ಇಂದು ಅರ್ಜುನ, ಖೇಲ್‌ರತ್ನ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Jan 09, 2024, 02:00 AM ISTUpdated : Jan 09, 2024, 11:53 AM IST
Mohammed Shami

ಸಾರಾಂಶ

2023ನೇ ಸಾಲಿನ ಅರ್ಜುನ, ಖೇಲ್‌ರತ್ನ ಪ್ರಶಸ್ತಿಗಳ ಪ್ರದಾನ ಸಮಾರಂಭ ಮಂಗಳವಾರ ನಡೆಯಲಿದ್ದು, ಕ್ರಿಕೆಟಿಗ ಮೊಹಮದ್‌ ಶಮಿ ಸೇರಿದಂತೆ ದೇಶದ ಹಲವು ಕ್ರೀಡಾ ಸಾಧಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ನವದೆಹಲಿ: 2023ನೇ ಸಾಲಿನಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಹಲವು ಅಥ್ಲೀಟ್‌ಗಳಿಗೆ ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಇತ್ತೀಚೆಗಷ್ಟೇ ಕೇಂದ್ರ ಕ್ರೀಡಾ ಸಚಿವಾಲಯವು ಕ್ರೀಡಾ ಸಾಧಕರ ಹೆಸರನ್ನು ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಿತ್ತು.  

ತಾರಾ ಕ್ರಿಕೆಟಿಗ, ವೇಗದ ಬೌಲರ್‌ ಮೊಹಮದ್‌ ಶಮಿ ಸೇರಿದಂತೆ 26 ಸಾಧಕರು ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಭಾರತ ತಂಡದ ಪ್ರಮುಖ ಆಟಗಾರರಾಗಿರುವ ಮೊಹಮದ್‌ ಶಮಿ, ಇತ್ತೀಚೆಗೆ ಮುಕ್ತಾಯಗೊಂಡ 2023ರ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ 24 ವಿಕೆಟ್‌ ಪಡೆದು ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, ಫೈನಲ್‌ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿತ್ತು.

ಅಜಯ್‌ ರೆಡ್ಡಿ (ಅಂಧರ ಕ್ರಿಕೆಟ್‌), ಓಜಸ್‌, ಅದಿತಿ ಸ್ವಾಮಿ (ಆರ್ಚರಿ), ಶೀತಲ್‌ ದೇವಿ(ಪ್ಯಾರಾ ಆರ್ಚರಿ), ಪಾರುಲ್‌ ಚೌಧರಿ, ಶ್ರೀಶಂಕರ್‌ ಮುರಳಿ (ಅಥ್ಲೆಟಿಕ್ಸ್‌), ಮೊಹಮದ್‌ ಹುಸ್ಮುದ್ದಿನ್‌ (ಬಾಕ್ಸಿಂಗ್‌), ಆರ್‌.ವೈಶಾಲಿ (ಚೆಸ್‌), ಅಂತಿಮ್‌ ಪಂಘಲ್‌ (ಕುಸ್ತಿ) ಕೂಡಾ ಮಂಗಳವಾರ ಅರ್ಜುನ ಪ್ರಶಸ್ತಿ ಪಡೆಯಲಿದ್ದಾರೆ. 

ತಾರಾ ಬ್ಯಾಡ್ಮಿಂಟನ್‌ ಆಟಗಾರರಾದ ಸಾತ್ವಿಕ್‌ ಸಾಯಿರಾಜ್‌ ಹಾಗೂ ಚಿರಾಗ್‌ ಶೆಟ್ಟಿ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ, ಶ್ರೇಷ್ಠ ಕೋಚ್‌ಗಳಿಗೆ ನೀಡುವ ದ್ರೋಣಾಚಾರ್ಯ ಪ್ರಶಸ್ತಿಯನ್ನು ಕಬಡ್ಡಿ ಕೋಚ್‌ ಬಾಸ್ಕರನ್‌ ಅವರು ರಾಷ್ಟ್ರಪತಿಯಿಂದ ಸ್ವೀಕರಿಸಲಿದ್ದಾರೆ.

PREV
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.

Recommended Stories

ಮುಳುಗುತ್ತಿದ್ದ ಭಾರತಕ್ಕೆ ಬೆಳಕಾದ ‘ಸೂರ್ಯ’!
ಪಾಕಿಸ್ತಾನದಿಂದ ಯು-ಟರ್ನ್‌: ಟಿ20 ವಿಶ್ವಕಪ್ಪಲ್ಲಿ ಭಾರತ ವಿರುದ್ಧ ಕಣಕ್ಕೆ?