ಅಥ್ಲೆಟಿಕ್ಸ್ ಕ್ರೀಡಾಕೂಟ: ಎಸ್‌ವಿಪಿ ಶಾಲೆ ರಾಜ್ಯಮಟ್ಟಕ್ಕೆ ಆಯ್ಕೆ

KannadaprabhaNewsNetwork | Published : Oct 19, 2023 12:45 AM

ಸಾರಾಂಶ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಎಸ್‌ವಿಪಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಿಪಟೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಎಸ್‌ವಿಪಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ೩೦೦೦ ಮೀ ಓಟ, ೪೦೦ ಮೀ ಓಟ, ೧೧೦ ಮೀ ಹರ್ಡ್ಸಲ್ಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ೪೦೦ ಮೀಟರ್ ರಿಲೆಯಲ್ಲಿ ದ್ವಿತೀಯ ಸ್ಥಾನ, ೧೫೦೦ ಮೀ ನಲ್ಲಿ ಹಾಗೂ ೮೦೦ ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡು ತಾಲೂಕಿಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಜಿಲ್ಲಾ ದೈಹಿಕ ಶಿಕ್ಷಕ ಅಧೀಕ್ಷಕರಾದ ಪರಮೇಶ್ವರಪ್ಪ, ಶಾಲೆಯ ದೈಹಿಕ ಶಿಕ್ಷಕರಾದ ಉದಯ್‌ಕುಮಾರ್, ಪ್ರಕಾಶ್ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ. ಫೋಟೋ 18-ಟಿಪಿಟಿ1ರಲ್ಲಿ ಕಳುಹಿಸಲಾಗಿದೆ.

Share this article