ನ್ಯೂಯಾರ್ಕ್: ಈ ಬಾರಿ ಟಿ20 ವಿಶ್ವಕಪ್ ಅಮೆರಿಕ ಹಾಗೂ ವೆಸ್ಟ್‌ಇಂಡೀಸ್‌ನಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಐಸಿಸಿ ಹಾಗೂ ಟಿ20 ವಿಶ್ವಕಪ್‌ನ ಅಧಿಕೃತ ಪ್ರಸಾರಕರು ಟೀವಿ ಪ್ರೇಕ್ಷಕರ ಕೊರತೆ ಎದುರಿಸುತ್ತಿದ್ದಾರೆ. ಹೀಗಾಗಿ ಜೂ.9ರ ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವನ್ನೇ ಆಯೋಜಕರು, ಪ್ರಸಾರಕರು ನೆಚ್ಚಿಕೊಂಡಿದ್ದಾರೆ.ಕ್ರಿಕೆಟ್‌ಗೆ ಹೆಚ್ಚಿನ ಮಾರುಕಟ್ಟೆ ಇರುವುದು ಭಾರತದಲ್ಲಿ. ಉಳಿದಂತೆ ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್‌ನಲ್ಲೂ ವೀಕ್ಷಕರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಭಾರತದ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಭಾರತದ ಪಂದ್ಯಗಳ ಸಮಯ ನಿಗದಿಪಡಿಸಲಾಗಿದೆ. ಇನ್ನುಳಿದ ಬಹುತೇಕ ಪಂದ್ಯಗಳು ಅಮೆರಿಕ ಕಾಲಮಾನದ ಪ್ರಕಾರ ಸಂಜೆ ಹಾಗೂ ರಾತ್ರಿ (ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ) ನಡೆಯಲಿರುವ ಕಾರಣ ಟೀವಿ ಪ್ರೇಕ್ಷಕರು ಕಡಿಮೆಯಾಗಿದ್ದಾರೆ. ಹೀಗಾಗಿ ಸದ್ಯ ಆಯೋಜಕರು ಭಾರತ-ಪಾಕ್ ಪಂದ್ಯವನ್ನೇ ನೆಚ್ಚಿಕೊಂಡಿದ್ದು, ಈ ಪಂದ್ಯದ ಮೂಲಕವೇ ಬಹುಪಾಲು ಆದಾಯದ ನಿರೀಕ್ಷೆಯಲ್ಲಿದ್ದಾರೆ ಎಂದು ವರದಿಯಾಗಿದೆ. 10 ಸೆಕೆಂಡ್ ಜಾಹೀರಾತಿಗೆ ಕನಿಷ್ಠ 50 ಲಕ್ಷ ರು. ನಿಗದಿ?