ಅಯೋಧ್ಯೆ: ರಾಮಮಂದಿರ ಉದ್ಘಾಟನೆ ಸನ್ನಿಹಿತವಾಗಿರುವ ಬೆನ್ನಲ್ಲೇ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಇಲ್ಲಿ ಮೊಟ್ಟಮೊದಲ ಬಾರಿಗೆ ತಮ್ಮ ಸಚಿವ ಸಂಪುಟ ಸಭೆ ನಡೆಸಿದರು. ಸಭೆಯಲ್ಲಿ ಅಯೋಧ್ಯೆಯಲ್ಲಿ 25 ಎಕರೆ ಪ್ರದೇಶದಲ್ಲಿ ರಾಮನ ಕುರಿತ ವಸ್ತು ಸಂಗ್ರಹಾಲಯ ನಿರ್ಮಾಣ, ಅಯೋಧ್ಯಾ ರಿಸರ್ಚ್ ಇನ್‌ಸ್ಟಿಟ್ಯೂಟನ್ನು ಅಂತಾರಾಷ್ಟ್ರೀಯ ರಾಮಾಯಣ ವೇದಿಕ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಆಗಿ ಪರಿವರ್ತಿಸುವುದು ಸೇರಿದಂತೆ 14 ವಿವಿಧ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.