ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಹಾನಿ ಉಂಟಾದ ಬಗ್ಗೆ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡುವಂತೆ ಬಿಬಿಎಂಪಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಎರಡು ವರ್ಷಗಳಲ್ಲಿ ವ್ಯಯಿಸಿರುವ ಮೊತ್ತ 90 ಸಾವಿರ ಕೋಟಿ ರು.
‘ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು’ ಮತ್ತು ‘ನುಡಿದಂತೆ ನಡೆಯುತ್ತೇವೆ’ ಎನ್ನುವುದನ್ನೇ ಧ್ಯೇಯವಾಗಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿ ಮಾಡಿರುವ ಸಾಧನೆ ಹತ್ತು ಹಲವು.
ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ದಿವಾಳಿಯಾಗಲಿದೆ ಎಂದೆಲ್ಲಾ ಬೊಬ್ಬೆ ಹೊಡೆದರು. ಆದರೆ ಆರ್ಥಿಕ ಶಿಸ್ತಿನ ಎಲ್ಲೇ ಮೀರದೆ, ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಖಾತ್ರಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಅರಣ್ಯ ಭೂಮಿ ಒತ್ತುವರಿ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯಿತು.
ಚಿಕ್ಕಬಳ್ಳಾಪುರದ ಭಗತ್ಸಿಂಗ್ ನಗರದ ಧರ್ಮರಾಯಸ್ವಾಮಿ ಹೂವಿನ ಕರಗ ಮಹೋತ್ಸವ ಅಂಗವಾಗಿ ಪೂಜಾರಿ ಸತತ 23 ಗಂಟೆ ಕರಗ ಹೊತ್ತು ಮೆರವಣಿಗೆಯಲ್ಲಿ ಸಾಗಿದ್ದಾರೆ.
‘ಯೂ ಮೇಡ್ ಮೀ ಆಂಡ್ ದೊಡ್ಡಪ್ಪ ವೆರಿ ಪ್ರೌಡ್. ನೀನು ನಗುವಾಗ, ನಡೆಯುವಾಗ ಅಪ್ಪು ಬಂದಂತೆ’
‘ಕಾಂಗ್ರೆಸ್ ಸರ್ಕಾರ ಬಂತು ಕರ್ನಾಟಕದ ಅಭಿವೃದ್ಧಿ ತಂತು’
ಜನಸಾಮಾನ್ಯರಿಗೆ ನಿಜವಾದ ಅಚ್ಛೆ ದಿನ್ ತಂದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳು । ಅಭಿವೃದ್ಧಿಗೂ ಅನುದಾನ
ಆಗಿದ್ದೇನಪ್ಪ ಅಂದರೆ, ವಿಶ್ವ ಅಸ್ತಮಾ ದಿನದ ಅಂಗವಾಗಿ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಜಾಗೃತಿ ಹಾಗೂ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಆದರೆ, ಈ ಜಾಗೃತಿ ಶಿಬಿರಕ್ಕೆ ಗದಗ ಮೂಲದ ಸಂಸ್ಥೆ ಅಧ್ಯಕ್ಷ ಸಂಶಿಮಠ, ವೈದ್ಯ ಗೋವಿಂದ ದೇಸಾಯಿ ಹಾಗೂ ಮಾಧ್ಯಮದ ಒಬ್ಬ ಪ್ರತಿನಿಧಿ ಮಾತ್ರ ಬಂದಿದ್ದರು.
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಆದಷ್ಟು ಬೇಗ ನಿಯಮಗಳು ಹಾಗೂ ಮಾರ್ಗಸೂಚಿಗಳನ್ನು ರೂಪಿಸುವಂತೆ ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್ ಸದಸ್ಯರು ಬೈಕ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ದಾರೆ.