ಕೊಹ್ಲಿ ಬಗ್ಗೆ ತಪ್ಪು ಮಾಹಿತಿ ಹಂಚಿದ್ದಕ್ಕೆ ಎಬಿಡಿ ವಿಷಾದ!

KannadaprabhaNewsNetwork |  
Published : Feb 10, 2024, 01:47 AM ISTUpdated : Feb 10, 2024, 02:06 PM IST
ABD Virat

ಸಾರಾಂಶ

ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್‌, ಭಾರತದ ದಿಗ್ಗಜ ವಿರಾಟ್‌ ಕೊಹ್ಲಿ ಬಗ್ಗೆ ತಪ್ಪು ಮಾಹಿತಿ ಹಂಚಿಕೊಂಡಿದ್ದಕ್ಕೆ ವಿಷಾಯ ವ್ಯಕ್ತಪಡಿಸಿದ್ದಾರೆ.

ಜೋಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್‌, ಭಾರತದ ದಿಗ್ಗಜ ವಿರಾಟ್‌ ಕೊಹ್ಲಿ ಬಗ್ಗೆ ತಪ್ಪು ಮಾಹಿತಿ ಹಂಚಿಕೊಂಡಿದ್ದಕ್ಕೆ ವಿಷಾಯ ವ್ಯಕ್ತಪಡಿಸಿದ್ದಾರೆ. 

ಇತ್ತೀಚೆಗೆ ಎಬಿಡಿ ತಮ್ಮ ಯೂಟ್ಯೂಬ್‌ ವಿಡಿಯೋದಲ್ಲಿ ‘ಕೊಹ್ಲಿ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಅವರು ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಆಡುತ್ತಿಲ್ಲ’ ಎಂದಿದ್ದರು. 

ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಬಿಡಿ, ‘ಕೊಹ್ಲಿ ಬದುಕಿನಲ್ಲಿ ಏನಾಗುತ್ತಿದೆ ಎಂದು ನನಗೆ ಗೊತ್ತಿಲ್ಲ. ತಪ್ಪು ಮಾಹಿತಿ ಹಂಚಿಕೊಂಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಅವರು ಆದಷ್ಟು ಬೇಗ ಕ್ರಿಕೆಟ್‌ಗೆ ಮರಳಲಿ ಎಂದು ಆಶಿಸುತ್ತೇನೆ’ ಎಂದಿದ್ದಾರೆ.

ಶ್ರೀಲಂಕಾದ ನಿಸ್ಸಾಂಕ ಡಬಲ್‌ ಸೆಂಚುರಿ!

ಪಲ್ಲೆಕೆಲೆ: ಅಫ್ಘಾನಿಸ್ತಾನ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾದ ಪಥುಂ ನಿಸ್ಸಾಂಕ ದ್ವಿಶತಕ ಬಾರಿಸಿದ್ದಾರೆ. ಈ ಸಾಧನೆ ಮಾಡಿದ ಶ್ರೀಲಂಕಾದ ಮೊದಲ ಹಾಗೂ ವಿಶ್ವದ 10ನೇ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶುಕ್ರವಾರದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ನಿಸ್ಸಾಂಕ ಕೇವಲ 139 ಎಸೆತಗಳಲ್ಲಿ 210 ರನ್‌ ಚಚ್ಚಿದರು. ಇದು ಪುರುಷರ ಏಕದಿನದಲ್ಲಿ ದಾಖಲಾದ 12ನೇ ದ್ವಿಶತಕ. 

ಈ ಮೊದಲು ಭಾರತದ ರೋಹಿತ್‌ ಶರ್ಮಾ(3 ಬಾರಿ), ಸಚಿನ್‌ ತೆಂಡುಲ್ಕರ್‌, ವಿರೇಂದ್ರ ಸೆಹ್ವಾಗ್‌, ಶುಭ್‌ಮನ್‌ ಗಿಲ್‌, ಇಶಾನ್‌ ಕಿಶನ್‌, ನ್ಯೂಜಿಲೆಂಡ್‌ನ ಮಾರ್ಟಿನ್‌ ಗಪ್ಟಿಲ್‌, ವೆಸ್ಟ್‌ಇಂಡೀಸ್‌ನ ಕ್ರಿಸ್ ಗೇಲ್‌, ಪಾಕಿಸ್ತಾನದ ಫಾಖರ್‌ ಜಮಾನ್‌, ಆಸ್ಟ್ರೇಲಿಯಾದ ಗ್ಲೆನ್‌ ಮ್ಯಾಕ್ಸ್‌ವೆಲ್ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ್ದರು.

PREV

Recommended Stories

ಇಂದಿನಿಂದ ರಣಜಿ ಟ್ರೋಫಿ - 91ನೇ ಆವೃತ್ತಿಯ ದೇಸಿ ಪ್ರ.ದರ್ಜೆ ಕ್ರಿಕೆಟ್‌ ಟೂರ್ನಿ
ಗಿಲ್‌ ನಾಯಕತ್ವದಲ್ಲಿ ಮೊದಲ ಸರಣಿ ಜಯ