ಪಾಕ್‌ನಲ್ಲಿ ಅಚ್ಚರಿಯ ರಾಜಕೀಯ ಬೆಳವಣಿಗೆ

KannadaprabhaNewsNetwork |  
Published : Apr 29, 2024, 01:34 AM ISTUpdated : Apr 29, 2024, 04:19 AM IST
 ಇಶಾಖ್ ದಾರ್ | Kannada Prabha

ಸಾರಾಂಶ

ಅಚ್ಚರಿಯ ಬೆಳವಣಿಗೆಯೊಂದಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಖ್ ದಾರ್ ಅವರನ್ನು ಉಪ ಪ್ರಧಾನಿಯನ್ನಾಗಿ ನೇಮಕ ಮಾಡಲಾಗಿದೆ.

ಇಸ್ಲಾಮ್‌ಬಾದ್: ಅಚ್ಚರಿಯ ಬೆಳವಣಿಗೆಯೊಂದಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಖ್ ದಾರ್ ಅವರನ್ನು ಉಪ ಪ್ರಧಾನಿಯನ್ನಾಗಿ ನೇಮಕ ಮಾಡಲಾಗಿದೆ. 

ಭಾನುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಶೇಷವೆಂದರೆ ಸಂಪುಟದಲ್ಲಿ ಇಂಥದ್ದೊಂದು ನಿರ್ಧಾರ ಕೈಗೊಳ್ಳುವಾಗ ಸ್ವತಃ ಪ್ರಧಾನಿ ಶೆಹಬಾಜ್‌ ಷರೀಫ್‌ ಮತ್ತು ಇಶಾಕ್‌ ಇಬ್ಬರೂ ಪಾಕಿಸ್ತಾನದಲ್ಲಿ ಇರಲಿಲ್ಲ. 

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಇಬ್ಬರೂ ಸೌದಿ ಅರೇಬಿಯಾಕ್ಕೆ ತೆರಳಿದ್ದ ವೇಳೆ ಈ ಘೋಷಣೆ ಮಾಡಲಾಗಿದೆ. ಇಶಾಖ್‌, ಶೆಹಬಾಜ್ ಕುಟುಂಬದ ಆಪ್ತರಾಗಿದ್ದು, ದಾರ್ ಪುತ್ರ ಶೆಹಬಾಜ್ ಸಹೋದರ ನವಾಜ್ ಷರೀಫ್ ಅವರ ಅಳಿಯ.

PREV
Stay updated with latest International news (ಅಂತರಾಷ್ಟ್ರೀಯ ಸುದ್ದಿ) - global headlines, international politics, world events, economy, and breaking news from across the globe at KannadaPrabha News.

Recommended Stories

ಕ್ಸಿಗೆ 100 ಅಡಿ ಉದ್ದದ ಕೆಂಪು ಹಾಸು ಹಾಕಿ ಟ್ರಂಪ್‌ ಸ್ವಾಗತ
ಚೀನಾಕ್ಕೆ ಭಾರತ ಉತ್ಪನ್ನ ರಫ್ತು ಶೇ.40ರಷ್ಟು ಹೆಚ್ಚಳ!