ಮೈಸೂರು ಸ್ಯಾಂಡಲ್ ಸೋಪ್ಗೆ ರಾಯಭಾರಿಯಾಗಿ ಮುಂದಿನ ದಿನಗಳಲ್ಲಿ ಶೇ.99 ಕನ್ನಡಿಗರಿಗೇ ಆದ್ಯತೆ ನೀಡುತ್ತೇವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಮುಂಗಾರು ಮಳೆ ಪದಾರ್ಪಣೆಯಾಗಿ ಒಂದೇ ದಿನಕ್ಕೆ ಕರಾವಳಿ, ಮಲೆನಾಡು ಸೇರಿ ಒಳನಾಡಿನ ವಿವಿಧ ಜಿಲ್ಲೆಗಳನ್ನು ಪ್ರವೇಶಿಸಿದ್ದು, ಉತ್ತಮ ಮಳೆಯಾಗುತ್ತಿದೆ
ಬೆಟ್ಟಿಂಗ್ ಅಥವಾ ಜೂಜಾಟದ ಉದ್ದೇಶವಿಲ್ಲದೆ ಕೇವಲ ಮನರಂಜನೆಯ ಕಾರಣಕ್ಕೆ ಇಸ್ಪೀಟ್ ಆಡುವುದು ನೈತಿಕವಾಗಿ ತಪ್ಪಲ್ಲ ಎಂದು ಕರ್ನಾಟಕದ ವ್ಯಕ್ತಿಯೊಬ್ಬರ ಪ್ರಕರಣದ ತೀರ್ಪಿನ ವೇಳೆ ಸುಪ್ರೀಂಕೋರ್ಟ್ ಹೇಳಿದೆ.
, ‘ಅನಿಮಲ್’ ಖ್ಯಾತಿಯ ಸುದೀಪ್ ರೆಡ್ಡಿ ವಂಗ ನಿರ್ದೇಶನದ ‘ಸ್ಪಿರಿಟ್’ ಸಿನಿಮಾಕ್ಕೆ ಕೊನೆಗೂ ನಾಯಕಿಯ ಆಯ್ಕೆ ಆಗಿದೆ. ‘ಅನಿಮಲ್’ ಸಿನಿಮಾದಲ್ಲಿ ವೈಬ್ರೆಂಟ್ ಆಕ್ಟಿಂಗ್ ಮೂಲಕ ಗಮನಸೆಳೆದ ತೃಪ್ತಿ ದಿಮ್ರಿ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.
ಮಾಜಿ ಚಾಂಪಿಯನ್ ಗುಜರಾತ್ ಟೈಟಾನ್ಸ್ನ ನಂಬರ್ 1 ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆಗಳು ದಟ್ಟವಾಗಿದೆ
ಪಹಲ್ಗಾಂನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಇಲ್ಲಿನ ವಿಜಯನಗರದ ನಿವಾಸಿ ಮಂಜುನಾಥ್ ರಾವ್ ಅವರ ಮನೆಗೆ ಭಾನುವಾರ ಅಸ್ಸಾಂ ರಾಜ್ಯದ ಕೈಗಾರಿಕಾ ಸಚಿವ ಬಿಮಲ್ ಬೋರಾ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ರಾಜ್ಯದಲ್ಲಿ ಉತ್ತಮ ರಾಜಕಾರಣಿಗಳನ್ನು ತಯಾರು ಮಾಡುವ ದೃಷ್ಟಿಯಿಂದ ರಾಜಕೀಯ ಕಾಲೇಜು ಆರಂಭಿಸುವ ಚಿಂತನೆ ನಡೆಸಿರುವುದಾಗಿ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.
ಸದನದಿಂದ ಆರು ತಿಂಗಳ ಕಾಲ ಅಮಾನತಾಗಿದ್ದ 18 ಮಂದಿ ಬಿಜೆಪಿ ಶಾಸಕರ ಅಮಾನತು ಹಿಂಪಡೆದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಸಾಧನೆ ಸಮಾವೇಶದ ಹೆಸರಲ್ಲಿ ಜನತೆಯ ವೇದನೆ ಸಮಾವೇಶ ಮಾಡಬಾರದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ
ಇದೇ ಮೇ 12ರಂದು ಹೊರಡಿಸಿರುವ ಸರ್ಕಾರದ ವರ್ಗಾವಣೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಹಾಗೂ ಪ್ರಮುಖ ಏಳು ಆಕ್ಷೇಪಣೆಗಳು ಉದ್ಭವಿಸದಂತೆ ಎಚ್ಚರ ವಹಿಸಿ ವರ್ಗಾವಣೆ ಆದೇಶ ಮಾಡುವಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು/ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶಿಸಿದ್ದಾರೆ.