2025ರ ಐಪಿಎಲ್‌ ಮೊದಲ ಪಂದ್ಯದಿಂದ ಪಾಂಡ್ಯ ಔಟ್‌!

KannadaprabhaNewsNetwork |  
Published : May 19, 2024, 01:52 AM ISTUpdated : May 19, 2024, 04:18 AM IST
ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧದ ಪಂದ್ಯದಲ್ಲಿ ಮುಂಬೈ ನಿಧಾನಗತಿ ಬೌಲಿಂಗ್‌ ಮಾಡಿದ್ದಕ್ಕೆ ನಾಯಕ ಹಾರ್ದಿಕ್‌ ಪಾಂಡ್ಯ ವಿರುದ್ಧ ಕಠಿಣ ಕ್ರಮ. | Kannada Prabha

ಸಾರಾಂಶ

2024ರ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ 3 ಬಾರಿ ನಿಧಾನಗತಿ ಬೌಲಿಂಗ್‌ ಮಾಡಿದ್ದಕ್ಕೆ ನಾಯಕ ಹಾರ್ದಿಕ್‌ ಪಾಂಡ್ಯಗೆ ಬಿತ್ತು ಭಾರಿ ದಂಡ. ಮುಂದಿನ ಆವೃತ್ತಿಯ ಮೊದಲ ಪಂದ್ಯದಿಂದ ಪಾಂಡ್ಯ ಔಟ್‌.

ಮುಂಬೈ: ಶುಕ್ರವಾರ ನಡೆದ ಲಖನೌ ವಿರುದ್ಧದ ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್‌ ಮಾಡಿದ್ದಕ್ಕೆ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್ ಪಾಂಡ್ಯಗೆ ₹30 ಲಕ್ಷ ದಂಡ ವಿಧಿಸಲಾಗಿದ್ದು, ಒಂದು ಪಂದ್ಯದಿಂದ ಅಮಾನತುಗೊಂಡಿದ್ದಾರೆ. 

ಈ ಆವೃತ್ತಿಯಲ್ಲಿ ಮುಂಬೈನ ಪಂದ್ಯಗಳು ಮುಗಿದಿರುವ ಕಾರಣ, ಮುಂದಿನ ಆವೃತ್ತಿಯ ಐಪಿಎಲ್‌ನ ಮೊದಲ ಪಂದ್ಯದಿಂದ ಹಾರ್ದಿಕ್‌ ಹೊರಗುಳಿಯಲಿದ್ದಾರೆ. ಈ ಬಾರಿ ಐಪಿಎಲ್‌ನಲ್ಲಿ 3ನೇ ಬಾರಿ ನಿಧಾನಗತಿ ಬೌಲಿಂಗ್‌ ಮಾಡಿದ್ದಕ್ಕೆ ಹಾರ್ದಿಕ್‌ ಅಮಾನತು ಶಿಕ್ಷೆಗೆ ಗುರಿಯಾಗಿದ್ದಾರೆ. ಜೊತೆಗೆ ಎಲ್ಲಾ ಆಟಗಾರರಿಗೂ ಪಂದ್ಯದ ಸಂಭಾವನೆಯ ಶೇ.50ರಷ್ಟು ಅಥವಾ ತಲಾ ₹12 ಲಕ್ಷ ದಂಡ ವಿಧಿಸಲಾಗಿದೆ.

PREV
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.

Recommended Stories

ಕ್ರಿಕೆಟ್‌ ‘ವಿಶ್ವ’ ಯುದ್ಧ ಗೆಲ್ಲೋರ್‍ಯಾರು..?
ಫೈನಲ್‌ ಟಿಕೆಟ್‌ಗಾಗಿ ಇಂದು ಕಿವೀಸ್‌ vs ದ.ಆಫ್ರಿಕಾ