ತಾವರೆಕೆರೆ ಮುಖ್ಯರಸ್ತೆಯ ಜಿಎಸ್ ಸೂಟ್ಸ್ ಹೋಟೆಲ್ನ ಎಲ್ಇಡಿ ಡಿಸ್ಪ್ಲೇ ಬೋರ್ಡ್ನಲ್ಲಿ ಕನ್ನಡಿಗರ ಕುರಿತು ಅವಾಚ್ಯ ಪದ ಹಾಕಿದ ಪ್ರಕರಣ ಸಂಬಂಧ ಹೋಟೆಲ್ನ ಮ್ಯಾನೇಜರ್ನನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕರ್ನಲ್ ಸೋಫಿಯಾ ಖುರೇಶಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಹರ್ಯಾಣದ ಅಶೋಕ ವಿವಿಯ ಪ್ರಾಧ್ಯಾಪಕರನ್ನು ಬಂಧಿಸಲಾಗಿದೆ.
ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಜವಳಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದಾಗಿ ಒಂದುವರೆ ವರ್ಷದ ಮಗು ಸೇರಿ 8 ಜನರು ದುರ್ಮರಣ ಹೊಂದಿದ್ದಾರೆ.
ಸಂಕಷ್ಟದಲ್ಲಿರುವ ಚಿತ್ರಮಂದಿರಗಳನ್ನು ಉಳಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಲು ಚಿತ್ರರಂಗ ನಿರ್ಧರಿಸಿದೆ.
ಪಾಕಿಸ್ತಾನದ ಮೂಗು ಕುಯ್ಯುತ್ತೇವೆ ಎಂದು ಹೋಗಿ ಅಮೆರಿಕ ಮಾತು ಕೇಳಿ ಮತ್ತೊಮ್ಮೆ ನಮ್ಮ ಮೇಲೆ ದುಸ್ಸಾಹಸ ಮಾಡಲು ಪಾಕಿಸ್ತಾನಕ್ಕೆ ಅವಕಾಶ ಮಾಡಿಕೊಟ್ಟಿದ್ದೀರಿ.
- 2 ವರ್ಷಗಳ ಅವಧಿಯಲ್ಲಿ ಕೃಷಿ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ । ಇಂದಿರಾ ರೈತ ಕಲ್ಯಾಣದ ಕನಸು ಸಾಕಾರಕ್ಕೆ ಸರ್ಕಾರ ಬದ್ಧ
ಬೆಂಗಳೂರು ಹಾಗೂ ತುಮಕೂರು ಮಧ್ಯೆ ಮೆಟ್ರೋ ರೈಲು ಸಂಪರ್ಕ ಯೋಜನೆ ಸಂಬಂಧ ಖಾಸಗಿ ಕಂಪನಿ ಸಲ್ಲಿಸಿದ್ದ ಕಾರ್ಯಸಾಧ್ಯತಾ ಪರೀಕ್ಷಾ ವರದಿಯನ್ನು ಸರ್ಕಾರಕ್ಕೆ ಬಿಎಂಆರ್ಸಿಎಲ್ ಸಲ್ಲಿಸಿದೆ.
ನಗರದಲ್ಲಿರುವ ಎಲ್ಲ ಆಸ್ತಿಗಳ ದಾಖಲೆಗಳನ್ನು ಸ್ಕ್ಯಾನ್ ಮಾಡಿಸುತ್ತಿದ್ದು ಜನರ ಮನೆ ಬಾಗಿಲಿಗೆ ಖಾತೆ ದಾಖಲೆ ತಲುಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಿಸಿದ ಬೆನ್ನಲ್ಲೇ ಪರೀಕ್ಷೆ-3ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ
ಪಹಲ್ಗಾಂನಲ್ಲಿ 26 ಜನ ಅಮಾಯಕರನ್ನು ಕೊಂದು ಹಾಕಿದ್ದ ಉಗ್ರರನ್ನು ಸರ್ವನಾಶ ಮಾಡಲು ‘ಆಪರೇಷನ್ ಸಿಂದೂರ’ ಮೂಲಕ ಅವಕಾಶ ಸಿಕ್ಕಿತ್ತು. ಹೀಗಾಗಿ ಈ ‘ಆಪರೇಷನ್ ಸಿಂದೂರ’ ನಿಲ್ಲಿಸಬಾರದಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.