ಮೆಲ್ಬರ್ನ್: ವಿಶ್ವ ನಂ.1 ನೋವಾಕ್ ಜೋಕೋವಿಚ್‌ರ ಗ್ರ್ಯಾನ್‌ಸ್ಲಾಂ ಗೆಲುವಿನ ಓಟ ಮುಂದುವರಿದಿದೆ. ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ 10 ಬಾರಿ ಚಾಂಪಿಯನ್, ಸರ್ಬಿಯಾದ ಜೋಕೋವಿಚ್ ಭಾನುವಾರ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಇದು ಜೋಕೋಗೆ ಆಸ್ಟ್ರೇಲಿಯನ್ ಓಪನ್‌ನಲ್ಲಿ 14ನೇ, ಒಟ್ಟಾರೆ ಗ್ರ್ಯಾನ್‌ಸ್ಲಾಂನಲ್ಲಿ 58ನೇ ಕ್ವಾರ್ಟರ್. ಈ ಮೂಲಕ ಅತಿಹೆಚ್ಚು ಬಾರಿ ಗ್ರ್ಯಾನ್‌ಸ್ಲಾಂ ಕ್ವಾರ್ಟರ್‌ಗೇರಿದ್ದ ಸ್ವಿಜರ್‌ಲೆಂಡ್‌ನ ರೋಜರ್ ಫೆಡರರ್ ದಾಖಲೆ ಸರಿಗಟ್ಟಿದ್ದಾರೆ.ಪುರುಷರ ಸಿಂಗಲ್ಸ್ 4ನೇ ಸುತ್ತಿನಲ್ಲಿ 24 ಗ್ರ್ಯಾನ್‌ಸ್ಲಾಂಗಳ ಒಡೆಯ ಜೋಕೋ ಭಾನುವಾರ ಫ್ರಾನ್ಸ್‌ನ ಆ್ಯಡ್ರಿಯನ್ ಮನ್ನಾರಿನೊ ವಿರುದ್ಧ 6-0, 6-0, 6-3 ನೇರ ಸೆಟ್‌ಗಳಲ್ಲಿ ಸುಲಭ ಗೆಲುವು ಸಾಧಿಸಿದರು. ಕ್ವಾರ್ಟರ್‌ನಲ್ಲಿ ಅವರಿಗೆ 12ನೇ ಶ್ರೇಯಾಂಕಿತ, ಅಮೆರಿಕದ ಟೇಲರ್ ಫ್ರಿಟ್ಜ್ ಸವಾಲು ಎದುರಾಗಲಿದೆ. ಪ್ರಿಟ್ಜ್ ಪ್ರಿ ಕ್ವಾರ್ಟರ್‌ನಲ್ಲಿ ಕಳೆದ ಬಾರಿ ರನ್ನರ್-ಅಪ್ ಸ್ಟೆಫಾನೊಸ್ ಸಿಟ್ಸಿಪಾಸ್‌ರನ್ನು ಮಣಿಸಿದರು. ಇದೇ ವೇಳೆ 4ನೇ ಶ್ರೇಯಾಂಕಿತ, ಇಟಲಿಯ ಜಾನಿಕ್ ಸಿನ್ನರ್, 5ನೇ ಶ್ರೇಯಾಂಕಿತ ಆ್ಯಂಡ್ರೆ ರುಬ್ಲೆವ್ ಕೂಡಾ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.-ಸಬಲೆಂಕಾಗೆ ಮುನ್ನಡೆ