ವೈದ್ಯಕೀಯ ಶಿಕ್ಷಣ ಇಲಾಖೆಯು ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯಲ್ಲಿ (ಕೆಎಂಐಒ) ದೇಶದಲ್ಲೇ ಮೊದಲ ಬಾರಿಗೆ ಪ್ರೋಟಾನ್ ಚಿಕಿತ್ಸಾ ಸೌಲಭ್ಯವನ್ನು ಸ್ಥಾಪಿಸಲು ಮುಂದಾಗಿದ್ದು, ಈ ಸಂಬಂಧ ಕೇಂದ್ರದಿಂದ ₹ 500 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಿದೆ.
ಆಧಾರ್ ಸೀಡಿಂಗ್ ಮತ್ತು ಇ-ಕೆವೈಸಿಯನ್ನು ಜೂ.30ರೊಳಗೆ ಶೇ.100ರಷ್ಟು ಪೂರ್ಣಗೊಳಿಸಿ, ಅನರ್ಹ ಪಡಿತರ ಫಲಾನುಭವಿಗಳನ್ನು ಗುರುತಿಸಿ ಅಂಥವರಿಗೆ ಹಂಚಿಕೆಯಾಗಿರುವ ಆಹಾರ ಧಾನ್ಯವನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶಿಸಿದೆ.
ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ ಪತ್ರ (ಓಸಿ) ಕಡ್ಡಾಯದಿಂದ ಸುಮಾರು 2 ಲಕ್ಷ ಮನೆ, ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಮಸ್ಯೆಯಾಗಿದೆ. ಹೀಗಾಗಿ ನಿಯಮಗಳಿಗೆ ತಿದ್ದುಪಡಿ ತಂದು ಬಡವರಿಗೆ ವಿದ್ಯುತ್ ಸಂಪರ್ಕ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ವೃಷಭಾವತಿ ಏತ ನೀರಾವರಿ ಯೋಜನೆಗೆ ವಿರೋಧ ಪಕ್ಷದವರು ವಿರೋಧಿಸುತ್ತಿದ್ದಾರೆ, ಸ್ವಚ್ಛವಲ್ಲದ ನೀರು ಬಂದರೆ ನಾನೆ ಖುದ್ದು ವಾಪಸ್ ಕಳುಹಿಸುತ್ತೇನೆ. ಶುದ್ಧ ಹಾಗೂ ಶಾಶ್ವತ ನೀರಾವರಿ ಯೋಜನೆ ನನ್ನ ಸಂಕಲ್ಪವಾಗಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ದೆಹಲಿ ಪ್ರವಾಸದಲ್ಲಿರುವ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಕಾರಿಗಳೊಂದಿಗೆ ದೆಹಲಿಯ ಮಹಾನಗರ ಪಾಲಿಕೆ ಭೇಟಿ ನೀಡಿದರು
ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ ಬೆನ್ನಲ್ಲೇ, ಚುನಾವಣಾ ಆಯೋಗವು ಹರ್ಯಾಣ ಮತ್ತು ಮಹಾರಾಷ್ಟ್ರದ ಕಳೆದ 15 ವರ್ಷಗಳ ಮತದಾರರ ಪಟ್ಟಿಯನ್ನು ಬಹಿರಂಗ ಮಾಡಲಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಸ್ವತ್ತುಗಳು ಇ-ಖಾತಾ ಪಡೆದಿರುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಆದೇಶಿಸಿದ್ದಾರೆ.
ನ್ಯಾ. ಮೈಕಲ್ ಡಿ.ಕುನ್ಹಾ ನೇತೃತ್ವದ ತನಿಖಾ ಆಯೋಗ ನೀಡಿದ್ದ ನೋಟಿಸ್ಗೆ 99 ಅಧಿಕಾರಿಗಳು ನೀಡಿರುವ ಲಿಖಿತ ಉತ್ತರಗಳನ್ನು ಪರಿಶೀಲಿಸಿ ಸರ್ಕಾರ ಮತ್ತು ತನಿಖಾ ಆಯೋಗಕ್ಕೆ ಸಲ್ಲಿಸಲು ಬಿಬಿಎಂಪಿ ಆರೋಗ್ಯ ವಿಭಾಗ ನಿರ್ಧರಿಸಿದೆ.
ತನ್ನಿಂದ ದೂರವಾಗಲು ಯತ್ನಿಸಿದ್ದಳು ಎಂಬ ಕಾರಣಕ್ಕೆ ಸ್ನೇಹಿತೆಯನ್ನು ಲಾಡ್ಜ್ಗೆ ಕರೆಸಿಕೊಂಡು ಲೈಂಗಿಕ ಕ್ರಿಯೆ ನಡೆಸಿದ ಬಳಿಕ ಸುಮಾರು 13 ಬಾರಿ ಮನಬಂದಂತೆ ಚಾಕುನಿಂದ ಇರಿದು ಭೀಕರವಾಗಿ ಕೊಂದ
ದಿಗ್ಗಜ ಕ್ರಿಕೆಟಿಗ ಎಂ.ಎಸ್.ಧೋನಿ ಐಸಿಸಿ ಹಾಲ್ ಆಫ್ ಫೇಮ್ ಸೇರ್ಪಡೆಗೊಂಡಿದ್ದಾರೆ. ಅವರ ಜೊತೆಗೆ ಇತರ 6 ಕ್ರಿಕೆಟಿಗರು ಕೂಡಾ ಈ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ.