ಮೈಸೂರು ಸ್ಯಾಂಡಲ್‌ ರಾಯಭಾರಿ ತಮನ್ನಾಗೆ 6.2 ಕೋಟಿ : ವಿವಾದ

Published : May 23, 2025, 12:29 PM ISTUpdated : May 23, 2025, 12:51 PM IST
thamanna

ಸಾರಾಂಶ

ಮೈಸೂರು ಸೋಪ್ಸ್‌ ಮತ್ತು ಡಿಟರ್ಜೆಂಟ್ಸ್‌ ಲಿಮಿಟೆಡ್‌ ಬ್ರ್ಯಾಂಡ್‌ ರಾಯಭಾರಿಯಾಗಿ ಪರಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರು. ಪಾವತಿಸಿ 2 ವರ್ಷ 2 ದಿನ ಅವಧಿಗೆ ನೇಮಕ ಮಾಡಿಕೊಳ್ಳಲಾಗಿದೆ.

ಬೆಂಗಳೂರು : ಮೈಸೂರು ಸೋಪ್ಸ್‌ ಮತ್ತು ಡಿಟರ್ಜೆಂಟ್ಸ್‌ ಲಿಮಿಟೆಡ್‌ ಬ್ರ್ಯಾಂಡ್‌ ರಾಯಭಾರಿಯಾಗಿ ಪರಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರು. ಪಾವತಿಸಿ 2 ವರ್ಷ 2 ದಿನ ಅವಧಿಗೆ ನೇಮಕ ಮಾಡಿಕೊಳ್ಳಲಾಗಿದೆ. ಇದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಗುರುವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು, ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್‌ ಸ್ಥಾಪಿಸಿರುವ ಮೈಸೂರು ಸೋಪ್ಸ್ ಸಂಸ್ಥೆ ಕರ್ನಾಟಕ ಸರ್ಕಾರಿ ಸ್ವಾಮ್ಯದ ಕಂಪನಿ. ಇದರ ಗ್ರಾಹಕರು ಕನ್ನಡಿಗರೇ ಆಗಿದ್ದು, ಕನ್ನಡದ ನಟಿಯರನ್ನೇ ರಾಯಭಾರಿಯಾಗಿ ನೇಮಕ ಮಾಡಬೇಕಿತ್ತು. ಕರ್ನಾಟಕದ ಸಾಂಸ್ಕೃತಿಕ ಗುರುತನ್ನು ಪ್ರತಿನಿಧಿಸುವ ಕಂಪನಿ ಸ್ಥಳೀಯ ಪ್ರತಿಭೆಗಳಿಗೆ ಮೊದಲ ಆದ್ಯತೆ ನೀಡಬೇಕಿತ್ತು ಎಂದು ಒತ್ತಾಯಿಸಿದ್ದಾರೆ.

ನಟಿ ತಮನ್ನಾ ಭಾಟಿಯಾ ಅವರು ಕರ್ನಾಟಕದ ಸಂಸ್ಕೃತಿ, ಭಾಷೆ, ಅಥವಾ ಮೈಸೂರು ಸೋಪ್ಸ್‌ನ ಇತಿಹಾಸದೊಂದಿಗೆ ಯಾವುದೇ ನೇರ ಸಂಬಂಧ ಹೊಂದಿಲ್ಲ. ಇಂಥ ಸ್ಥಿತಿಯಲ್ಲಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡುವುದು ಸಂಪೂರ್ಣವಾಗಿ ಅಪ್ರಸ್ತುತ. ತಮನ್ನಾ ಭಾಟಿಯಾ ಅವರ ನೇಮಕ ಕರ್ನಾಟಕದ ಜನರ ಭಾವನೆಗಳಿಗೆ ಧಕ್ಕೆ ತರುವಂತಿದೆ. ಈ ನಿರ್ಧಾರವನ್ನು ತಕ್ಷಣ ಹಿಂಪಡೆಯದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯು ತೀವ್ರ ಪ್ರತಿಭಟನೆ ಆಯೋಜಿಸಲಿದೆ. ಕರ್ನಾಟಕ ಸರ್ಕಾರ ಮತ್ತು ಮೈಸೂರು ಸೋಪ್ಸ್ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮನ್ನಣೆ ನೀಡಿ, ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

PREV
Stay updated with latest International news (ಅಂತರಾಷ್ಟ್ರೀಯ ಸುದ್ದಿ) - global headlines, international politics, world events, economy, and breaking news from across the globe at KannadaPrabha News.
Read more Articles on

Recommended Stories

ಉಗ್ರರಿಗೆ ಹೆದರಿ ಹೊಸ ವರ್ಷಾಚರಣೆಯೇ ರದ್ದು
ಬಾಂಗ್ಲಾ ಹಿಂದು ವ್ಯಕ್ತಿ ಹತ್ಯೆ : 7 ಮಂದಿ ಸೆರೆ