ಚಾಂಪಿಯನ್ಸ್‌ ಟ್ರೋಫಿ ಹೈಬ್ರಿಡ್‌ ಮಾದರಿಯಲ್ಲಿ ನಡೆಸಬೇಕೆಂಬ ಬಿಸಿಸಿಐ ಮನವಿಗೆ ಪಿಸಿಬಿ ಬಿಟ್ಟು ಬೇರೆಲ್ಲಾ ದೇಶ ಒಪ್ಪಿಗೆ

Published : Nov 30, 2024, 04:12 AM IST
Cricketer death in ground

ಸಾರಾಂಶ

ಚಾಂಪಿಯನ್ಸ್‌ ಟ್ರೋಫಿ ಹೈಬ್ರಿಡ್‌ ಮಾದರಿಯಲ್ಲಿ ನಡೆಸಬೇಕೆಂಬ ಬಿಸಿಸಿಐ ಮನವಿಗೆ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ 6 ದೇಶಗಳ ಒಪ್ಪಿಗೆ ಸೂಚಿಸಿವೆ ಎಂದು ತಿಳಿದುಬಂದಿದೆ. ಆದರೆ ಪಾಕಿಸ್ತಾನ ಮಾತ್ರ ಹೈಬ್ರಿಡ್‌ ಮಾದರಿಗೆ ಒಪ್ಪಿಗೆ ನೀಡುತ್ತಿಲ್ಲ

ಚಾಂಪಿಯನ್ಸ್‌ ಟ್ರೋಫಿ ಹೈಬ್ರಿಡ್‌ ಮಾದರಿಯಲ್ಲಿ ನಡೆಸಬೇಕೆಂಬ ಬಿಸಿಸಿಐ ಮನವಿಗೆ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ 6 ದೇಶಗಳ ಒಪ್ಪಿಗೆ ಸೂಚಿಸಿವೆ ಎಂದು ತಿಳಿದುಬಂದಿದೆ.

 ಆದರೆ ಪಾಕಿಸ್ತಾನ ಮಾತ್ರ ಹೈಬ್ರಿಡ್‌ ಮಾದರಿಗೆ ಒಪ್ಪಿಗೆ ನೀಡುತ್ತಿಲ್ಲ. ಭಾರತದ ಜೊತೆಗೆ ಆಸ್ಟ್ರೇಲಿಯಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಇಂಗ್ಲೆಂಡ್‌, ನ್ಯೂಜಿಲೆಂಡ್‌, ದಕ್ಷಿಣ ಆಫ್ರಿಕಾ, ಶ್ರೀಲಂಕಾ ದೇಶಗಳು ಹೈಬ್ರಿಡ್‌ ಮಾದರಿ ಟೂರ್ನಿ ನಡೆಸಲು ಸಮ್ಮತಿ ಸೂಚಿಸಿದೆ. 

ಹೀಗಾಗಿ ಐಸಿಸಿ ಸದ್ಯ ಪಾಕಿಸ್ತಾನವನ್ನು ಒಪ್ಪಿಸಬೇಕಿದ್ದು, ಇಲ್ಲದಿದ್ದರೆ ಟೂರ್ನಿಯನ್ನು ಪಾಕಿಸ್ತಾನದಿಂದಲೇ ಸ್ಥಳಾಂತರಿಸಲು ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಅಲ್ಲದಿದ್ದರೆ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಆಯ್ಕೆ ಕೂಡಾ ಐಸಿಸಿ ಮುಂದೆ ಇದೆ ಎಂದು ತಿಳಿದುಬಂದಿದೆ.

PREV

Recommended Stories

ಇಂದಿನಿಂದ ದುಲೀಪ್‌ ಟ್ರೋಫಿ ಫೈನಲ್‌
ಪಾಕ್‌ ಕದನಕ್ಕೂ ಮುನ್ನ ಭಾರತಕ್ಕೆ ಭರ್ಜರಿ ಅಭ್ಯಾಸ