ಚೆಂಡಿಗೆ ಆಟಗಾರರು ಚೆಂಡಿಗೆ ಎಂಜಲು ಹಾಕಲು ಅವಕಾಶ : ಕೋವಿಡ್‌ನಿಂದಾಗಿ ನಿಷೇಧಿಸಿತ್ತು

Published : Mar 20, 2025, 01:23 PM IST
Cricket Ball

ಸಾರಾಂಶ

ಮಾ.22ರಿಂದ ಆರಂಭಗೊಳ್ಳಲಿರುವ ಐಪಿಎಲ್‌ 18ನೇ ಆವೃತ್ತಿಯಲ್ಲಿ ಆಟಗಾರರು ಚೆಂಡಿಗೆ ಎಂಜಲು ಹಾಕಲು ಅವಕಾಶ ನೀಡುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸಿದೆ.

 ನವದೆಹಲಿ: ಮಾ.22ರಿಂದ ಆರಂಭಗೊಳ್ಳಲಿರುವ ಐಪಿಎಲ್‌ 18ನೇ ಆವೃತ್ತಿಯಲ್ಲಿ ಆಟಗಾರರು ಚೆಂಡಿಗೆ ಎಂಜಲು ಹಾಕಲು ಅವಕಾಶ ನೀಡುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸಿದೆ. ಈ ಬಗ್ಗೆ ಗುರುವಾರ ನಡೆಯಲಿರುವ ನಾಯಕರ ಸಭೆಯಲ್ಲಿ ಪ್ರಸ್ತಾಪಿಸಲು ಬಿಸಿಸಿಐ ನಿರ್ಧರಿಸಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

ಕೋವಿಡ್‌ನಿಂದಾಗಿ ಚೆಂಡಿಗೆ ಎಂಜಲು ಹಾಕುವುದನ್ನು ಐಸಿಸಿ ನಿಷೇಧಿಸಿತ್ತು. ಈ ನಿಯಮವನ್ನು ಬಿಸಿಸಿಐ, ಐಪಿಎಲ್‌ನಲ್ಲೂ ಅಳವಡಿಸಿತ್ತು. ಒಂದು ವೇಳೆ ಐಪಿಎಲ್‌ನಲ್ಲಿ ಚೆಂಡಿಗೆ ಎಂಜಲು ಹಾಕಲು ಅನುಮತಿ ನೀಡಿದರೆ, ಐಸಿಸಿ ಸಹ ತನ್ನ ನಿಯಮವನ್ನು ಬದಲಿಸಬೇಕಾಗಬಹುದು ಎಂದು ಹೇಳಲಾಗುತ್ತಿದೆ.

PREV

Recommended Stories

ಸದ್ಯಕ್ಕೆ ನಿಲ್ಲಲ್ಲ ‘ನೋ ಶೇಕ್‌ ಹ್ಯಾಂಡ್‌’ ವಾರ್‌! ಪಾಕಿಸ್ತಾನ ಆಕ್ಷೇಪ
ಕ್ರಿಕೆಟ್‌ ವಾರ್‌ನಲ್ಲೂ ಭಾರತಕ್ಕೆ ಶರಣಾದ ಪಾಕ್‌