ಕಾರ್ಯಾಗಾರದಲ್ಲಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರನ್ನು ಶಿಕ್ಷಕ ವರ್ಗದಿಂದ ಸನ್ಮಾನಿಸಲಾಯಿತು.