ಈ ಹಿಂದೆ ಎರಡು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದೇನೆ. ಆಗ ನನಗೆ ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕು ಎಂಬ ಆಸೆಯಿತ್ತು. ಆದರೆ, ಈಗ ಅಂಥ ಆಸೆ ಇಲ್ಲ. ಇನ್ನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ, ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಕೊಪ್ಪಳದ ಗವಿಸಿದ್ದಪ್ಪ ನಾಯಕ ಕೊಲೆ ಪ್ರಕರಣವನ್ನು ಎನ್ಐಎಗೆ (ರಾಷ್ಟ್ರೀಯ ತನಿಖಾ ದಳ) ವಹಿಸಬೇಕು ಎಂದು ಆಗ್ರಹಿಸಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಿಯೋಗವು ರಾಜ್ಯಪಾಲರಿಗೆ ಮನವಿ ನೀಡಿದೆ.
ಗೌರವಧನ ಹೆಚ್ಚಳಕ್ಕಾಗಿ ಪ್ರತಿಭಟನೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಮಾಸಿಕ 1500 ರು. ಗೌರವಧನ ಹೆಚ್ಚಿಸಲು ತೀರ್ಮಾನ
ನಗರದ ಕೋರಮಂಗಲದ ಕೃಪಾ ನದಿ ಕಾಲೇಜು ಸಿಗ್ನಲ್ ಬಳಿ ಮರದ ಕೊಂಬೆ ಮುರಿದು ಓಎಫ್ಸಿ ಕೇಬಲ್ನಲ್ಲಿ ನೇತಾಡುತ್ತಾ ಅಪಾಯ ಉಂಟು ಮಾಡುವ ಸ್ಥಿತಿಯಲ್ಲಿ ಇರುವುದನ್ನು ಕಂಡು ಮಂಗಳಮುಖಿ ಹಾಗೂ ಆಟೋ ಚಾಲಕ ಸೇರಿ ತೆಗೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೆಹಲಿಯಲ್ಲಿ ಬೀದಿ ನಾಯಿಗಳಿಗೆ ಶೆಲ್ಟರ್ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶೆಲ್ಟರ್ ನಿರ್ಮಾಣ ಸಂಬಂಧ ಸರ್ಕಾರದೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು.
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಾವು ಜೋರು ಪಡೆಯುತ್ತಿದೆ. ಎಡಗೈ ಸಮುದಾಯಗಳ ಜತೆಗೆ ಪ್ರತಿಪಕ್ಷಗಳೂ ಬೀದಿಗಿಳಿದಿವೆ. ನ್ಯಾ.ನಾಗಮೋಹನ್ದಾಸ್ ಆಯೋಗ ವರದಿಯಲ್ಲಿ ಸ್ಪೃಷ್ಯ ಜಾತಿಗಳಿಗೆ ಅನ್ಯಾಯ ಆಗಿದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ನಿಯೋಗ ಸಿಎಂ ಮೊರೆ ಹೋಗಿದೆ.
79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ರಾಜಭವನ ವೀಕ್ಷಣೆಗೆ ಆ. 16, 17 ಮತ್ತು 18ರಂದು ಸಂಜೆ 6 ರಿಂದ 7.30 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ.
ನಕಲಿ ವಿವರ/ದಾಖಲೆಗಳನ್ನು ತೋರಿಸಿ ಮತಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ವಿಪರ್ಯಾಸವೆಂದರೆ, 1980ರಲ್ಲಿ ಮೊದಲ ಬಾರಿ ಮತಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಅವರ ತಾಯಿ ಸೋನಿಯಾ ಗಾಂಧಿ ಆಗ, ಮತದಾರರೆನಿಸಿಕೊಳ್ಳಲು ಇರುವ ಕನಿಷ್ಠ ಅರ್ಹತೆಯಾದ ಪೌರತ್ವವನ್ನೇ ಪಡೆದಿರಲಿಲ್ಲ!
‘ಮತಗಳ್ಳತನ’ದ ಆರೋಪ - ಯಾವ ರೀತಿ ನಕಲಿ ಮತದಾನ ನಡೆಯತ್ತದೆಂಬ ವಿವರಣೆಯಿರುವ ಸುಮಾರು ಒಂದು ನಿಮಿಷದ ವಿಡಿಯೋವೊಂದನ್ನೂ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ.
ಭಾರತ ಮತ್ತು ಅಮೆರಿಕ ನಡುವೆ ತೆರಿಗೆ ಸಂಘರ್ಷ ಭುಗಿಲೆದ್ದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.