ರೋಹನ್‌ ಬೋಪಣ್ಣಗೆ ಸಿಎಂ ₹50 ಲಕ್ಷ ಬಹುಮಾನ!

KannadaprabhaNewsNetwork | Updated : Feb 14 2024, 03:21 PM IST

ಸಾರಾಂಶ

ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದರೋಹನ್‌ ಬೋಪಣ್ಣ ಅವರನ್ನು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ ಅಭಿನಂದಿಸಿದರು.

ಬೆಂಗಳೂರು: ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದರೋಹನ್‌ ಬೋಪಣ್ಣ ಅವರನ್ನು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ ಅಭಿನಂದಿಸಿದರು. 

ಇದೇ ವೇಳೆ ಅವರಿಗೆ 50 ಲಕ್ಷ ರು.ಗಳ ಬಹುಮಾನವನ್ನೂ ಘೋಷಿಸಿದರು. ಸಚಿವರಾದ ಪ್ರಿಯಾಂಕ್‌ ಖರ್ಗೆ, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಅವರ ಕುಟುಂಬದವರು ಹಾಜರಿದ್ದರು.

Share this article