ಚಿನ್ನಸ್ವಾಮಿಯಲ್ಲಿ ಇನ್ನು ಐಪಿಎಲ್‌ ಪಂದ್ಯಗಳಿಲ್ಲ?

Published : Jul 26, 2025, 10:17 AM IST
M Chinnaswamy Stadium

ಸಾರಾಂಶ

ಆರ್‌ಸಿಬಿ ಕಪ್‌ ಗೆಲುವಿನ ಸಂಭ್ರಮಾಚರಣೆ ವೇಳೆ ಭೀಕರ ಕಾಲ್ತುಳಿತಕ್ಕೆ ಸಾಕ್ಷಿಯಾಗಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇನ್ನು ಮುಂದೆ ಐಪಿಎಲ್‌ ಪಂದ್ಯಗಳೇ ನಡೆಯುವುದು ಅನುಮಾನ

 ಬೆಂಗಳೂರು :  ಆರ್‌ಸಿಬಿ ಕಪ್‌ ಗೆಲುವಿನ ಸಂಭ್ರಮಾಚರಣೆ ವೇಳೆ ಭೀಕರ ಕಾಲ್ತುಳಿತಕ್ಕೆ ಸಾಕ್ಷಿಯಾಗಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇನ್ನು ಮುಂದೆ ಐಪಿಎಲ್‌ ಪಂದ್ಯಗಳೇ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಕಾಲ್ತುಳಿತ ಸಂಬಂಧ ನ್ಯಾ.ಮೈಕೆಲ್‌ ಕುನ್ಹಾ ಆಯೋಗವು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೆಚ್ಚಿನ ಜನರು ಸೇರುವ ಪಂದ್ಯಗಳನ್ನು ಆಯೋಜಿಸುವುದು ಸೂಕ್ತವಲ್ಲ ಎಂದು ಉಲ್ಲೇಖಿಸಿದೆ.

ಕ್ರೀಡಾಂಗಣದ ವಿನ್ಯಾಸ ಮತ್ತು ರಚನೆ ಹೆಚ್ಚಿನ ಜನರು ಸೇರುವ ಸಮಾರಂಭಗಳಿಗೆ ಸೂಕ್ತವಲ್ಲ ಮತ್ತು ಅಸುರಕ್ಷಿತ ಎಂದು ಆಯೋಗವು ತನ್ನ ವರದಿಯಲ್ಲಿ ಹೇಳಿದೆ. ದೊಡ್ಡ ಸಂಖ್ಯೆಯ ಜನರು ಸೇರಿದರೆ ಅಪಾಯ ಎದುರಾಗಬಹುದು. ಇಂತಹ ಸಮಾರಂಭಗಳನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಬೇಕು ಮತ್ತು ಅಂತಾರಾಷ್ಟ್ರೀಯ ಮಾನದಂಡಗಳನ್ನು ಪಾಲಿಸಿಯೇ ಇನ್ನು ಪಂದ್ಯಗಳನ್ನು ನಡೆಸಬೇಕು ಎಂದಿದೆ.

ಇದರಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ್ನು ಐಪಿಎಲ್ ಸೇರಿ ಮಹತ್ವದ ಪಂದ್ಯಗಳ ಬಗ್ಗೆ ಅನಿಶ್ಚಿತತೆ ಎದುರಾಗಿದೆ. ಈಗಾಗಲೇ ಮಹಾರಾಜ ಟ್ರೋಫಿಯನ್ನು ಪ್ರೇಕ್ಷಕರಿಲ್ಲದೆ ಆಯೋಜಿಸಲು ಕೆಎಸ್‌ಸಿಎ ನಿರ್ಧರಿಸಿದೆ. ಈ ನಡುವೆ ಸೆಪ್ಟೆಂಬರ್‌ನಲ್ಲಿ ಮಹಿಳಾ ವಿಶ್ವಕಪ್‌ನ ಉದ್ಘಾಟನಾ ಪಂದ್ಯ, ಸೆಮಿಫೈನಲ್‌, ಸಂಭಾವ್ಯ ಫೈನಲ್‌ ಪಂದ್ಯ ನಿಗದಿಯಾಗಿದೆ. ಆದರೆ ವರದಿ ಬಳಿಕ ವಿಶ್ವಕಪ್‌ ಭವಿಷ್ಯ ಅತಂತ್ರವಾಗಿದೆ. ಜೊತೆಗೆ ಭವಿಷ್ಯದಲ್ಲಿ ಐಪಿಎಲ್‌ ಪಂದ್ಯಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಸಾಧ್ಯತೆ ಇಲ್ಲ ಎಂದೇ ಹೇಳಲಾಗುತ್ತಿದೆ.

PREV
Read more Articles on

Recommended Stories

ಕೊನೆರು ಹಂಪಿ vs ದಿವ್ಯಾ: ಚೆಸ್‌ ವಿಶ್ವಕಪ್‌ ಕಿರೀಟ ಗೆಲ್ಲೋರ್‍ಯಾರು?
ಮ್ಯಾಂಚೆಸ್ಟರಲ್ಲಿ ಭಾರತದ ಬೆಂಡೆತ್ತಿದ ಇಂಗ್ಲೆಂಡ್‌!