ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕೆಎಂಎಫ್‌ ಪ್ರಾಯೋಜಕತ್ವ

KannadaprabhaNewsNetwork |  
Published : Apr 21, 2024, 02:17 AM ISTUpdated : Apr 21, 2024, 04:15 AM IST
202ರ ಟಿ20 ವಿಶ್ವಕಪ್‌ನಲ್ಲಿ ಐರ್ಲೆಂಡ್‌, ನೆದರ್‌ಲೆಂಡ್ಸ್‌ ತಂಡಗಳಿಗೆ ಪ್ರಾಯೋಜಕತ್ವ ನೀಡಲಿರುವ ಕೆಎಂಎಫ್‌.  | Kannada Prabha

ಸಾರಾಂಶ

2024ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಆಡಲಿರುವ ಐರ್ಲೆಂಡ್‌ ಹಾಗೂ ಸ್ಕಾಟ್ಲೆಂಡ್‌ ತಂಡಗಳಿಗೆ ಪ್ರಾಯೋಜಕತ್ವ ನೀಡಲಿರುವ ಕೆಎಂಎಫ್‌. ಇದೇ ಮೊದಲ ಬಾರಿಗೆ ಕ್ರಿಕೆಟ್‌ ತಂಡಕ್ಕೆ ಪ್ರಾಯೋಜಕತ್ವ. ಜೂ.1ರಿಂದ ನಡೆಯಲಿರುವ ಟಿ20 ವಿಶ್ವಕಪ್‌.

 ಬೆಂಗಳೂರು :  ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್‌) ಜೂ.1ರಿಂದ 29ರ ವರೆಗೂ ವೆಸ್ಟ್‌ಇಂಡೀಸ್‌, ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಐರ್ಲೆಂಡ್‌ ಹಾಗೂ ಸ್ಕಾಟ್ಕೆಂಡ್‌ ತಂಡಗಳಿಗೆ ಪ್ರಾಯೋಜಕತ್ವ ನೀಡಲಿದೆ. ಕ್ರಿಕೆಟ್‌ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡುತ್ತಿರುವುದು ಇದೇ ಮೊದಲು.

ಈ ಬೆಳವಣಿಗೆಯನ್ನು ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಖಚಿತಪಡಿಸಿರುವ ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್‌ ಅವರು, ‘ಶನಿವಾರ (ಏ.20)ರಂದು ಒಪ್ಪಂದ ಅಧಿಕೃತಗೊಂಡಿದೆ. ಸ್ಕಾಟ್ಲೆಂಡ್‌ ಹಾಗೂ ಐರ್ಲೆಂಡ್‌ ತಂಡಗಳ ಆಟಗಾರರ ಜೆರ್ಸಿಯ ತೋಳಿನ ಭಾಗ (ಉದಾ. ಬಲಗೈ ಆಟಗಾರನ ಎಡ ತೋಳು, ಎಡಗೈ ಆಟಗಾರ ಬಲ ತೋಳು)ದ ಮೇಲೆ ಕೆಎಂಎಫ್‌ನ ಲೋಗೋ ಇರಲಿದೆ. ಈ ಎರಡೂ ತಂಡಗಳ ಆಟಗಾರರು ನಂದಿನಿ ಉತ್ಪನ್ನಗಳ ಜಾಹೀರಾತು, ಸಾಮಾಜಿಕ ತಾಣಗಳಲ್ಲಿ ನಡೆಸುವ ಅಭಿಯಾನ, ಫೋಟೋಶೂಟ್‌ಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವಕಪ್‌ ವೇಳೆ ಜಾಹೀರಾತುಗಳು ಪ್ರಸಾರಗೊಳ್ಳಲಿವೆ. ಇದು ಕರ್ನಾಟಕದಲ್ಲಿರುವ ಪ್ರತಿಯೊಬ್ಬರಿಗೂ ಹೆಮ್ಮೆಯ ಸಂಗತಿ ಎನಿಸಿದೆ’ ಎಂದಿದ್ದಾರೆ.

‘ವಿಶ್ವಕಪ್‌ ವೇಳೆ ಕೆಎಂಎಫ್‌ನ ಉತ್ಪನ್ನಗಳು ಅಮೆರಿಕದಲ್ಲಿ ಲಭ್ಯವಿರಲಿದ್ದು, ಕರ್ನಾಟಕದ ಬ್ರ್ಯಾಂಡ್‌ಗೆ ಜಾಗತಿಕ ಮನ್ನಣೆ ಸಿಗುವಂತೆ ಮಾಡುವುದು ನಮ್ಮ ಗುರಿ’ ಎಂದು ಜಗದೀಶ್‌ ಹೇಳಿದ್ದಾರೆ.

ಕಳೆದ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ನಲ್ಲಿ ಬೆಂಗಳೂರು ಬುಲ್ಸ್‌ ತಂಡಕ್ಕೆ ಕೆಎಂಎಫ್‌ ಪ್ರಾಯೋಜಕತ್ವ ನೀಡಿತ್ತು. ಸದ್ಯ ನಡೆಯುತ್ತಿರುವ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಪ್ರಾಯೋಜಕತ್ವ ಪಡೆಯಲು ಪ್ರಯತ್ನಿಸಿದರೂ, ತಂಡ ನಿಗದಿಪಡಿಸಿರುವ ದುಬಾರಿ ಮೊತ್ತವನ್ನು ಭರಿಸುವುದು ಕಷ್ಟವೆನಿಸಿದ ಕಾರಣ ಯೋಜನೆಯನ್ನು ಕೈಬಿಡಲಾಯಿತು ಎಂದು ಜಗದೀಶ್‌ ಮಾಹಿತಿ ಹಂಚಿಕೊಂಡಿದ್ದಾರೆ.

PREV
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.

Recommended Stories

ಕಪ್‌ತುಳಿತ ತನಿಖಾ ವರದಿ ಹೈಕೋರ್ಟ್‌ ಪರಾಮರ್ಶೆಗೆ
₹10 ಲಕ್ಷ ಕೊಡಿ, ಮೆಸ್ಸಿ ಜೊತೆಗೆ ಒಂದು ಫೋಟೋ ತೆಗೆಸಿಕೊಳ್ಳಿ!