2ನೇ ಮಗುವಿನ ನಿರೀಕ್ಷೆಯಲ್ಲಿ ವಿರುಷ್ಕಾ ದಂಪತಿ

KannadaprabhaNewsNetwork |  
Published : Feb 04, 2024, 01:33 AM ISTUpdated : Feb 04, 2024, 03:06 PM IST
ಕೊಹ್ಲಿ-ಅನುಷ್ಕಾ | Kannada Prabha

ಸಾರಾಂಶ

ಭಾರತದ ತಾರಾ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಹಾಗೂ ಖ್ಯಾತ ನಟಿ ಅನುಷ್ಕಾ ಶರ್ಮಾ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇವರಿಬ್ಬರೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ

ನವದೆಹಲಿ: ಭಾರತದ ತಾರಾ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಹಾಗೂ ಖ್ಯಾತ ನಟಿ ಅನುಷ್ಕಾ ಶರ್ಮಾ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇವರಿಬ್ಬರೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. 

ಆದರೆ ದಕ್ಷಿಣ ಆಫ್ರಿಕಾ ಹಾಗೂ ಐಪಿಎಲ್‌ನ ಆರ್‌ಸಿಬಿ ತಂಡದ ಮಾಜಿ ಆಟಗಾರ ಎಬಿಡಿ ವಿಲಿಯರ್ಸ್, ಕೊಹ್ಲಿ ದಂಪತಿಯ ಬಗ್ಗೆ ಮಾಹಿತಿ ಒದಗಿಸಿದ್ದಾರೆ. 

‘ವಿರಾಟ್‌ ಕೊಹ್ಲಿ 2ನೇ ಮಗು ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಅವರು ಕುಟುಂಬದ ಜೊತೆ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ’ ಎಂದು ತಮ್ಮ ಯೂಟ್ಯೂಬ್‌ ವಿಡಿಯೋದಲ್ಲಿ ತಿಳಿಸಿದ್ದಾರೆ.

ನನಗೆ ಗೊತ್ತಿರುವಂತೆ ವಿರಾಟ್ ಕೊಹ್ಲಿ ಚೆನ್ನಾಗಿದ್ದಾರೆ. ಕೊಹ್ಲಿ ಕುಟುಂಬದ ಜೊತೆ ಕೆಲ ಸಮಯ ಕಳೆಯಲು ಬಯಸಿದ್ದಾರೆ. ಇದರಿಂದ ಕೊಹ್ಲಿ ಆರಂಭಿಕ ಎರಡು ಪಂದ್ಯದಿಂದ ಹೊರಗುಳಿದಿದ್ದಾರೆ. 

ದಂಪತಿ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದಕ್ಕಿಂತ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ವಿಲಿಯರ್ಸ್ ಹೇಳಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಆರಂಭಿಕ 2 ಟೆಸ್ಟ್‌ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಅಭಿಮಾನಿಗಳಲ್ಲಿ ಅನುಮಾನಗಳು ಕಾಡತೊಡಗಿತ್ತು. 

ಈ ಕುರಿತು ಹಲವು ಕ್ರಿಕೆಟ್ ಅಭಿಮಾನಿಗಳು ಕುರಿತು ಪ್ರಶ್ನಿಸಿದ್ದರು. ಆದರೆ ಇತ್ತ ಬಿಸಿಸಿಐ ವೈಯುಕ್ತಿಕ ಕಾರಣದಿಂದ ಕೊಹ್ಲಿ ಆರಂಭಿಕ 2 ಪಂದ್ಯಗಳಿಗೆ ಲಭ್ಯರಿಲ್ಲ ಎಂಬ ಮಾಹಿತಿ ನೀಡಿತ್ತು.

ಕೊಹ್ಲಿ-ಅನುಷ್ಕಾ ಶರ್ಮಾ 2017ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, 2021ರ ಜನವರಿಯಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು.

PREV

Recommended Stories

ಭಾರತ-ಇಂಗ್ಲೆಂಡ್‌ ಸರಣಿ ಕ್ಲೈಮ್ಯಾಕ್ಸ್‌ ಇಂದು !
ವಯೋ ವಂಚನೆ ಪತ್ತೆಗೆ ಖಾಸಗಿ ಸಂಸ್ಥೆ ನೆರವುಪಡೆಯಲಿದೆ ಬಿಸಿಸಿಐ