ಖಲಿಸ್ತಾನಿ ಉಗ್ರ ನಿಜ್ಜರ್‌ಹತ್ಯೆ ಮಾಡಿದ್ದ ಸುಪಾರಿಹಂತಕ ಕೆನಡಾದಲ್ಲಿ ಸೆರೆ

KannadaprabhaNewsNetwork |  
Published : May 04, 2024, 12:39 AM ISTUpdated : May 04, 2024, 04:00 AM IST
 ನಿಜ್ಜರ್‌ | Kannada Prabha

ಸಾರಾಂಶ

ಕಳೆದ ವರ್ಷ ಕೆನಡಾದಲ್ಲಿ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್‌ಸಿಂಗ್‌ ನಿಜ್ಜರ್‌ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಒಟ್ಟಾವಾ: ಕಳೆದ ವರ್ಷ ಕೆನಡಾದಲ್ಲಿ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್‌ಸಿಂಗ್‌ ನಿಜ್ಜರ್‌ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

 ನಿಜ್ಜರ್‌ ಹತ್ಯೆಗೆ ಸುಪಾರಿ ಹಂತಕರನ್ನು ಭಾರತ ಸರ್ಕಾರ ನಿಯೋಜಿಸಿತ್ತು. ಈ ಕುರಿತು ಖಚಿತ ಸುಳಿವು ಹೊಂದಿದ್ದ ಕೆನಡಾ ಪೊಲೀಸರು ಇದೀಗ ಹಿಟ್‌ ಸ್ಕ್ವಾಡ್‌ಗೆ ಸೇರಿದ ವಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕೆಲ ತಿಂಗಳ ಹಿಂದೆ ನಿಜ್ಜರ್‌ ಹತ್ಯೆಯಲ್ಲಿ ಭಾರತ ಶಾಮೀಲಾಗಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಬಹಿರಂಗವಾಗಿಯೇ ಆರೋಪ ಮಾಡಿದ್ದರು. ಭಾರತ ಈ ಆರೋಪವನ್ನು ಸಾರಾ ಸಗಟಾಗಿ ತಿರಸ್ಕರಿಸಿತ್ತು. ಜೊತೆಗೆ ಈ ಆರೋಪ ಉಭಯ ದೇಶಗಳ ಸಂಬಂಧ ಹದಗೆಡಲು ಕಾರಣವಾಗಿತ್ತು.

PREV
Stay updated with latest International news (ಅಂತರಾಷ್ಟ್ರೀಯ ಸುದ್ದಿ) - global headlines, international politics, world events, economy, and breaking news from across the globe at KannadaPrabha News.

Recommended Stories

ಭೀಕರ ಬಿರುಗಾಳಿ : ಬ್ರೆಜಿಲ್‌ನ ಸ್ಟ್ಯಾಚು ಆಫ್‌ ಲಿಬರ್ಟಿ ಧರೆಗೆ
ಬೋಂಡಿ ಬೀಚ್‌ ದಾಳಿಗೆ ತಿರುವು - ಅವನುಭಾರತದವ !