ಅಪ್ಪುಗೆ ನಮ್ಮ ಸಂಸ್ಕೃತಿಯ ಭಾಗ : ವಿದೇಶಿ ಮಾಧ್ಯಮಗಳಿಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿರುಗೇಟು

KannadaprabhaNewsNetwork |  
Published : Aug 24, 2024, 01:15 AM ISTUpdated : Aug 24, 2024, 04:53 AM IST
ಮೋದಿ | Kannada Prabha

ಸಾರಾಂಶ

ಉಕ್ರೇನ್‌ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿಅವರನ್ನು ಮೋದಿ ಶುಕ್ರವಾರ ಹಲವು ಬಾರಿ ಆತ್ಮೀಯವಾಗಿ ಅಪ್ಪಿಕೊಂಡಿದ್ದನ್ನು ಪ್ರಶ್ನಿಸಿದ ವಿದೇಶಿ ಮಾಧ್ಯಮಗಳಿಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿರುಗೇಟು ನೀಡಿದ್ದಾರೆ.

ಕೀವ್‌: ಉಕ್ರೇನ್‌ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿಅವರನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹಲವು ಬಾರಿ ಆತ್ಮೀಯವಾಗಿ ಅಪ್ಪಿಕೊಂಡಿದ್ದನ್ನು ಪ್ರಶ್ನಿಸಿದ ವಿದೇಶಿ ಮಾಧ್ಯಮಗಳಿಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿರುಗೇಟು ನೀಡಿದ್ದಾರೆ. 

ಇಂಥದ್ದೊಂದು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಜೈಶಂಕರ್‌, ‘ಇಬ್ಬರು ವ್ಯಕ್ತಿಗಳು ಪರಸ್ಪರ ಭೇಟಿಯಾದಾಗ ಅಪ್ಪಿಕೊಳ್ಳುವುದು ನಮ್ಮ ಸಂಸ್ಕೃತಿ. ಪ್ರಧಾನಿ ಮೋದಿ ಬೇರೆ ಬೇರೆ ಸಂದರ್ಭಗಳಲ್ಲಿ ವಿವಿಧ ನಾಯಕರನ್ನು ಭೇಟಿಯಾದಾಗಲೂ ಅಪ್ಪಿಕೊಂಡಿದ್ದನ್ನು ನಾನು ನೋಡಿದ್ದೇನೆ. ಇಂದು ಅಂತೆಯೇ ಜೆಲೆನ್ಸ್ಕಿ ಅವರನ್ನು ಅಪ್ಪಿದ್ದಾರೆ. ನಿಮ್ಮ ಈ ಪ್ರಶ್ನೆ ನಮ್ಮ ನಡುವೆ ಇರುವ ಸಾಂಸ್ಕೃತಿಕ ಭಿನ್ನತೆಯನ್ನು ತೋರಿಸುತ್ತದೆ’ ಎಂದು ಪ್ರಧಾನಿ ಮೋದಿ ಅವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

==

ಮೋದಿಯ ಶಾಂತಿ ಮಾರ್ಗ ಸ್ವಾಗತಾರ್ಹ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪುಟಿನ್‌ಗಿಂತ ಹೆಚ್ಚು ಶಾಂತಿಯನ್ನು ಬಯಸುತ್ತಾರೆ. ಶಾಂತಿ ಸ್ಥಾಪನೆಗೆ ಅವರ ಬಳಿ ಯಾವುದಾದರೂ ಆಲೋಚನೆಗಳಿದ್ದರೆ ಅದನ್ನು ನಾವು ಸ್ವಾಗತಿಸುತ್ತೇವೆ. ಆ ಯೋಚನೆಗಳನ್ನು ಅಳವಡಿಸಿಕೊಳ್ಳುವಲ್ಲಿ ಹಾಗೂ ಅದರ ಬಗ್ಗೆ ಮಾತನಾಡಲು ನಾವು ಸಂತೋಷಪಡುತ್ತೇವೆ. ಭಾರತ ದೊಡ್ಡ ದೇಶ. ಈ ದೊಡ್ಡ ದೇಶದ ಪ್ರಭಾವದಿಂದ ಪುಟಿನ್‌ರನ್ನು ಹಾಗೂ ಅವರ ಆರ್ಥಿಕತೆಯನ್ನು ನಿಲ್ಲಿಸಬಹುದು. ತನ್ನ ಸ್ಥಾನ ಏನು ಎಂಬುದನ್ನು ತಿಳಿಸಬಹುದು.ವೊಲೊದಿಮಿರ್ ಜೆಲೆನ್‌ಸ್ಕಿ, ಉಕ್ರೇನ್‌ ಅಧ್ಯಕ್ಷ

PREV
Stay updated with latest International news (ಅಂತರಾಷ್ಟ್ರೀಯ ಸುದ್ದಿ) - global headlines, international politics, world events, economy, and breaking news from across the globe at KannadaPrabha News.

Recommended Stories

ಆಸ್ಟ್ರೇಲಿಯಾದಲ್ಲಿ ಯಹೂದಿಗಳ ನರಮೇಧ!
ಜನಸಂಖ್ಯೆ ಹೆಚ್ಚಳಕ್ಕೆ ಚೀನಾದಲ್ಲಿ ಕಾಂಡೋಮ್‌ ಟ್ಯಾಕ್ಸ್‌