ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳಿಗೆ ವಿಶೇಷ ಸೌಲಭ್ಯ ನೀಡಿದ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರವು, ಕಾರಾಗೃಹಗಳ ಆಡಳಿತ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆ ತರುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚಿಸಿದೆ.
ಕಳೆದ ವರ್ಷ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ವಿಶ್ವಪ್ರಸಿದ್ಧ ತಿರುಪತಿ ದೇಗುಲಕ್ಕೆ ಕಲಬೆರಕೆ ತುಪ್ಪ ಪೂರೈಕೆ ಪ್ರಕರಣದ ತನಿಖೆ ವೇಳೆ ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ. ಹಾಲನ್ನೇ ಖರೀದಿ ಮಾಡದ ಉತ್ತರಾಖಂಡ ಮೂಲದ ಕಂಪನಿ 68 ಲಕ್ಷ ಕೆಜಿಯಷ್ಟು ಭಾರೀ ಪ್ರಮಾಣದ ತುಪ್ಪ ನಕಲಿ ಪೂರೈಕೆ ಮಾಡಿತ್ತು.
ಸುದೀಪ್ ಅವರ ‘ಮಾರ್ಕ್’ ಟೀಸರ್ಗೆ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟೀಸರ್ ಬಿಡುಗಡೆ ಆದ ಒಂದೇ ದಿನದಲ್ಲಿ 1 ಕೋಟಿಗೂ (10 ಮಿಲಿಯನ್) ಹೆಚ್ಚು ವೀಕ್ಷಣೆ ಪಡೆಯುವ ಮೂಲಕ ದಾಖಲೆ ಮಾಡಿದೆ.
ರಶ್ಮಿಕಾ ಮಂದಣ್ಣ- ವಿಜಯ ದೇವರಕೊಂಡ ಮದುವೆಗೆ ಉದಯಪುರದ ಅರಮನೆಯೊಂದು ಸಜ್ಜುಗೊಳ್ತಾ ಇದೆ. ಇನ್ನೊಂದು ಕಡೆ ಆಕೆಯ ಎಂಗೇಜ್ಮೆಂಟ್ ರಿಂಗ್, ಮದುವೆಯ ಕನಸು ಕಾಣುತ್ತಿರುವ ಪ್ರೇಮಿಗಳಿಗೆ ಸ್ಫೂರ್ತಿ ನೀಡುವಂತಿದೆ.
ಮಹಾರಾಷ್ಟ್ರ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಇನ್ನಿಂಗ್ಸ್ ಮುನ್ನಡೆಗಾಗಿ ಹೋರಾಟ ನಡೆಸುತ್ತಿದೆ. ಮೊದಲ ಇನ್ನಿಂಗ್ಸ್ನಲ್ಲಿ ರಾಜ್ಯ ತಂಡ 313 ರನ್ಗೆ ಆಲೌಟಾದರೆ, ಮಹಾರಾಷ್ಟ್ರ 2ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿದೆ.
ರಣಜಿ ಟ್ರೋಫಿ ಪ್ಲೇಟ್ ಗ್ರೂಪ್ನಲ್ಲಿ ಭಾನುವಾರ ಮೇಘಾಲಯದ ಬ್ಯಾಟರ್ ಆಕಾಶ್ ಕುಮಾರ್ ಚೌಧರಿ ಸ್ಫೋಟಕ ಆಟವಾಡಿದ್ದು, 2 ವಿಶ್ವದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಅವರು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 8 ಎಸೆತಗಳಲ್ಲಿ 8 ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಮತ್ತು ಅತಿ ವೇಗದ ಅರ್ಧಶತಕ
ಮೊದಲ ಪತ್ನಿ/ ಪತಿಗೆ ವಿಚ್ಛೇದನ ನೀಡದೇ ಎರಡನೇ ವಿವಾಹವಾದರೆ ಗರಿಷ್ಠ 7 ವರ್ಷ ಶಿಕ್ಷೆ ನೀಡುವ ಕಾನೂನು ಜಾರಿಗೆ ಅಸ್ಸಾಂನ ಬಿಜೆಪಿ ಸರ್ಕಾರ ನಿರ್ಧರಿಸಿದೆ. ಈ ಕುರಿತ ಕರಡು ಮಸೂದೆಗೆ ಭಾನುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಭಾನುವಾರ ತೆರೆ ಬಿದ್ದಿದೆ. ರಾಜ್ಯದ 243 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ ಎರಡನೇ ಹಂತ ನ.11ರಂದು ನಡೆಯಲಿದ್ದು, ನ.14ರಂದು ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಬ್ಬು ಅರೆಯುವಿಕೆ ಆರಂಭಗೊಂಡಿದೆ. ಕೇಂದ್ರ ಸರ್ಕಾರ ಎಫ್ಆರ್ಪಿ ಅನ್ನು ನಿಗದಿಪಡಿಸಿದೆ. ರಾಜ್ಯದಲ್ಲಿ ಕಬ್ಬು ಬೆಳೆಯುವ ಪ್ರದೇಶದ ವಿಸ್ತೀರ್ಣ 9.87 ಲಕ್ಷ ಹೆಕ್ಟೇರ್ಗಳು.
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು! - ದೀಪಾವಳಿ ಬಂತು ಅಂದರೆ ಮಕ್ಕಳಿಗೆ ಪಟಾಕಿ ಹೊಡೆಯುವ ಸಂಭ್ರಮ. ದೊಡ್ಡವರಿಗೆ ಇಸ್ಪೀಟ್ ಆಡಲು ಮತ್ತೊಂದು ನೆಪ. ನಮ್ಮ ಕೊಪ್ಪಳದಲ್ಲಂತೂ ಬೆಳಕಿನ ಹಬ್ಬದ ರಾತ್ರಿಯೆಲ್ಲ ಎಲೆಯಾಟದಬ್ಬರವೋ ಅಬ್ಬರ!