ಕೊಡಗು, ಕರಾವಳಿ, ಮಲೆನಾಡಲ್ಲಿ ಮಳೆ

ಸಾರಾಂಶ

ಕೊಡಗು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ.

ಬೆಂಗಳೂರು :  ಕೊಡಗು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ.

ಕೊಡಗಿನಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ಸಮೀಪದ ರಂಗಸಮುದ್ರ ಬಳಿ ಇರುವ ಅತಿ ಸಣ್ಣ ಜಲಾಶಯ ಚಿಕ್ಲಿಹೊಳೆ (0.18 ಟಿಎಂಸಿ) ಭರ್ತಿಯಾಗಿದೆ. 

ಈ ಹಿನ್ನೆಲೆಯಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಮಂಗಳವಾರ ಜಲಾಶಯಕ್ಕೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆಯೂ ಮಳೆಯಾಗಿದ್ದು, ಮೂಡಿಗೆರೆ ತಾಲೂಕಿನ ಹಾಲೂರು ಸರ್ಕಾರಿ ಶಾಲೆಯ ಮೇಲ್ಚಾವಣಿ ಗೋಡೆಗೆ ಹಾನಿ ಸಂಭವಿಸಿದೆ.

Share this article