ಸಮಾಜದ ಅಭಿವೃದ್ಧಿಯಲ್ಲಿ ಸ್ತ್ರೀಯರ ಪಾತ್ರ ಅನನ್ಯ: ಶಾಸಕ ಸುರೇಶ್‌

KannadaprabhaNewsNetwork |  
Published : Apr 08, 2026, 01:45 AM IST
7ಎಚ್ಎಸ್ಎನ್15 : ಬೇಲೂರಿನಲ್ಲಿ    ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ವತಿಯಿಂದ  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. | Kannada Prabha

ಸಾರಾಂಶ

ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರು ಪ್ರಮುಖ ಪಾತ್ರವಹಿಸುತ್ತಿದ್ದಾರೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬೇಲೂರುಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರು ಪ್ರಮುಖ ಪಾತ್ರವಹಿಸುತ್ತಿದ್ದಾರೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರ ಶಕ್ತಿಕರಣಕ್ಕೆ ಶಿಕ್ಷಣ ಮತ್ತು ಅರಿವು ಅತ್ಯಂತ ಮುಖ್ಯವಾಗಿದ್ದು, ಇಂತಹ ಕಾರ್ಯಾಗಾರಗಳು ಅವರ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತವೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸುತ್ತಿದ್ದು, ಸರ್ಕಾರವು ಮಹಿಳಾ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮದ್ರಾಸ್ ವಿವಿ ಕನ್ನಡ ವಿಭಾಗದ ಪ್ರಾಧ್ಯಾಪಕಿ ಡಾ. ತಮಿಳ್ ಸೆಲ್ವಿ ಪ್ರಧಾನ ಭಾಷಣ ಮಾಡಿದರು. ಮಹಿಳಾ ದಿನಾಚರಣೆಯ ಹಿನ್ನೆಲೆ ಹಾಗೂ ಅದರ ಮಹತ್ವವನ್ನು ವಿವರಿಸಿದ ಅವರು, ಮಹಿಳೆಯರು ಸಮಾನ ಹಕ್ಕುಗಳು, ಸ್ಥಾನಮಾನ ಮತ್ತು ಜವಾಬ್ದಾರಿಗಳನ್ನು ಆತ್ಮಗೌರವದಿಂದ ಕೇಳಿಕೊಳ್ಳುವ ದಿನವೇ ಮಹಿಳಾ ದಿನಾಚರಣೆ. ಇದು ಪುರುಷರನ್ನು ವಿರೋಧಿಸುವುದಕ್ಕಲ್ಲ, ಸಮಾನತೆಯ ಹೋರಾಟದ ಸಂಕೇತವಾಗಿದೆ ಎಂದು ಹೇಳಿದರು.ಮಹಿಳೆ-ಪುರುಷರ ಜವಾಬ್ದಾರಿಗಳ ಕುರಿತು ಮಾತನಾಡಿದ ಅವರು, ಮಹಿಳಾ ದಿನಾಚರಣೆಯನ್ನು ಕೆಲವರು ತಪ್ಪಾಗಿ ಅರ್ಥೈಸುತ್ತಿರುವುದು ವಿಷಾದನೀಯ. ಪ್ರಕೃತಿಯು ಮಹಿಳೆ ಮತ್ತು ಪುರುಷರಿಗೆ ಅಂಗಾಂಗಗಳನ್ನು ಬೇರೆಯಾಗಿ ನೀಡಿದ್ದರು ಸಮಾನ ಜವಾಬ್ದಾರಿಗಳನ್ನು ನೀಡಿದೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಮರ್ಥರಾಗಿದ್ದು, ಆದರೂ ಕೆಲವು ವೇಳೆ ತಮ್ಮ ಸ್ವಾತಂತ್ರ್ಯ ಮತ್ತು ಸ್ವಾಭಿಮಾನವನ್ನು ತ್ಯಜಿಸಬೇಕಾದ ಪರಿಸ್ಥಿತಿ ಇಂದಿಗೂ ಮುಂದುವರಿದಿದೆ ಎಂದು ಅಭಿಪ್ರಾಯಪಟ್ಟರು.ಈ ವೇಳೆ ತಹಶೀಲ್ದಾರ್ ಶ್ರೀಧರ್ ಕಂಕನವಾಡಿ, ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ. ಕೃಷ್ಣೇಗೌಡ, ತಾಲೂಕು ಘಟಕದ ಅಧ್ಯಕ್ಷ ಆರ್. ಮಂಜುನಾಥ್, ಕಾರ್ಯದರ್ಶಿ ಡಾ. ಲಕ್ಷ್ಮಿಕಾಂತ್, ತಾಲೂಕು ಘಟಕದ ಕಾರ್ಯದರ್ಶಿ ಧಮೇಗೌಡ, ಖಜಾಂಚಿ ಸಂತೋಷ್, ಹಿರಿಯ ಉಪಾಧ್ಯಕ್ಷ ಪೂರ್ಣೇಶ್, ದಯಾನಂದ್, ತಾ.ಪಂ. ಇಒ ಜಿ.ಎಸ್. ಸತೀಶ್ ಕುಮಾರ್, ಬಿಇಒ ಎಸ್. ಭಾಗ್ಯಮ್ಮ, ಶಿಶು ಅಭಿವೃದ್ಧಿ ಅಧಿಕಾರಿ ಎಂ.ಎಸ್. ಇಂಪಾ, ಆರ್‌ಎಫ್‌ಒ ಎ.ಎಚ್. ಶೈಲಾ, ಅರೇಹಳ್ಳಿ ಪಿಎಸ್‌ಐ ಶೋಭಾ, ಉಪ ಖಜಾನಾಧಿಕಾರಿ ಎಂ.ಪಿ.ವೀಣಾ, ಮಕ್ಕಳ ಆರೋಗ್ಯ ತಜ್ಞೆ ಡಾ. ಜಯಲಕ್ಷ್ಮಿ ನಾಯಕ್, ಪ್ರಾಂಶುಪಾಲೆ ಜಿ.ಕೆ. ವೀಣಾ, ತನುಜ, ವನಿತಾಮಣಿ, ತೇಜಸ್ವಿನಿ ಹಾಜರಿದ್ದರು.

PREV

Recommended Stories

ವೀರಭದ್ರೇಶ್ವರಸ್ವಾಮಿ ಜಾತ್ರಾ ಮಹೋತ್ಸವ
ಸರ್ಜಾಪುರದಲ್ಲಿ ಕುಡಿವ ನೀರು ಕೇಳಿದರೆ ಕೇಸು ಗ್ಯಾರಂಟಿ!