ನ್ಯೂಜಿಲೆಂಡ್‌ ಟೆಸ್ಟ್‌ ಸರಣಿಗೆ ವೇಗಿ ಬೂಮ್ರಾ ಉಪನಾಯಕ ಅ.16ರಿಂದ 3 ಟೆಸ್ಟ್‌ ಪಂದ್ಯ

ಸಾರಾಂಶ

ಅ.16ರಿಂದ ಆರಂಭಗೊಳ್ಳಲಿರುವ ನ್ಯೂಜಿಲೆಂಡ್‌ ವಿರುದ್ಧ 3 ಪಂದ್ಯಗಳ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟಗೊಂಡಿದ್ದು, ವೇಗಿ ಜಸ್‌ಪ್ರೀತ್‌ ಬೂಮ್ರಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ನವದೆಹಲಿ: ಅ.16ರಿಂದ ಆರಂಭಗೊಳ್ಳಲಿರುವ ನ್ಯೂಜಿಲೆಂಡ್‌ ವಿರುದ್ಧ 3 ಪಂದ್ಯಗಳ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟಗೊಂಡಿದ್ದು, ವೇಗಿ ಜಸ್‌ಪ್ರೀತ್‌ ಬೂಮ್ರಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. 15 ಮಂದಿ ಆಟಗಾರರ ತಂಡವನ್ನು ರೋಹಿತ್‌ ಶರ್ಮಾ ಮುನ್ನಡೆಸಲಿದ್ದಾರೆ.

ಬೂಮ್ರಾ ಈ ಮೊದಲು 2022ರಲ್ಲಿ ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಪಂದ್ಯಕ್ಕೆ ನಾಯಕತ್ವ ವಹಿಸಿದ್ದರು. ಕಳೆದ ವರ್ಷ ಐರ್ಲೆಂಡ್‌ ವಿರುದ್ಧ ಟಿ20 ಸರಣಿಯಲ್ಲೂ ತಂಡವನ್ನು ಮುನ್ನಡೆಸಿದ ಅನುಭವವಿದೆ. ಇನ್ನು, ದೀರ್ಘಕಾಲದಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವಿರುವ ಗಾಯಾಳು ವೇಗಿ ಮೊಹಮದ್‌ ಶಮಿ ಕಿವೀಸ್‌ ವಿರುದ್ಧ ಸರಣಿಗೂ ಅಲಭ್ಯರಾಗಲಿದ್ದಾರೆ. ಇತ್ತೀಚೆಗೆ ನಡೆದ ಬಾಂಗ್ಲಾ ವಿರುದ್ಧ ಸರಣಿಗೆ ತಂಡಕ್ಕೆ ಆಯ್ಕೆಯಾಗಿದ್ದ ವೇಗಿ ಯಶ್ ದಯಾಳ್‌ ಕೂಡಾ ಗಾಯದ ಕಾರಣದಿಂದ ತಂಡದಿಂದ ಹೊರಬಿದ್ದಿದ್ದಾರೆ. ಉಳಿದಂತೆ ಬಾಂಗ್ಲಾ ವಿರುದ್ಧ ಆಡಿದ್ದ ತಂಡವನ್ನೇ ಕಿವೀಸ್‌ ಸರಣಿಗೂ ಆಯ್ಕೆ ಮಾಡಲಾಗಿದೆ. ಮೊದಲ ಪಂದ್ಯ ಅ.16ರಿಂದ ಬೆಂಗಳೂರಿನಲ್ಲಿ, 2ನೇ ಪಂದ್ಯ ಅ.24ರಿಂದ ಪುಣೆಯಲ್ಲಿ ಹಾಗೂ ಕೊನೆ ಪಂದ್ಯ ನ.1ರಿಂದ ಮುಂಬೈನಲ್ಲಿ ಆರಂಭಗೊಳ್ಳಲಿದೆ.

ತಂಡ: ರೋಹಿತ್‌ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್‌, ಶುಭ್‌ಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಕೆ.ಎಲ್‌.ರಾಹುಲ್‌, ಸರ್ಫರಾಜ್‌ ಖಾನ್‌, ರಿಷಭ್‌ ಪಂತ್‌, ಧ್ರುವ್‌ ಜುರೆಲ್‌, ಆರ್‌.ಅಶ್ವಿನ್‌, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್‌, ಕುಲ್ದೀಪ್‌ ಯಾದವ್‌, ಮೊಹಮದ್‌ ಸಿರಾಜ್‌, ಆಕಾಶ್‌ ದೀಪ್‌.

ಮೀಸಲು ಆಟಗಾರರು: ಹರ್ಷಿತ್‌ ರಾಣಾ, ನಿತೀಶ್‌ ಕುಮಾರ್‌, ಮಯಾಂಕ್‌ ಯಾದವ್‌, ಪ್ರಸಿದ್ಧ್‌ ಕೃಷ್ಣ.

Share this article