ನವದೆಹಲಿ: 2023ರಲ್ಲಿ ಸುಪ್ರೀಂ ಕೋರ್ಟ್ ಡಿ.15ರವರೆಗೆ ಬರೋಬ್ಬರಿ 52,191 ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಕಾಣಿಸುವ ಮೂಲಕ ಹೊಸ ಮೈಲುಗಲ್ಲು ಸ್ಥಾಪಿಸಿದೆ.ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿರುವ ದತ್ತಾಂಶದ ಪ್ರಕಾರ ಕಳೆದ ವರ್ಷ ಇದೇ ಅವಧಿಯಲ್ಲಿ 39,800 ಪ್ರಕರಣಗಳನ್ನು ಇತ್ಯರ್ಥ ಮಾಡಿತ್ತು.
ಕೊರೋನಾ ನಂತರ ಕೃತಕ ಬುದ್ಧಿಮತ್ತೆಯೂ ಸೇರಿದಂತೆ ಸುಧಾರಿತ ತಂತ್ರಜ್ಞಾನ ಬಳಕೆಯಿಂದ ಹಲವು ಪ್ರಕ್ರಿಯೆಯಲ್ಲಿ ಉಂಟಾಗುತ್ತಿದ್ದ ಸಮಯ ಲೋಪವನ್ನು ನಿಗ್ರಹಿಸಿದ್ದೇ ಈ ಮೈಲಿಗಲ್ಲು ಸಾಧಿಸಲು ಕಾರಣ ಎನ್ನಲಾಗಿದೆ. ಆದಾಗ್ಯೂ ಸುಪ್ರೀಂ ಕೋರ್ಟ್‌ನಲ್ಲಿ 80 ಸಾವಿರ ಸಕ್ರಿಯ ಪ್ರಕರಣಗಳನ್ನು ಇತ್ಯರ್ಥ ಮಾಡಬೇಕಾಗಿರುವುದು ಬಹುದೊಡ್ಡ ಸವಾಲು ಎಂದು ವರದಿ ತಿಳಿಸಿದೆ.