ದೇವೇಂದ್ರ ಝಝಾರಿಯಾ ಭಾರತ ಪ್ಯಾರಾಲಿಂಪಿಕ್‌ ಸಮಿತಿಯ ನೂತನ ಅಧ್ಯಕ್ಷ

KannadaprabhaNewsNetwork |  
Published : Mar 10, 2024, 01:30 AM IST
ದೇವೇಂದ್ರ ಝಾಝಾರಿಯಾ | Kannada Prabha

ಸಾರಾಂಶ

ದೇವೇಂದ್ರ ವಿರುದ್ಧ ಯಾರೂ ಸ್ಪರ್ಧೆ ಮಾಡದ ಹಿನ್ನೆಲೆಯಲ್ಲಿ ಅವರು ಸೇರಿ ಎಲ್ಲಾ ಹುದ್ದೆಗಳಿಗೂ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು. ಪ್ಯಾರಾಲಿಂಪಿಕ್ಸ್‌ ಪದಕ ವಿಜೇತೆ ದೀಪಾ ಮಲಿಕ್‌ ಅಧ್ಯಕ್ಷೆಯಾಗಿ ತಮ್ಮ ಅವಧಿ ಮುಕ್ತಾಯಗೊಳಿಸಿದ ಬಳಿಕ ಚುನಾವಣೆ ಘೋಷಣೆಯಾಗಿತ್ತು.

ನವದೆಹಲಿ: 2 ಬಾರಿ ಪ್ಯಾರಾಲಿಂಪಿಕ್ಸ್‌ ಚಿನ್ನ ವಿಜೇತ ಜಾವೆಲಿನ್‌ ಥ್ರೋ ಪಟು ದೇವೇಂದ್ರ ಝಝಾರಿಯಾ ಭಾನುವಾರ ಭಾರತ ಪ್ಯಾರಾಲಿಂಪಿಕ್‌ ಸಮಿತಿ (ಪಿಸಿಐ)ನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಪ್ಯಾರಾಲಿಂಪಿಕ್ಸ್‌ ಪದಕ ವಿಜೇತೆ ದೀಪಾ ಮಲಿಕ್‌ ಅಧ್ಯಕ್ಷೆಯಾಗಿ ತಮ್ಮ ಅವಧಿ ಮುಕ್ತಾಯಗೊಳಿಸಿದ ಬಳಿಕ ಚುನಾವಣೆ ಘೋಷಣೆಯಾಗಿತ್ತು. ಆದರೆ ದೇವೇಂದ್ರ ವಿರುದ್ಧ ಯಾರೂ ಸ್ಪರ್ಧೆ ಮಾಡದ ಹಿನ್ನೆಲೆಯಲ್ಲಿ ಅವರು ಸೇರಿ ಎಲ್ಲಾ ಹುದ್ದೆಗಳಿಗೂ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು. ದೇವೇಂದ್ರ 2004ರ ಅಥೆನ್ಸ್‌, 2016ರ ರಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ, 2021ರ ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಜಯಿಸಿದ್ದರು. ದೇವೇಂದ್ರ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಸ್ಥಾನದ ಚುರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.ಬಾಕ್ಸಿಂಗ್‌ ಒಲಿಂಪಿಕ್‌ ಅರ್ಹತಾ ಸುತ್ತು: ಹುಸ್ಮುದ್ದಿನ್‌ಗೆ ಸೋಲು

ಬುಸ್ಟೊ ಅರ್ಸಿಜಿಯೊ(ಇಟಲಿ): ವಿಶ್ವ ಚಾಂಪಿಯನ್‌ಶಿಪ್‌ ಕಂಚು ವಿಜೇತ ಭಾರತದ ಮೊಹಮದ್‌ ಹುಸ್ಮುದ್ದಿನ್‌, ಇಲ್ಲಿ ನಡೆಯುತ್ತಿರುವ ಬಾಕ್ಸಿಂಗ್‌ ಒಲಿಂಪಿಕ್ಸ್‌ ಅರ್ಹತಾ ಟೂರ್ನಿಯ 2ನೇ ಸುತ್ತಿನಲ್ಲಿ ಸೋತು ನಿರಾಸೆ ಅನುಭವಿಸಿದ್ದಾರೆ. ಪುರುಷರ 57 ಕೆ.ಜಿ. ವಿಭಾಗದ ಸ್ಪರ್ಧೆಯಲ್ಲಿ ಹುಸ್ಮುದ್ದಿನ್‌ಗೆ ಮೊದಲ ಸುತ್ತಿನಲ್ಲಿ ಬೈ ಸಿಕ್ಕಿತ್ತು. ಶನಿವಾರ 2ನೇ ಸುತ್ತಿನಲ್ಲಿ ಅವರು ಐರ್ಲೆಂಡ್‌ನ ಜ್ಯೂಡ್‌ ಗಾಲಾಘೆರ್‌ ವಿರುದ್ಧ ಸೋಲುಂಡರು.

PREV
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.

Recommended Stories

ವಿಶ್ವಕಪ್‌ ಪಂದ್ಯ ಬಹಿಷ್ಕಾರಕ್ಕಿದೆ ದೀರ್ಘ ಇತಿಹಾಸ
ರೋಲರ್‌ ಸ್ಕೇಟಿಂಗ್‌: ಮಂಗಳೂರು ಮೂಲದ ಅಹ್ಯಾನ್ ಅನ್ವರ್‌ಗೆ ಚಿನ್ನ