ರಾಜ್ಯದಲ್ಲಿ ಪಕ್ಷ ಸಂಘಟನೆಗಾಗಿ 58 ದಿನಗಳ ಕಾಲ ‘ಜನರೊಂದಿಗೆ ಜನತಾದಳ’ ಹೆಸರಿನಲ್ಲಿ ರಾಜ್ಯ ಪ್ರವಾಸ ಕೈಗೊಂಡಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರದಿಂದ ಐದು ದಿನ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.
ಐಶ್ವರ್ಯಾ ಗೌಡ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳು ಮಾಜಿ ಸಂಸದ ಡಿ.ಕೆ.ಸುರೇಶ್ ಅವರನ್ನು ಮಂಗಳವಾರ ವಿಚಾರಣೆ ನಡೆಸಿದರು.
ರಾಜ್ಯ ಸರ್ಕಾರ ನೀಡಿದ ಅನ್ಯ ಭಾಗ್ಯಕ್ಕೆ ಸರ್ಕಾರವೇ ಕನ್ನ ಹಾಕುತ್ತಿದೆ. 10 ಕೆ.ಜಿ. ಅಕ್ಕಿ ಕೊಡುವುದಾಗಿ ಹೇಳಿ ಕೇವಲ 5 ಕೇಜಿ ಕೊಡುತ್ತಿದ್ದಾರೆ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಮಲೆಮಹದೇಶ್ವರ ಬೆಟ್ಟ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಘೋಷಿಸುವುದು ಹಾಗೂ ತಮಿಳುನಾಡಿನಿಂದ ಮೇವಿಗಾಗಿ ವನ್ಯಜೀವಿಧಾಮಕ್ಕೆ ಜಾನುವಾರುಗಳನ್ನು ಕರೆತರುವುದಕ್ಕೆ ನಿಷೇಧ ಹೇರಲು ಸೂಕ್ತ ಕ್ರಮ ಕೈಗೊಳ್ಳುವಂತೆ ಹಿರಿಯ ಅರಣ್ಯಾಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಡೆವಿಲ್’ ಚಿತ್ರದ ಚಿತ್ರೀಕರಣಕ್ಕಾಗಿ ಜು.11ರಿಂದ 30ರವರೆಗೆ ಥಾಯ್ಲೆಂಡ್ಗೆ ಹೋಗಲು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್ಗೆ ಅನುಮತಿ ನೀಡಿ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮಂಗಳವಾರ ಆದೇಶಿಸಿದೆ.
ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 2 ದಿನದಲ್ಲಿ ಹಾರ್ಟ್ ಅಟ್ಯಾಕ್ಗೆ ಐವರು ಮೃತಪಟ್ಟಿದ್ದಾರೆ.
ಕಳೆದ 2016ರಲ್ಲಿ ರೂಪಿಸಲಾಗಿದ್ದ ಮೆಜೆಸ್ಟಿಕ್ನಲ್ಲಿ ಬಹುಮಹಡಿ ಇಂಟರ್ ಮಾಡೆಲ್ ಸಾರಿಗೆ ಕೇಂದ್ರ ನಿರ್ಮಾಣಕ್ಕೆ ಮತ್ತೆ ಚಾಲನೆ ನೀಡಲಾಗಿದ್ದು, ಯೋಜನೆ ಜಾರಿ ಸಂಬಂಧ ತಾಂತ್ರಿಕ ಸಲಹೆಗಾರರನ್ನು ನೇಮಿಸಲು ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ
ನಮ್ಮ ಮೆಟ್ರೋ ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಒಎನ್ಡಿಸಿ) ನೆಟ್ವರ್ಕ್ ಮೂಲಕ ಕ್ಯೂಆರ್ ಟಿಕೆಟ್ ಸೇವೆ ನೀಡಲು ಚಾಲನೆ ನೀಡಿದೆ.
ಕರ್ನಾಟಕದ ಕೈಗಾರಿಕೆಗಳನ್ನು ಸೆಳೆಯುವ ಉದ್ದೇಶದ ಮಹತ್ವಾಕಾಂಕ್ಷೆಯ 9,719 ಎಕ್ರೆ ಪ್ರದೇಶ ವ್ಯಾಪ್ತಿಯ ಓರ್ವಾಕಲ್ ನೋಡ್ ಕೈಗಾರಿಕಾ ಪ್ರದೇಶದ ಮಾಸ್ಟರ್ ಪ್ಲಾನ್ಗೆ ಆಂಧ್ರ ಪ್ರದೇಶ ಸರ್ಕಾರ ಮಂಗಳವಾರ ಅನುಮತಿ ನೀಡಿದೆ.