ಉತ್ತಮ ಆರೋಗ್ಯವು ಕ್ರಿಯಾಶೀಲ ಜೀವನದ ಗುಟ್ಟು: ನಾಯಾಧೀಶೆ ಮಂಜುಳಾ ಶಿವಪ್ಪ.

KannadaprabhaNewsNetwork |  
Published : Oct 10, 2023, 01:00 AM ISTUpdated : Oct 10, 2023, 01:01 AM IST
ಗುಬ್ಬಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಉತ್ತಮ ಆರೋಗ್ಯ ಒದಗಿಸುವ ನಿಟ್ಟಿನಲ್ಲಿ  ಕಾನೂನು ಸೇವಾ ಸಮಿತಿ, ಬೆಂಗಳೂರು ದಂತ ವಿಜ್ಞಾನ ಸಂಸ್ಥೆ ಹಾಗೂ ರೋಟರಿ ನಿಟ್ಟೂರು ಸಂಸ್ಥೆ ಸಹಯೋಗದಲ್ಲಿ ಉಚಿತ ದಂತ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿದಹಿರಿಯ ಸಿವಿಲ್ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ. | Kannada Prabha

ಸಾರಾಂಶ

ಉತ್ತಮ ಆರೋಗ್ಯ ಹೊಂದಿದ್ದರೆ ಕ್ರಿಯಾಶೀಲತೆಯ ಜೀವನ ಸಾಗಿಸಲು ಸಾಧ್ಯವಾಗುವುದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ ತಿಳಿಸಿದರು.

ಗುಬ್ಬಿ: ಉತ್ತಮ ಆರೋಗ್ಯ ಹೊಂದಿದ್ದರೆ ಕ್ರಿಯಾಶೀಲತೆಯ ಜೀವನ ಸಾಗಿಸಲು ಸಾಧ್ಯವಾಗುವುದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ ತಿಳಿಸಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಉತ್ತಮ ಆರೋಗ್ಯ ಒದಗಿಸುವ ನಿಟ್ಟಿನಲ್ಲಿ ಕಾನೂನು ಸೇವಾ ಸಮಿತಿ, ಬೆಂಗಳೂರು ದಂತ ವಿಜ್ಞಾನ ಸಂಸ್ಥೆ ಹಾಗೂ ರೋಟರಿ ನಿಟ್ಟೂರು ಸಂಸ್ಥೆ ಸಹಯೋಗದಲ್ಲಿ ಉಚಿತ ದಂತ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವು ಸಾಕಷ್ಟು ಅನುಕೂಲಕರವಾಗಿದೆ.ಜನರು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳ ಜೊತೆ ಉತ್ತಮ ಆರೋಗ್ಯ ಹೊಂದುವತ್ತಲೂ ಗಮನಹರಿಸಬೇಕು ಎಂದು ತಿಳಿಸಿದರು. ವಕೀಲರ ಸಂಘದ ಅಧ್ಯಕ್ಷ ಬಿಕೆ ಚಿದಾನಂದ ಮಾತನಾಡಿ, ಕಕ್ಷಿದಾರರಿಗೆ, ವಕೀಲರಿಗೆ ಹಾಗೂ ನ್ಯಾಯಾಲಯದ ಸಿಬ್ಬಂದಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ. ಎಲ್ಲರೂ ಇದರ ಲಾಭವನ್ನು ಪಡೆದುಕೊಂಡರೆ ಆಯೋಜಕರ ಶ್ರಮ ಸಾರ್ಥಕವಾಗುವುದು. ಈ ಶಿಬಿರದ ಆಯೋಜನೆಗೆ ರೋಟರಿ ನಿಟ್ಟೂರು ರವರು ಹೆಚ್ಚಿನ ಸಹಕಾರ ನೀಡಿರುವುದು ಸಂತೋಷದಾಯಕವಾಗಿದೆ ಎಂದು ಹೇಳಿದರು. ರೋಟರಿ ನಿಟ್ಟೂರು ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಎಲ್ಲರಿಗೂ ಆರೋಗ್ಯ ಒದಗಿಸುವ ನಿಟ್ಟಿನಲ್ಲಿ ರೋಟರಿ ಸಂಸ್ಥೆಯು ಅನೇಕ ಯೋಜನೆಗಳನ್ನು ರೂಪಿಸುತ್ತಿದೆ. ತಾಲೂಕಿನಾದ್ಯಂತ ಇಂತಹ ಶಿಬಿರಗಳನ್ನು ಆಯೋಜಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶವನ್ನು ಸಂಸ್ಥೆ ಹೊಂದಿದೆ ಎಂದು ತಿಳಿಸಿದರು. ಶಿಬಿರದಲ್ಲಿ ಅಧಿಕ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪೂರ್ಣಿಮಾ ಯಾದವ್, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿನುತ, ಅಧಿಕ ಸಿವಿಲ್ ನ್ಯಾಯಾಧೀಶರಾದ ಮೇಧ, ವಕೀಲರ ಸಂಘದ ಕಾರ್ಯದರ್ಶಿ ಸುರೇಶ್, ಜಂಟಿ ಕಾರ್ಯದರ್ಶಿ ನಂದೀಶ್, ಸಂಘದ ಪದಾಧಿಕಾರಿಗಳು, ವಕೀಲರು, ಕಕ್ಷಿದಾರರು ಹಾಜರಿದ್ದರು. ಫೋಟೊ..... 9 ಜಿ ಯು ಬಿ 1 ಉಚಿತ ದಂತ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ.

PREV

Recommended Stories

ಪಿಒಕೆನಲ್ಲಿ ಪಹಲ್ಗಾಂ ಉಗ್ರನ ಸಾಂಕೇತಿಕ ಅಂತ್ಯಕ್ರಿಯೆ!
ಶ್ವೇತಭವನ ವಕ್ತಾರೆಯ ತುಟಿ, ಸೌಂದರ್ಯ ಹೊಗಳಿದ ಟ್ರಂಪ್!