ಇಸ್ಲಮಾಬಾದ್: ಪಾಕಿಸ್ತಾನದ ಪ್ರಧಾನಿಯಾಗಿ ಎರಡನೇ ಬಾರಿಗೆ ಶಹಬಾಜ್ ಷರೀಫ್ ಸಂಸತ್ತಿನಲ್ಲಿ ಆಯ್ಕೆಯಾಗಿದ್ದಾರೆ. 336 ಸದಸ್ಯ ಬಲವುಳ್ಳ ಸಂಸತ್ತಿನಲ್ಲಿ 201 ಮತ ಪಡೆಯುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಶಹಬಾಜ್ ಷರೀಫ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಶೆಹಬಾಜ್ ಸೋಮವಾರದಂದು ರಾಷ್ಟ್ರಪತಿ ನಿವಾಸವಾಗಿರುವ ಐವನ್-ಇ-ಸದ್ರ್‌ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಫೆ.8ರಂದು ನಡೆದ ಚುನಾವಣೆಯಲ್ಲಿ ನವಾಜ್ ಷರೀಫ್ ನೇತೃತ್ವದ ಪಿಎಂಎಲ್-ಎನ್ ಪಕ್ಷ 75 ಸ್ಥಾನ ಗಳಿಸುವುದರೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.