ಉನ್ನತ ಶಿಕ್ಷಣಕ್ಕೆ ದೇಶದ ಹೆಣ್ಣು ಮಕ್ಕಳನ್ನು ಉತ್ತೇಜಿಸಲು 2.5 ಲಕ್ಷ ವಿದ್ಯಾರ್ಥಿನಿಯರಿಗೆ ವ್ಯಾಸಂಗದ ಅವಧಿಯಲ್ಲಿ ಪ್ರತಿ ವರ್ಷ ತಲಾ 30 ಸಾವಿರ ರು. ವಿದ್ಯಾರ್ಥಿ ವೇತನ ನೀಡುವುದಾಗಿ ಘೋಷಿಸಿದೆ.
ವಸತಿ ಸಮುಚ್ಛಯದ (ಅಪಾರ್ಟ್ಮೆಂಟ್) ಫ್ಲಾಟ್ಗಳ ಮಾಲೀಕರ ಸಂಘವನ್ನು ಕರ್ನಾಟಕ ಅಪಾರ್ಟ್ಮೆಂಟ್ ಓನರ್ಶಿಪ್ ಕಾಯ್ದೆಯಡಿ (ಕೆಒಎ) ನೋಂದಾಯಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ನಾಡಪ್ರಭು ಕೆಂಪೇಗೌಡ ಅವರ ಬೆಂಗಳೂರನ್ನು ಕಾಂಗ್ರೆಸ್ ಸರ್ಕಾರ ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು ಮಾಡಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಮುಂದಿನ ವರ್ಷಾಂತ್ಯಕ್ಕೆ ಪೂರ್ಣಗೊಳಿಸುವ ಗುರಿಯೊಂದಿಗೆ ಆರಂಭವಾದ ಬೆಂಗಳೂರು ಉಪನಗರ ರೈಲು ಯೋಜನೆಯ ಹೀಲಲಿಗೆ-ರಾಜಾನುಕುಂಟೆ ಸಂಪರ್ಕಿಸುವ ‘ಕನಕ’ ಕಾರಿಡಾರ್ ಕಾಮಗಾರಿ ಕೂಡ ಪ್ರಗತಿ ಕಾಣುತ್ತಿಲ್ಲ.
ರಾಜಧಾನಿಯಲ್ಲಿ ಸತತ 4ನೇ ದಿನ ಪೂರ್ವ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಗುರುವಾರ ರಾತ್ರಿ ನಗರದ ಕೇಂದ್ರ ಹಾಗೂ ಉತ್ತರ ಭಾಗದ ವಿವಿಧ ಕಡೆ ಧಾರಾಕಾರ ಮಳೆಯಾಗಿದೆ.
ಬಟ್ಟೆ ಗಲೀಜು ಆಗುತ್ತದೆ ಎಂದು ಬೆತ್ತಲೆಯಾಗಿ ಮೊಬೈಲ್ ಮಾರಾಟ ಮಳಿಗೆಯ ಹಿಂಬದಿ ಗೋಡೆ ಕೊರೆದು 85 ಮೊಬೈಲ್ ದೋಚಿದ್ದ ಖದೀಮನೊಬ್ಬ ಬೊಮ್ಮನಹಳ್ಳಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಭರ್ಜರಿ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನಾ ಪಡೆಗಳು ಶುಕ್ರವಾರ ಪುಲ್ವಾಮದಲ್ಲಿ ಅಡಗಿ ಕುಳಿತಿದ್ದ ಮೂವರು ಜೈಷ್ ಎ ಮೊಹಮ್ಮದ್ ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಅಮೆರಿಕದ ಉತ್ಪನ್ನಗಳಿಗೆ ಶೂನ್ಯ ತೆರಿಗೆ ವಿಧಿಸುವ ಪ್ರಸ್ತಾಪ ಭಾರತದಿಂದ ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಬುಡಕಟ್ಟು ವ್ಯವಹಾರಗಳ ಸಚಿವ ಕುನ್ವರ್ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.