ದಕ್ಷಿಣ ಕೊರಿಯಾದಲ್ಲಿ ವಿಪಕ್ಷಗಳನ್ನು ಹತ್ತಿಕ್ಕಲು ತುರ್ತುಸ್ಥಿತಿ ಹೇರಲು ವಿಫಲ ಯತ್ನ: ಅಧ್ಯಕ್ಷರ ಪದಚ್ಯುತಿಗೆ ನಿಲುವಳಿ

KannadaprabhaNewsNetwork |  
Published : Dec 05, 2024, 12:30 AM ISTUpdated : Dec 05, 2024, 03:57 AM IST
ದಕ್ಷಿಣ ಕೊರಿಯಾ | Kannada Prabha

ಸಾರಾಂಶ

  ದಕ್ಷಿಣ ಕೊರಿಯಾದಲ್ಲಿ ವಿಪಕ್ಷಗಳನ್ನು ಹತ್ತಿಕ್ಕಲು ತುರ್ತುಸ್ಥಿತಿ ಹೇರಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೆಯೋಲ್ ವಿರುದ್ಧ ಪ್ರತಿಪಕ್ಷಗಳು ವಾಗ್ದಂಡನೆ ಗೊತ್ತುವಳಿ ಮಂಡಿಸಿವೆ. ಇದು ಸಂಸತ್ತಿನಲ್ಲಿ ಶುಕ್ರವಾರ ಮತಕ್ಕೆ ಹೋಗುವ ಸಂಭವವಿದೆ.

ಸಿಯೋಲ್‌: ದಕ್ಷಿಣ ಕೊರಿಯಾದಲ್ಲಿ ವಿಪಕ್ಷಗಳನ್ನು ಹತ್ತಿಕ್ಕಲು ತುರ್ತುಸ್ಥಿತಿ ಹೇರಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೆಯೋಲ್ ವಿರುದ್ಧ ಪ್ರತಿಪಕ್ಷಗಳು ವಾಗ್ದಂಡನೆ ಗೊತ್ತುವಳಿ ಮಂಡಿಸಿವೆ. ಇದು ಸಂಸತ್ತಿನಲ್ಲಿ ಶುಕ್ರವಾರ ಮತಕ್ಕೆ ಹೋಗುವ ಸಂಭವವಿದೆ.ಯೂನ್ ಅವರ ವಾಗ್ದಂಡನೆಗೆ ಮಾಡಲು ಸಂಸತ್ತಿನ 3ನೇ 2ರಷ್ಟು ಬೆಂಬಲ ಬೇಕಾಗುತ್ತದೆ ಮತ್ತು 9 ಸದಸ್ಯರ ಸಾಂವಿಧಾನಿಕ ನ್ಯಾಯಾಲಯದಲ್ಲಿ ಕನಿಷ್ಠ 6 ನ್ಯಾಯಮೂರ್ತಿಗಳು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಅದನ್ನು ಬೆಂಬಲಿಸಬೇಕಾಗುತ್ತದೆ.ಪ್ರಮುಖ ವಿರೋಧ ಪಕ್ಷವಾದ ಡೆಮಾಕ್ರಟಿಕ್ ಪಕ್ಷ ಮತ್ತು 5 ಸಣ್ಣ ವಿರೋಧ ಪಕ್ಷಗಳು ವಾಗ್ದಂಡನೆ ಗೊತ್ತುವಳಿ ಸಲ್ಲಿಸಿವೆ.

ಈ ನಡುವೆ, ಯೂನ್ ಅವರ ಬೆಂಬಲಿಗರು ಹಾಗೂ ಹಲವು ಸಚಿವರು ಪದಚ್ಯುತಿ ಭೀತಿಯಿಂದಾಗಿ ಬುಧವಾರವೇ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಯೂನ್‌ ಮಾತ್ರ ಮೌನವಾಗಿದ್ದಾರೆ. ಒಂದು ವೇಳೆ ಯೂನ್‌ ಪದಚ್ಯುತಿ ಆದರೆ ಹಾಲಿ ಪ್ರಧಾನಿ ಹಾನ್ ಡಕ್ ಸೂ ಮುಂದಿನ ಅಧ್ಯಕ್ಷರಾಗಲಿದ್ದಾರೆ.

ಈ ನಡುವೆ, ಮಂಗಳವಾರ ತುರ್ತುಸ್ಥಿತಿ ಕಾರಣ ಪ್ರಕ್ಷುಬ್ಧಗೊಂಡಿದ್ದ ದ.ಕೊರಿಯಾದಲ್ಲಿ ಜನಜೀವನ ಗುರುವಾರ ಸಹಜ ಸ್ಥಿತಿಗೆ ಮರಳಿದೆ.

‘ವಿಪಕ್ಷಗಳು ನಮ್ಮ ವಿರೋಧಿ ದೇಶ ಉ. ಕೊರಿಯಾ ಜತೆ ಶಾಮೀಲಾಗಿವೆ ಹಾಗೂ ಕಮ್ಯುನಿಸ್ಟ್‌ ಚಿಂತನೆ ಹೊಂದಿವೆ’ ಎಂದು ಆರೋಪಿಸಿ ಅವನ್ನು ಬಗ್ಗುಬಡಿಯಲು ಅಧ್ಯಕ್ಷ ಯೂನ್‌ ಬುಧವಾರ ತುರ್ತುಸ್ಥಿತಿ ಹೇರಿದ್ದರು ಹಾಗೂ ಸಂಸತ್‌ ಹೊರಗೆ ಸೇನೆಯ ಕಾವಲು ಹಾಕಿದ್ದರು. ಆದರೆ ಇದಾದ ಆರೇ ತಾಸಿನಲ್ಲಿ ಸೇನೆಯ ಕೋಟೆಯನ್ನು ಭೇದಿಸಿ ಹಾಗೂ ಸಂಸತ್ತಿನ ಕಾಂಪೌಂಡ್‌ ಹತ್ತಿ ಒಳಗೆ ಬಂದ ವಿಪಕ್ಷ ಸಂಸದರು 190-0 ಮತದಿಂದ ತುರ್ತುಸ್ಥಿತಿ ನಿರ್ಣಯ ಸೋಲಿಸಿದ್ದರು. ಇದಕ್ಕೆ ಬಳಿಕ ಸಂಪುಟ ಅಂಗೀಕಾರ ನೀಡಿತ್ತು. ಅಧ್ಯಕ್ಷರ ಪಕ್ಷಕ್ಕೆ ಸಂಸತ್ತಿನಲ್ಲಿ ಬಹುಮತವಿಲ್ಲ. ಹೀಗಾಗಿ ಯೂನ್‌ ಹಿನ್ನಡೆ ಕಂಡಿದ್ದರು.

PREV

Recommended Stories

ಭಾರತ ಮೇಲೆ ಮತ್ತಷ್ಟು ತೆರಿಗೆ : ಟ್ರಂಪ್‌ ಬೆದರಿಕೆ
ಪಿಒಕೆನಲ್ಲಿ ಪಹಲ್ಗಾಂ ಉಗ್ರನ ಸಾಂಕೇತಿಕ ಅಂತ್ಯಕ್ರಿಯೆ!