3 ವರ್ಷ ಬಳಿಕ ಭಾರತ ವನಿತಾ ತಂಡಕ್ಕೆ ಟೆಸ್ಟ್‌!

KannadaprabhaNewsNetwork |  
Published : Dec 14, 2023, 01:30 AM IST

ಸಾರಾಂಶ

2021ರ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ಟೆಸ್ಟ್‌ ಪಂದ್ಯವೊಂದನ್ನು ಆಡಿದ್ದ ಭಾರತ ಮಹಿಳಾ ಕ್ರಿಕೆಟ್‌ ತಂಡ, 3 ವರ್ಷಗಳ ಬಳಿಕ ಮತ್ತೊಮ್ಮೆ ಕ್ರಿಕೆಟ್‌ನ ಸಾಂಪ್ರಾದಾಯಿಕ ಮಾದರಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ.ಇಲ್ಲಿನ ಡಿ.ವೈ.ಪಾಟೀಲ್‌ ಕ್ರೀಡಾಂಗಣದಲ್ಲಿ ಗುರುವಾರದಿಂದ ಇಂಗ್ಲೆಂಡ್‌ ವಿರುದ್ಧದ ಏಕೈಕ ಟೆಸ್ಟ್‌ (4 ದಿನಗಳ ಪಂದ್ಯ) ಆರಂಭಗೊಳ್ಳಲಿದ್ದು, ಇದೇ ಮೊದಲ ಬಾರಿಗೆ ಹರ್ಮನ್‌ಪ್ರೀತ್‌ ಕೌರ್‌ ಈ ಮಾದರಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ನವಿ ಮುಂಬೈ: 2021ರ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ಟೆಸ್ಟ್‌ ಪಂದ್ಯವೊಂದನ್ನು ಆಡಿದ್ದ ಭಾರತ ಮಹಿಳಾ ಕ್ರಿಕೆಟ್‌ ತಂಡ, 3 ವರ್ಷಗಳ ಬಳಿಕ ಮತ್ತೊಮ್ಮೆ ಕ್ರಿಕೆಟ್‌ನ ಸಾಂಪ್ರಾದಾಯಿಕ ಮಾದರಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ.

ಇಲ್ಲಿನ ಡಿ.ವೈ.ಪಾಟೀಲ್‌ ಕ್ರೀಡಾಂಗಣದಲ್ಲಿ ಗುರುವಾರದಿಂದ ಇಂಗ್ಲೆಂಡ್‌ ವಿರುದ್ಧದ ಏಕೈಕ ಟೆಸ್ಟ್‌ (4 ದಿನಗಳ ಪಂದ್ಯ) ಆರಂಭಗೊಳ್ಳಲಿದ್ದು, ಇದೇ ಮೊದಲ ಬಾರಿಗೆ ಹರ್ಮನ್‌ಪ್ರೀತ್‌ ಕೌರ್‌ ಈ ಮಾದರಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ನಲ್ಲಿ ಭಾರತ ಅತ್ಯುತ್ತಮ ದಾಖಲೆ ಹೊಂದಿದ್ದು, 1986ರಿಂದ ಈ ವರೆಗೂ ಆಡಿರುವ 14 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನಷ್ಟೇ ಸೋತಿದೆ. ಭಾರತ ತನ್ನ ಸ್ಪಿನ್‌ ದಾಳಿಯ ಮೂಲಕ ಇಂಗ್ಲೆಂಡ್‌ ವಿರುದ್ದದ ದಾಖಲೆಯನ್ನು ಮುಂದುವರಿಸಲು ಎದುರು ನೋಡುತ್ತಿದೆ. ಉಭಯ ತಂಡಗಳು ಕೊನೆಯ ಬಾರಿಗೆ 2021ರ ಜೂನ್‌ನಲ್ಲ ಬ್ರಿಸ್ಟಲ್‌ನಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು.

ಕರ್ನಾಟಕದ ಯುವ ಆರಂಭಿಕ ಆಟಗಾರ್ತಿ ಶುಭಾ ಸತೀಶ್‌ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಲು ಉತ್ಸುಕಗೊಂಡಿದ್ದು, ಹಿರಿಯ ಸ್ಪಿನ್ನರ್‌ ರಾಜೇಶ್ವರಿ ಗಾಯಕ್ವಾಡ್‌ ಸಹ ತಂಡದಲ್ಲಿದ್ದಾರೆ. ಸ್ಮೃತಿ ಮಂಧನಾ, ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗ್ಸ್‌, ದೀಪ್ತಿ ಶರ್ಮಾರಂತಹ ಅನುಭವಿಗಳ ಬಲ ಭಾರತಕ್ಕಿದೆ. ಪಂದ್ಯ ಆರಂಭ: ಬೆಳಗ್ಗೆ 9.30ಕ್ಕೆ, ನೇರ ಪ್ರಸಾರ: ಸ್ಪೋರ್ಟ್ಸ್‌ 18, ಜಿಯೋ ಸಿನಿಮಾ

PREV
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.

Recommended Stories

ಬಹಿಷ್ಕಾರದಿಂದ ಪಾಕ್‌ ಯೂಟರ್ನ್‌ ?ಭಾರತ ಜತೆ ಟಿ 20 ಪಂದ್ಯದ ಕುರಿತು ಇಂದು ಘೋಷಣೆ ?
ಮುಳುಗುತ್ತಿದ್ದ ಭಾರತಕ್ಕೆ ಬೆಳಕಾದ ‘ಸೂರ್ಯ’!