ಶೀಘ್ರ ರಾಷ್ಟ್ರೀಯ ಕಿರಿಯರ ಕುಸ್ತಿ ಟೂರ್ನಿ ಆಯೋಜನೆ

KannadaprabhaNewsNetwork |  
Published : Jan 04, 2024, 01:45 AM IST
ಬುಧವಾರ ನವದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ಯುವ ಕುಸ್ತಿಪಟುಗಳು.  | Kannada Prabha

ಸಾರಾಂಶ

ಯುವ ಕುಸ್ತಿಪಟುಗಳ ಪ್ರತಿಭಟನೆಗೆ ಮಣಿದ ಕುಸ್ತಿ ಆಡಳಿತ ಸಮಿತಿ. 6 ವಾರದೊಳಗೆ ಅಂಡರ್‌-15, ಅಂಡರ್‌-20 ಟೂರ್ನಿ ನಡೆಸುವ ಭರವಸೆ.

ನವದೆಹಲಿ: ಕುಸ್ತಿಪಟುಗಳ ಪ್ರತಿಭಟನೆ ಬೆನ್ನಲ್ಲೇ ಭಾರತೀಯ ಒಲಿಂಪಿಕ್ಸ್‌ ಸಮಿತಿ (ಐಒಎ) ನೇಮಿತ ತಾತ್ಕಾಲಿಕ ಸ್ವತಂತ್ರ ಆಡಳಿತ ಸಮಿತಿಯು ರಾಷ್ಟ್ರೀಯ ಕೂಟಗಳ ಆಯೋಜನೆಗೆ ಮುಂದಾಗಿದೆ. 6 ವಾರದೊಳಗೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅಂಡರ್‌-15, ಅಂಡರ್‌-20 ರಾಷ್ಟ್ರೀಯ ಕುಸ್ತಿ ಕೂಟಗಳನ್ನು ನಡೆಸುವುದಾಗಿ ಘೋಷಿಸಿದೆ.

2023ರ ಜನವರಿಯಲ್ಲಿ ಭಾರತೀಯ ಕುಸ್ತಿ ಫೆಡರೇಶನ್‌ನ ಹಿಂದಿನ ಅಧ್ಯಕ್ಷ ಬ್ರಿಜ್‌ಭೂಷಣ್‌ ಸಿಂಗ್‌ ವಿರುದ್ಧ ಪ್ರತಿಭಟನೆ ಆರಂಭಗೊಂಡ ಬಳಿಕ ರಾಷ್ಟ್ರೀಯ ಶಿಬಿರಗಳಾಗಲಿ, ಕಿರಿಯರ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳಾಗಲಿ ನಡೆದಿಲ್ಲ. ಈ ಕಾರಣದಿಂದಾಗಿ ಅನೇಕ ಕಿರಿಯ ಕುಸ್ತಿಪಟುಗಳು, ಒಂದು ವರ್ಷವನ್ನೇ ಕಳೆದುಕೊಂಡಿದ್ದಾರೆ.

ಸ್ವತಂತ್ರ ಆಡಳಿತ ಸಮಿತಿಯ ಮುಖ್ಯಸ್ಥ ಭೂಪೇಂದ್ರ ಸಿಂಗ್‌ ಬಾಜ್ವಾ ಯುವ ಕುಸ್ತಿಪಟುಗಳ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ್ದು, ‘ಕುಸ್ತಿಪಟುಗಳು ಒತ್ತಾಯಿಸಿರುವಂತೆ ಕೂಟಗಳನ್ನು ಶೀಘ್ರ ಆಯೋಜಿಸಲು ನಾವು ಬದ್ಧರಾಗಿದ್ದೇವೆ. ಮುಂದಿನ 6 ವಾರಗಳಲ್ಲಿ ಅಂಡರ್-15, ಅಂಡರ್‌-20 ವಿಭಾಗದ ಕೂಟಗಳನ್ನು ಗ್ವಾಲಿಯರ್‌ನಲ್ಲಿ ನಡೆಸಲು ಉದ್ದೇಶಿಸಲಾಗಿದೆ’ ಎಂದರು.

ಚುನಾವಣೆಯಲ್ಲಿ ಸಂಜಯ್‌ ಸಿಂಗ್‌ ನೇತೃತ್ವದ ಪದಾಧಿಕಾರಿಗಳ ತಂಡ ಆಯ್ಕೆಯಾದ ಮರು ದಿನವೇ (ಡಿ.27) ಕ್ರೀಡಾ ಸಚಿವಾಲಯ ನೂತನ ಸಮಿತಿಯನ್ನು ಅಮಾನತುಗೊಳಿಸಿತು. ಬಳಿಕ ಐಒಎ, ಕುಸ್ತಿ ಚಟುವಟಿಕೆಗಳನ್ನು ನಡೆಸಲು ಸ್ವತಂತ್ರ ಆಡಳಿತ ಸಮಿತಿಯನ್ನು ನೇಮಿಸಿತು.

PREV
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.

Recommended Stories

ಮುಳುಗುತ್ತಿದ್ದ ಭಾರತಕ್ಕೆ ಬೆಳಕಾದ ‘ಸೂರ್ಯ’!
ಪಾಕಿಸ್ತಾನದಿಂದ ಯು-ಟರ್ನ್‌: ಟಿ20 ವಿಶ್ವಕಪ್ಪಲ್ಲಿ ಭಾರತ ವಿರುದ್ಧ ಕಣಕ್ಕೆ?