ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಸಂಘರ್ಷ ಬಿಗಡಾಯಿಸಿರುವ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಬುಧವಾರ ಇಸ್ರೇಲಿಗೆ ಭೇಟಿ ನೀಡಲಿದ್ದಾರೆ.
ಇಸ್ರೇಲ್‌ಗೆ ಬೆಂಬಲ ಸೂಚಿಸುವ ಸಲುವಾಗಿ ಆಗಮನ ವಾಷಿಂಗ್ಟನ್: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಸಂಘರ್ಷ ಬಿಗಡಾಯಿಸಿರುವ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಬುಧವಾರ ಇಸ್ರೇಲಿಗೆ ಭೇಟಿ ನೀಡಲಿದ್ದಾರೆ. ‘ಅಧ್ಯಕ್ಷ ಜೋ ಬೈಡೆನ್ ಅವರು ಪ್ಯಾಲೆಸ್ತೀನಿಗಳ ಜತೆಗಿನ ಯುದ್ಧದಲ್ಲಿ ಇಸ್ರೇಲ್‌ಗೆ ಬೆಂಬಲ ಸೂಚಿಸುವ ಸಲುವಾಗಿ ಬುಧವಾರ, ಅ.18 ರಂದು ಅಲ್ಲಿಗೆ ತೆರಳಲಿದ್ದಾರೆ. ಈ ವೇಳೆ ಇಸ್ರೇಲ್ ತೆಗೆದುಕೊಳ್ಳಬಹುದಾದ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ. ಈ ವೇಳೆ ಬೈಡನ್ ಅವರು ಶೃಂಗಸಭೆಗಾಗಿ ಜೋರ್ಡಾನ್, ಈಜಿಪ್ಟ್ ಮತ್ತು ಪ್ಯಾಲಿಸ್ತೀನಿನ ಅಧ್ಯಕ್ಷರ ಜೊತೆಗಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ಶ್ವೇತಭವನದ ಹೇಳಿಕೆ ತಿಳಿಸಿದೆ.
Stay updated with latest International news (ಅಂತರಾಷ್ಟ್ರೀಯ ಸುದ್ದಿ) - global headlines, international politics, world events, economy, and breaking news from across the globe at KannadaPrabha News.