ಪಾಕ್‌ ಪಂದ್ಯಕ್ಕೆ ಮುನ್ನ ಭಾರತಕ್ಕೆ ನಮೀಬಿಯಾ ವಿರುದ್ಧ ರಿಹರ್ಸಲ್

Published : Feb 12, 2026, 12:13 PM IST
Team India

ಸಾರಾಂಶ

ಫೆ.15ರಂದು ನಡೆಯಬೇಕಿರುವ ಬದ್ಧವೈರಿ ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್‌ ಪಂದ್ಯಕ್ಕೂ ಮುನ್ನ ರಿಹರ್ಸಲ್‌ ಎಂಬಂತೆ ಭಾರತ ತಂಡ ಈ ಬಾರಿ ಟಿ20 ವಿಶ್ವಕಪ್‌ನ ತನ್ನ 2ನೇ ಪಂದ್ಯದಲ್ಲಿ ಗುರುವಾರ ನಮೀಬಿಯಾ ವಿರುದ್ಧ ಕಣಕ್ಕಿಳಿಯಲಿದೆ.

 ನವದೆಹಲಿ: ಫೆ.15ರಂದು ನಡೆಯಬೇಕಿರುವ ಬದ್ಧವೈರಿ ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್‌ ಪಂದ್ಯಕ್ಕೂ ಮುನ್ನ ರಿಹರ್ಸಲ್‌ ಎಂಬಂತೆ ಭಾರತ ತಂಡ ಈ ಬಾರಿ ಟಿ20 ವಿಶ್ವಕಪ್‌ನ ತನ್ನ 2ನೇ ಪಂದ್ಯದಲ್ಲಿ ಗುರುವಾರ ನಮೀಬಿಯಾ ವಿರುದ್ಧ ಕಣಕ್ಕಿಳಿಯಲಿದೆ. ತಂಡ ಸತತ 2ನೇ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಕಾತರದಲ್ಲಿದೆ.

‘ಎ’ ಗುಂಪಿನಲ್ಲಿರುವ ಹಾಲಿ ಚಾಂಪಿಯನ್‌ ಭಾರತ ತನ್ನ ಆರಂಭಿಕ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಗೆದ್ದಿತ್ತು. ಹೆಚ್ಚಿನ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿದಿದ್ದ ತಂಡಕ್ಕೆ ಗೆಲುವೇನೂ ಸುಲಭದಲ್ಲಿ ಸಿಕ್ಕಿರಲಿಲ್ಲ. ಬ್ಯಾಟಿಂಗ್‌ನಲ್ಲಿ ವೈಫಲ್ಯ ಕಂಡ ತಂಡಕ್ಕೆ ನೆರವಾಗಿದ್ದು ನಾಯಕ ಸೂರ್ಯಕುಮಾರ್‌ ಯಾದವ್‌. ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ತಂಡ 9 ವಿಕೆಟ್‌ ಕೂಡಾ ಕಳೆದುಕೊಂಡಿತ್ತು. ಆದರೆ ಬೌಲಿಂಗ್‌ನಲ್ಲಿ ಮೇಲುಗೈ ಸಾಧಿಸಿದ್ದರಿಂದ ತಂಡಕ್ಕೆ ಗೆಲುವು ಲಭಿಸಿತ್ತು.

ಪಾಕ್‌ ವಿರುದ್ಧ ಪಂದ್ಯದಲ್ಲಿ ತುಂಬು ಆತ್ಮವಿಶ್ವಾಸದೊಂದಿಗೆ ಆಡಬೇಕಿದ್ದರೆ ಭಾರತಕ್ಕೆ ನಮೀಬಿಯಾ ವಿರುದ್ಧ ಬೃಹತ್‌ ಗೆಲುವು ಅಗತ್ಯವಿದೆ. ಬ್ಯಾಟಿಂಗ್ ವಿಭಾಗ ತನ್ನ ಎಂದಿನ ಲಯಕ್ಕೆ ಮರಳಬೇಕಿದ್ದು, ಸೂರ್ಯಕುಮಾರ್‌ ಮಾತ್ರವಲ್ಲದೆ ತಿಲಕ್‌ ವರ್ಮಾ, ಇಶಾನ್‌ ಕಿಶನ್‌, ಶಿವಂ ದುಬೆ, ಹಾರ್ದಿಕ್‌, ರಿಂಕು ಸಿಂಗ್‌ ಬ್ಯಾಟ್‌ನಿಂದ ರನ್‌ ಹರಿದುಬರಬೇಕಿದೆ. ಕಳೆದ ಪಂದ್ಯಕ್ಕೆ ಗೈರಾಗಿದ್ದ ಜಸ್‌ಪ್ರೀತ್‌ ಬೂಮ್ರಾ ಈ ಪಂದ್ಯದಲ್ಲಿ ಆಡಲಿದ್ದು, ಅವರ ಬದಲು ಆಡಿದ್ದ ಸಿರಾಜ್‌ ಈ ಪಂದ್ಯದಲ್ಲಿ ಹೊರಗುಳಿಯಬೇಕಾಗುತ್ತದೆ.

