ಸ್ಥಗಿತಗೊಂಡಿದ್ದ 18ನೇ ಆವೃತ್ತಿ ಮೇ 17ರಂದು ಪುನಾರಂಭ : 17 ಪಂದ್ಯಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Follow Us

ಸಾರಾಂಶ

ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 18ನೇ ಆವೃತ್ತಿ ಮೇ 17ರಂದು ಪುನಾರಂಭಗೊಳ್ಳಲಿದೆ. ಸೋಮವಾರ ಐಪಿಎಲ್‌ ಆಡಳಿತ ಮಂಡಳಿಯು 17 ಪಂದ್ಯಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿತು.

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 18ನೇ ಆವೃತ್ತಿ ಮೇ 17ರಂದು ಪುನಾರಂಭಗೊಳ್ಳಲಿದೆ. ಸೋಮವಾರ ಐಪಿಎಲ್‌ ಆಡಳಿತ ಮಂಡಳಿಯು 17 ಪಂದ್ಯಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿತು.

ಮೇ 17ರಂದು ಆರ್‌ಸಿಬಿ ಹಾಗೂ ಕೋಲ್ಕತಾ ನಡುವೆ ಬೆಂಗಳೂರಿನಲ್ಲಿ ಮೊದಲ ಪಂದ್ಯ ನಡೆಯಲಿದೆ. ಬಳಿಕ ಮೇ 23ರಂದು ಆರ್‌ಸಿಬಿ-ಸನ್‌ರೈಸರ್ಸ್‌ ನಡುವೆ ಮತ್ತೊಂದು ಪಂದ್ಯಕ್ಕೆ ಬೆಂಗಳೂರು ಆತಿಥ್ಯ ವಹಿಸಲಿದೆ. ಕಳೆದ ಗುರುವಾರ ಅರ್ಧಕ್ಕೇ ಸ್ಥಗಿತಗೊಂಡಿದ್ದ ಡೆಲ್ಲಿ-ಪಂಜಾಬ್‌ ನಡುವಿನ ಪಂದ್ಯ ಮೇ 24ಕ್ಕೆ ಜೈಪುರದಲ್ಲಿ ನಡೆಯಲಿದೆ. ಲೀಗ್‌ ಹಂತದ ಪಂದ್ಯಗಳು ಮೇ 27ರಂದು ಕೊನೆಗೊಳ್ಳಲಿವೆ. ಮೇ 29ರಿಂದ ನಾಕೌಟ್‌ ಹಂತ ಶುರುವಾಗಲಿದ್ದು, ಜೂ.3ರಂದು ಫೈನಲ್‌ ಪಂದ್ಯ ನಿಗದಿಯಾಗಿದೆ.

ಬೆಂಗ್ಳೂರು ಸೇರಿ 6 ನಗರಗಳು ಆತಿಥ್ಯ

ಪಂದ್ಯಗಳು ಬೆಂಗಳೂರು ಸೇರಿ 6 ನಗರಗಳಲ್ಲಿ ನಡೆಯಲಿವೆ. ಬೆಂಗಳೂರಿನಲ್ಲಿ 2, ಜೈಪುರಲ್ಲಿ 3, ಲಖನೌದಲ್ಲಿ 2, ಮುಂಬೈನಲ್ಲಿ 1, ಅಹಮದಾಬಾದ್‌ನಲ್ಲಿ 2, ನವದೆಹಲಿಯಲ್ಲಿ 3 ಪಂದ್ಯಗಳು ನಿಗದಿಯಾಗಿದೆ. ಪ್ಲೇ-ಆಫ್‌, ಫೈನಲ್‌ ಪಂದ್ಯಕ್ಕೆ ಇನ್ನೂ ಸ್ಥಳ ನಿಗದಿಯಾಗಿಲ್ಲ.