ಕ್ರಿಕೆಟ್‌ ವಿಶ್ವ ಸಮರಕ್ಕೆ ಇಂದು ಚಾಲನೆ

KannadaprabhaNewsNetwork |  
Published : Oct 06, 2023, 01:30 PM ISTUpdated : Oct 07, 2023, 11:40 AM IST
ICC Cricket World Cup Trophy

ಸಾರಾಂಶ

ಅಹಮದಾಬಾದ್‌ನಲ್ಲಿ ಇಂದು ಉದ್ಘಾಟನಾ ಪಂದ್ಯ

-13ನೇ ಆವೃತ್ತಿಯ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿ ಅಹಮದಾಬಾದ್‌: 4 ವರ್ಷಗಳ ಹಿಂದೆ ಕ್ರಿಕೆಟ್‌ ಕಾಶಿ ಲಾರ್ಡ್ಸ್‌ನಲ್ಲಿ ನ್ಯೂಜಿಲೆಂಡ್‌ ಅನ್ನು ಹಿಂದಿಕ್ಕಿ ಇಂಗ್ಲೆಂಡ್‌ ವಿಶ್ವಕಪ್‌ ಟ್ರೋಫಿಗೆ ಮುತ್ತಿಟ್ಟ ಕ್ಷಣಗಳನ್ನು ಕ್ರಿಕೆಟ್‌ ಅಭಿಮಾನಿಗಳು ಇನ್ನೂ ಮರೆತಿಲ್ಲ. ಅಷ್ಟರಲ್ಲಾಗಲೇ ಮತ್ತೊಂದು ವಿಶ್ವಕಪ್‌ ಬಂದಿದೆ. ಅಭಿಮಾನಿಗಳು ಬಹಳ ನಿರೀಕ್ಷೆಯಿಟ್ಟುಕೊಂಡು ಕಾಯುತ್ತಿದ್ದ ಆ ದಿನ ಬಂದೇ ಬಿಟ್ಟಿದ್ದು, ಗುರುವಾರ 13ನೇ ಆವೃತ್ತಿಯ ಏಕದಿನ ವಿಶ್ವಕಪ್‌ಗೆ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಚಾಲನೆ ದೊರೆಯಲಿದೆ. ಮುಂದಿನ ಒಂದೂವರೆ ತಿಂಗಳ ಕಾಲ ವಿಶ್ವದ 10 ಶ್ರೇಷ್ಠ ತಂಡಗಳು ಟ್ರೋಫಿಗಾಗಿ ಸೆಣಸಲಿದ್ದು, ಪಂದ್ಯದಿಂದ ಪಂದ್ಯಕ್ಕೆ ರೋಚಕತೆ ಹೆಚ್ಚುವ ನಿರೀಕ್ಷೆ ಇದೆ. ವಿಶ್ವ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿರುವ, ಆತಿಥೇಯ ಭಾರತ ಪ್ರಶಸ್ತಿ ಗೆಲ್ಲುವ ಫೇವರಿಟ್‌ ಎನಿಸಿ ಕಣಕ್ಕಿಳಿಯಲಿದ್ದು, ಹಾಲಿ ಚಾಂಪಿಯನ್‌ ಇಂಗ್ಲೆಂಡ್‌, 5 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಸಹ ಬಲಿಷ್ಠವಾಗಿ ತೋರುತ್ತಿವೆ. ಬೆಂಗಳೂರು ಸೇರಿ ಭಾರತದ ಒಟ್ಟು 10 ನಗರಗಳು, ಒಟ್ಟು 49 ಪಂದ್ಯಗಳಿಗೆ ಆತಿಥ್ಯ ವಹಿಸಲಿವೆ. ಹೈದರಾಬಾದ್‌ ಹೊರತುಪಡಿಸಿ ಉಳಿದೆಲ್ಲಾ ನಗರಗಳಲ್ಲಿ ತಲಾ 5 ಪಂದ್ಯಗಳು ನಡೆಯಲಿದ್ದು, ಹೈದರಾಬಾದ್‌ನ ರಾಜೀವ್‌ ಗಾಂಧಿ ಕ್ರೀಡಾಂಗಣ 3 ಪಂದ್ಯಗಳಿಗೆ ವೇದಿಕೆಯಾಗಲಿದೆ. ಸೆಮಿಫೈನಲ್‌ ಪಂದ್ಯಗಳು ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಹಾಗೂ ಮುಂಬೈನ ವಾಂಖೇಡೆ ಕ್ರೀಡಾಂಗಣಗಳಲ್ಲಿ ನಡೆಯಲಿದ್ದು, ಫೈನಲ್‌ ಪಂದ್ಯವು ಅಹಮದಾಬಾದ್‌ನಲ್ಲಿ ನಿಗದಿಯಾಗಿದೆ. 70 ಮೀ. ಬೌಂಡರಿ ಪಂದ್ಯಗಳು ಸ್ಪರ್ಧಾತ್ಮಕವಾಗಿರಬೇಕು ಎನ್ನುವ ಕಾರಣಕ್ಕೆ ಐಸಿಸಿ ಎಲ್ಲಾ ಕ್ರೀಡಾಂಗಣಗಳನ್ನು ಬೌಂಡರಿಗಳ ಅಳತೆಯನ್ನು ಕನಿಷ್ಠ 70 ಮೀ. ದೂರ ಇಡುವಂತೆ ಸೂಚಿಸಿದೆ ಎನ್ನಲಾಗಿದೆ. ಸಂಜೆ ವೇಳೆ ಇಬ್ಬನಿ ಬೀಳಲಿರುವ ಕಾರಣ, ಪಿಚ್‌ ಮೇಲೆ ಹೆಚ್ಚು ತೇವಾಂಶವಿರದಂತೆ ನೋಡಿಕೊಳ್ಳಲು ಹೆಚ್ಚಿಗೆ ಪ್ರಮಾಣದ ಹುಲ್ಲು ಬಿಡುವಂತೆಯೂ ಐಸಿಸಿ ಕ್ಯೂರೇಟರ್‌ಗಳಿಗೆ ಸೂಚನೆ ನೀಡಿದೆ ಎಂದು ತಿಳಿಬಂದಿದೆ. ರದ್ದಾದ ಉದ್ಘಾಟನಾ ಸಮಾರಂಭ ನ.4ರಂದು ಅದ್ಧೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆಕರ್ಷಕ ವೇದಿಕೆ ಸಿದ್ಧಗೊಳ್ಳುತ್ತಿರುವ ಚಿತ್ರಗಳೂ ಬಿತ್ತರವಾಗಿದ್ದವು. ಆದರೆ ಕಾರಣ ನೀಡದೆ ಐಸಿಸಿ-ಬಿಸಿಸಿಐ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದವು. ಬುಧವಾರ ಎಲ್ಲಾ 10 ನಾಯಕರು ಮಾಧ್ಯಮ ಸಂವಾದಲ್ಲಿ ಪಾಲ್ಗೊಂಡು ವಿಶ್ವಕಪ್‌ ಬಗ್ಗೆ ಅನಿಸಿಕೆ, ಅಭಿಪ್ರಾಯಗಳನ್ನು ಹಂಚಿಕೊಂಡರು.

PREV

Recommended Stories

ಭಾರತದ ‘ಬಾಜ್‌ಬಾಲ್‌’ ಆಟಕ್ಕೆ ಬೆಚ್ಚಿದ ಇಂಗ್ಲೆಂಡ್‌!
ಮಳೆಯ ನಡುವೆ ಜಾರಿ ಬಿದ್ದ ಟೀಂ ಇಂಡಿಯಾ!