ವರದಕ್ಷಿಣೆ ಕಿರುಕುಳದ ಆರೋಪದ ಅಡಿ ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಡಿವೈಎಸ್ಪಿಯೊಬ್ಬರ ವಿರುದ್ಧ ಈಶಾನ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಹಾಗೂ ಎಷ್ಟು ಪಾಲಿಕೆ ರಚಿಸಬೇಕು ಎಂಬುದರ ಬಗ್ಗೆ ಸಮಿತಿ ಅಂತಿಮ ವರದಿ ನೀಡಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಟಿಬೆಟ್ ಹೋರಾಟ ಬೆಂಬಲಿಸುವ ಸಲುವಾಗಿ ಸರ್ವಪಕ್ಷದ ಸುಮಾರು 80 ಸಂಸದರು ಟಿಬೆಟಿಯನ್ ಬೌದ್ಧ ಧರ್ಮಗುರು ದಲೈಲಾಮಾಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಕೃತಕ ಬುದ್ಧಿಮತ್ತೆಯು ಊಹೆಗೂ ಮೀರಿ ಎಲ್ಲಾ ಕ್ಷೇತ್ರಗಳನ್ನು ಆವರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ, ಸೊಳ್ಳೆಗಳ ಮೇಲೆ ಕಣ್ಣಿಡಲು ಮತ್ತು ಅವುಗಳನ್ನು ನಿಯಂತ್ರಿಸಲು ಎಐ ಬಳಸಲು ಆಂಧ್ರಪ್ರದೇಶ ಮುಂದಾಗಿದೆ.
ಕೊಲ್ಲಿ ದೇಶ ಯುಎಇ ತನ್ನ ಗೋಲ್ಡನ್ ವೀಸಾ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಹೀಗಾಗಿ ಕೇವಲ 23 ಲಕ್ಷ ರು. ನೀಡಿ ಅರ್ಹ ಭಾರತೀಯರು ಸುಲಭವಾಗಿ ಯುಎಇ ದೇಶದ ಪೌರತ್ವ ಪಡೆಯಬಹುದಾಗಿದೆ.
ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ ನಗರದಲ್ಲಿರುವ ಎಜ್ಬಾಸ್ಟನ್ ಕ್ರೀಡಾಂಗಣದಲ್ಲಿ ಭಾರತ 1967ರಿಂದಲೂ ಟೆಸ್ಟ್ ಕ್ರಿಕೆಟ್ ಆಡುತ್ತಿದೆ. ಆದರೆ ಇಲ್ಲಿ ಟೀಂ ಇಂಡಿಯಾ ಚೊಚ್ಚಲ ಗೆಲುವು ದಾಖಲಿಸಲು ಬರೋಬ್ಬರಿ 58 ವರ್ಷ ಕಾಯಬೇಕಾಯಿತು
ಕಿರೀಟಿ ಮತ್ತು ಶ್ರೀಲೀಲಾ ನಟನೆಯ ‘ಜೂನಿಯರ್’ ಸಿನಿಮಾದ ‘ವೈರಲ್ ವಯ್ಯಾರಿ’ ಹಾಡು ಬಿಡುಗಡೆಯಾಗಿದೆ. ಸದ್ಯ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
‘ ಕೆ 47 ಸಿನಿಮಾದಲ್ಲಿ ನನ್ನದು ಮ್ಯಾಕ್ಸ್ ರೀತಿಯ ಸೀರಿಯಸ್ ಪಾತ್ರ ಅಲ್ಲ, ಮುತ್ತತ್ತಿ ಸತ್ಯರಾಜು ಥರದ ಹಿಲೇರಿಯಸ್ ಪಾತ್ರ. ಈಗ ನನಗೆ ಕ್ಯಾಲೆಂಡರ್ ನೋಡಿದರೆ ಭಯ ಆಗುತ್ತೆ - ಸುದೀಪ್
ಅತ್ಯುತ್ತಮ ಮಾರ್ಗ ಇದ್ದ ಕಾಲದಿಂದ ಹೆಜ್ಜೆ ಇಟ್ಟು ಸಾಗಿ ಬಂದಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಈಗ ಸದಸ್ಯರಾಗಿ 45 ವರ್ಷಗಳನ್ನು ಪೂರೈಸಿ ದಾಖಲೆ ಮಾಡಿದ್ದಾರೆ.
ಸಂಸ್ಥಾರಸ್ಥರು ಮತ್ತು ಸನ್ಯಾಸಿಗಳ ನಡುವಿನ ವ್ಯತ್ಯಾಸವನ್ನು ಶಿರಹಟ್ಟಿ ಫಕೀರೇಶ್ವರ ಸಂಸ್ಥಾನಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರು ನೀಡಿದ್ದಾರೆ