ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಕಲ್ಯಾಣ ಕರ್ನಾಟಕದ ಹೊಸಪೇಟೆಯಲ್ಲಿ ನಡೆಸಲುದ್ದೇಶಿಸಿದ್ದ ಸಾಧನಾ ಸಮಾವೇಶ ಮುಂದೂಡಲಾಗಿದೆ.
ಪ್ರಸಕ್ತ 2025-26ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಇದೇ 15ರಿಂದ ಒಂದು ತಿಂಗಳ ಕಾಲ ನಡೆಯಲಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.
ಸರ್ಕಾರಿ ನೌಕರಿಯಲ್ಲಿರುವ ಅಂಗವಿಕಲ ಅಧಿಕಾರಿಗಳಿಗೆ ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ತೀರ್ಮಾನ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ನಮ್ಮಲ್ಲಿನ ಕೆಲ ಹಿತಶತ್ರುಗಳು, ಸೇನಾ ಕಾರ್ಯಾಚರಣೆ ಹಾಗೂ ಮೋದಿಯವರನ್ನು ಟೀಕಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಅಪ್ಲೋಡ್ ಮಾಡುವ ಮೂಲಕ ವಿಕೃತಿ ಮೆರೆದಿದ್ದಾರೆ.
ಆಗಸದಲ್ಲೇ ಡ್ರೋನ್ ಧ್ವಂಸಗೊಳಿಸಿದ ಭಾರತೀಯ ಸೇನೆ
ಕಾಶ್ಮೀರದ ಸಮರ ಭೂಮಿಯಿಂದ ಕನ್ನಡಪ್ರಭ ಸಾಕ್ಷಾತ್ ವರದಿ
ಪಾಕ್ ಕಡೆಯಿಂದ ಹಾರಿ ಬರುತ್ತಿರುವ ಕ್ಷಿಪಣಿಗಳನ್ನು ತಡೆಯುತ್ತಿರುವಲ್ಲಿ, ಸ್ವದೇಶಿ ಆಕಾಶ್ ವಾಯು ರಕ್ಷಣಾ ವ್ಯವಸ್ಥೆ ಮಹತ್ವದ ಪಾತ್ರ ವಹಿಸುತ್ತಿದೆ. ಇದನ್ನು ಬೆಂಗಳೂರು ಮೂಲದ ವಿಜ್ಞಾನಿಯೊಬ್ಬರು ಅಭಿವೃದ್ಧಿಪಡಿಸಿರುವುದು ಹೆಮ್ಮೆಯ ವಿಷಯವಾಗಿದೆ.
ಗುರುವಾರ ರಾತ್ರಿ ಭಾರತದ ಮೇಲೆ ಭಾರೀ ಪ್ರಮಾಣದ ದಾಳಿ ನಡೆಸಿದ್ದ ಪಾಕಿಸ್ತಾನ, ಈ ವೇಳೆ 3 ತಾಸಿನ ಅವಧಿಯಲ್ಲಿ ಟರ್ಕಿ ನಿರ್ಮಿತ 300-400 ಡ್ರೋನ್ಗಳನ್ನು ಭಾರತದತ್ತ ಹಾರಿಬಿಟ್ಟಿತ್ತು ಎಂಬ ವಿಷಯ ಬೆಳಕಿಗೆ ಬಂದಿದೆ.
ಭಾರತ ನಡೆಸಿದ ‘ಆಪರೇಷನ್ ಸಿಂದೂರ’ದಿಂದ ಕಂಗೆಟ್ಟು ಹತಾಶವಾಗಿ ಪ್ರತಿದಾಳಿ ನಡೆಸುತ್ತಿರುವ ಪಾಕಿಸ್ತಾನ ಶುಕ್ರವಾರ ರಾತ್ರಿ ಕೂಡ ಡ್ರೋನ್ ಕಾಶ್ಮೀರದಿಂದ ಗುಜರಾತ್ವರೆಗೆ 4 ರಾಜ್ಯಗಳಲ್ಲಿ ದಾಳಿ ಮುಂದುವರಿಸಿದೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಹಿಂದೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಕೈವಾಡದ ಶಂಕೆ - ಕರ್ನಾಟಕ ಬಿಜೆಪಿ
ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಪರಿಸ್ಥಿತಿ ಹಿನ್ನೆಲೆಯಲ್ಲಿ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಭಾರತದಲ್ಲಿ 8,000 ಎಕ್ಸ್ (ಟ್ವೀಟರ್) ಖಾತೆಗಳಿಗೆ ನಿರ್ಬಂಧ ಹೇರಿದೆ.