ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಯಾರು ನಾಯಕ?: ಗೊಂದಲಕ್ಕೆ ತೆರೆ ಎಳೆದ ಜಯ್‌ ಶಾ

KannadaprabhaNewsNetwork |  
Published : Feb 15, 2024, 01:15 AM ISTUpdated : Feb 15, 2024, 09:17 AM IST
ಭಾರತ ತಂಡ | Kannada Prabha

ಸಾರಾಂಶ

ಟೀಮ್ ಇಂಡಿಯಾದ ಹಿರಿಯ ಆಟಗಾರರು ಜೂನ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಆಡುತ್ತಾರೋ, ಇಲ್ಲವೋ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.

ರಾಜ್‌ಕೋಟ್‌: ಟೀಮ್ ಇಂಡಿಯಾದ ಹಿರಿಯ ಆಟಗಾರರು ಜೂನ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಆಡುತ್ತಾರೋ, ಇಲ್ಲವೋ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. 

ಅದರಲ್ಲೂ ಭಾರತ ತಂಡ ನಾಯಕ ಯಾರು ಎಂಬ ಕುತೂಹಲ ಕೂಡಾ ಅಭಿಮಾನಿಗಳಲ್ಲಿ ಇತ್ತು. ಇದಕ್ಕೆ ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಉತ್ತರ ನೀಡಿದ್ದಾರೆ.

ವೆಸ್ಟ್‌ ಇಂಡೀಸ್‌ ಹಾಗೂ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ನಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ತಿಳಿಸಿದ್ದಾರೆ. 

ಅಲ್ಲದೆ ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ತಂಡ ಖಂಡಿತವಾಗಿಯೂ ಯಶಸ್ವಿಯಾಗಲಿದೆ ಎಂದು ಜಯ್ ಶಾ ಭರವಸೆ ವ್ಯಕ್ತಪಡಿಸಿದ್ದಾರೆ. 

ರಾಜ್‌ಕೋಟ್‌ ಕ್ರೀಡಾಂಗಣಕ್ಕೆ ಮರು ನಾಮಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದರೂ ಫೈನಲ್‌ನಲ್ಲಿ ಗೆಲ್ಲಲಾಗಲಿಲ್ಲ. 

ಸತತ 9 ಪಂದ್ಯ ಗೆದ್ದರೂ ವಿಶ್ವಕಪ್‌ ಸಿಗಲಿಲ್ಲ. ಆದರೆ ನಾವು ಎಲ್ಲರ ಪ್ರೀತಿ ಗಳಿಸಿದ್ದೇವೆ. ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಬಾರ್ಬಡೊಸ್(ಫೈನಲ್‌ ನಡೆಯುವ ಕ್ರೀಡಾಂಗಣ)ನಲ್ಲಿ ರೋಹಿತ್‌ ಶರ್ಮಾ ನಾಯಕತ್ವದಲ್ಲಿ ನಾವು ಭಾರತದ ತ್ರಿವರ್ಣ ಧ್ವಜ ಹಾರಿಸುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಟಿ20 ವಿಶ್ವಕಪ್‌ ಸೋಲಿನ ಬಳಿಕ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು ಟಿ20 ಕ್ರಿಕೆಟ್‌ನಲ್ಲಿ ಮುನ್ನಡೆಸುತ್ತಿದ್ದರು. 

ಇತ್ತೀಚೆಗಷ್ಟೇ ಅಂದರೆ ಜನವರಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 14 ತಿಂಗಳ ನಂತರ ಟಿ20 ತಂಡಕ್ಕೆ ಮರಳಿ, ಅಫ್ಘಾನಿಸ್ತಾನ ವಿರುದ್ಧದ ಸರಣಿ ಆಡಿದ್ದರು. 

ಆ ಬಳಿಕ ಮುಂದಿನ ಟಿ20 ವಿಶ್ವಕಪ್‌ನಲ್ಲೂ ರೋಹಿತ್ ಶರ್ಮಾ ಭಾರತದ ನಾಯಕತ್ವ ವಹಿಸಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿತ್ತು.

PREV

Recommended Stories

ಭಾರತ-ಇಂಗ್ಲೆಂಡ್‌ ಸರಣಿ ಕ್ಲೈಮ್ಯಾಕ್ಸ್‌ ಇಂದು !
ವಯೋ ವಂಚನೆ ಪತ್ತೆಗೆ ಖಾಸಗಿ ಸಂಸ್ಥೆ ನೆರವುಪಡೆಯಲಿದೆ ಬಿಸಿಸಿಐ