ಮತ್ತೊಂದೆಡೆ ನಮೀಬಿಯಾ ಆರಂಭಿಕ ಪಂದ್ಯದಲ್ಲಿ ನೆದರ್‌ಲೆಂಡ್ಸ್‌ ವಿರುದ್ಧ ಸೋತಿತ್ತು. ತಂಡದ ಅಗ್ರ-6 ಬ್ಯಾಟರ್‌ಗಳ ಪೈಕಿ ಜೆಜೆ ಸ್ಮಿತ್‌ ಮಾತ್ರ 140+ ಸ್ಟ್ರೈಕ್‌ರೇಟ್‌ ಹೊಂದಿದ್ದಾರೆ. ಭಾರತ ವಿರುದ್ಧ ಯಾವ ರೀತಿ ಬ್ಯಾಟಿಂಗ್‌ ಪ್ರದರ್ಶನ ನೀಡಲಿದ್ದಾರೆ ಎಂದು ಕುತೂಹಲವಿದೆ.

ಡಿಸ್ಚಾರ್ಜ್‌ ಆದರೂ ಅಭಿ ಪಂದ್ಯಕ್ಕೆ ಗೈರು?

ಅನಾರೋಗ್ಯಕ್ಕೆ ತುತ್ತಾಗಿರುವ ಅಭಿಷೇಕ್‌ ಶರ್ಮಾ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದರೆ ಅವರನ್ನು ಈ ಪಂದ್ಯದಲ್ಲಿ ಆಡಿಸಲಾಗುತ್ತದೆಯೇ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ. ಅವರಿಗೆ ವಿಶ್ರಾಂತಿ ನೀಡಿದರೆ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಗಬಹುದು.

01 ಬಾರಿ ಮುಖಾಮುಖಿ

ಭಾರತ-ನಮೀಬಿಯಾ ಟಿ20ಯಲ್ಲಿ ಒಮ್ಮೆ ಮಾತ್ರ ಮುಖಾಮುಖಿಯಾಗಿವೆ. 2021ರ ವಿಶ್ವಕಪ್‌ ಪಂದ್ಯದಲ್ಲಿ ಭಾರತ 9 ವಿಕೆಟ್‌ನಿಂದ ಗೆದ್ದಿತ್ತು.

ಇಂದಿನ ಪಂದ್ಯಗಳು

ಶ್ರೀಲಂಕಾ-ಒಮಾನ್‌, ಬೆಳಗ್ಗೆ 11ಕ್ಕೆ(ಪಲ್ಲೆಕೆಲೆ)

ನೇಪಾಳ-ಇಟಲಿ, ಮಧ್ಯಾಹ್ನ 3ಕ್ಕೆ (ಮುಂಬೈ)

ಭಾರತ-ನಮೀಬಿಯಾ, ಸಂಜೆ 7ಕ್ಕೆ (ನವದೆಹಲಿ)

PREV
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.
Read more Articles on

Recommended Stories

ಭಾರತ ವಿರುದ್ಧ ಪಂದ್ಯಕ್ಕೆ ಪಾಕ್‌ನ ಮನವೊಲಿಸಿ ಐಸಿಸಿ ಈಗ ನಿರಾಳ : ಭಾರೀ ನಷ್ಟದಿಂದ ಪಾರು
ಮೋದಿಯನ್ನು ಭೇಟಿಯಾಗಿ ಪುತ್ರನ ಮದುವೆಗೆ ಆಹ್ವಾನ ನೀಡಿದ ಸಚಿನ್