ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ಸುಮಾರು ‘ಸಿ’ ದರ್ಜೆ ದೇವಾಲಯಗಳ ಅಭಿವೃದ್ಧಿಗಾಗಿ ಸರ್ಕಾರ ತಂದ ಮುಜರಾಯಿ ಕಾಯ್ದೆ ತಿದ್ದುಪಡಿ ಬಿಲ್ಗೆ ತಕ್ಷಣ ಅನುಮೋದಿಸುವಂತೆ ಅಖಿಲ ಕರ್ನಾಟಕ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ರಾಜ್ಯಪಾಲರನ್ನು ಒತ್ತಾಯಿಸಿದೆ.
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡುವ ಸಂಬಂಧ ದತ್ತಾಂಶ ಸಂಗ್ರಹಿಸಲು ನಡೆಸುತ್ತಿರುವ ಮನೆ-ಮನೆ ಸಮೀಕ್ಷೆ ರಾಜ್ಯಾದ್ಯಂತ ತಾಂತ್ರಿಕ ಸಮಸ್ಯೆ, ಗೊಂದಲಗಳ ನಡುವೆಯೂ ಉತ್ತಮವಾಗಿ ನಡೆಯುತ್ತಿದೆ
ನಾಗರಹೊಳೆ ಅಭಯಾರಣ್ಯದ ಕರಡಿಕಲ್ಲು ಹತ್ತೂರು ಕೊಲ್ಲೆಹಾಡಿಯ ಗ್ರಾಮದಲ್ಲಿ ನೆಲೆಸಿರುವ 52 ಕುರುಬ ಆದಿವಾಸಿ ಕುಟುಂಬಗಳನ್ನು ಎತ್ತಂಗಡಿ ಮಾಡುವ ಪ್ರಯತ್ನವನ್ನು ಆದಿವಾಸಿ ಮತ್ತು ಇತರ ಅರಣ್ಯವಾಸಿಗಳ ಹಿತರಕ್ಷಣಾ ಸಂಸ್ಥೆಯಾಗಿರುವ ಸಿಎನ್ಎಪಿಎ ಖಂಡಿಸಿದೆ.
ಅನೈತಿಕ ಸಂಬಂಧಕ್ಕೆ ಜನಿಸಿದ್ದ ಸುಮಾರು 15 ದಿನಗಳ ಹೆಣ್ಣು ಹಸುಗೂಸನ್ನು ರಸ್ತೆ ಬದಿಯ ಆಟೋದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಪತ್ತೆಹಚ್ಚಿದ್ದಾರೆ.
ಕರ್ನಾಟಕ ಗೃಹ ಮಂಡಳಿಯಿಂದ ಬೆಂಗಳೂರು ದಕ್ಷಿಣ ತಾಲೂಕು ತಾವರೆಕೆರೆ ಹೋಬಳಿ ಬ್ಯಾಲಾಳು ಬಡಾವಣೆಯಲ್ಲಿ ಅಭಿವೃದ್ಧಿಪಡಿಸಿ ಹಂಚಿಕೆಗೆ ಲಭ್ಯವಿರುವ 828 ಉಳಿಕೆ ನಿವೇಶನಗಳಿಗೆ ಬರೋಬ್ಬರಿ 9,732 ಅರ್ಜಿಗಳು ಸಲ್ಲಿಕೆಯಾಗಿವೆ.
ನಗರದ ವೈಟ್ಫೀಲ್ಡ್ ಪ್ಯಾನೆಲ್ ಕ್ಯಾಬಿನ್ನಲ್ಲಿ ಎಲೆಕ್ಟ್ರಾನಿಕ್ ಇಂಟರ್ ಲಾಕಿಂಗ್ ವ್ಯವಸ್ಥೆಯ ಅಳವಡಿಕೆ, ನಾನ್ ಇಂಟರ್ಲಾಕಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲು ಸೇವೆ ರದ್ದು ಹಾಗೂ ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ರಾಜ್ಯದಲ್ಲಿ ಮತ್ತೆ ಪೂರ್ವ ಮುಂಗಾರು ಚುರುಕುಗೊಳ್ಳುವ ಲಕ್ಷಣ ಕಂಡು ಬರುತ್ತಿದ್ದು, ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉಪೇಂದ್ರ ಅವರ ನಟನೆಯ ‘ಭಾರ್ಗವ’ ಚಿತ್ರಕ್ಕೆ ನಾಯಕಿಯಾಗಿ ಅಂಕಿತಾ ಅಮರ್ ಆಯ್ಕೆ ಆಗಿದ್ದಾರೆ.
ಐಪಿಎಲ್ ಪಂದ್ಯ ಮೇ 16ರಿಂದ ಪುನಾರಂಭ ನಿರೀಕ್ಷೆ
ಮೇ 30ಕ್ಕೆ ಫೈನಲ್ ಸಾಧ್ಯತೆ । ಇಂದು ವೇಳಾಪಟ್ಟಿ ಪ್ರಕಟ? । ಮೇ 13ರೊಳಗೆ ಎಲ್ಲಾ ಆಟಗಾರರು ತಂಡ ಕೂಡಿಕೊಳ್ಳುವಂತೆ ಸೂಚನೆ
ಪಹಲ್ಗಾಂ ನರಮೇಧದ ಬಳಿಕ ಪಾಕಿಸ್ತಾನದ ಮೇಲೆ ವೈಮಾನಿಕ ದಾಳಿಯಲ್ಲಿ ಭಾರತೀಯ ಸೇನೆಯ ಮಹತ್ವದ ಜಯದಲ್ಲಿ ಬೆಂಗಳೂರಲ್ಲಿ ಕೇಂದ್ರ ಕಚೇರಿ ಹೊಂದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕೂಡಾ ಮಹತ್ವದ ಪಾತ್ರ ವಹಿಸಿದೆ