ಸಿನಿಮಾ ಟಿಕೆಟ್ ದರಕ್ಕೆ 200 ರು. ಮಿತಿ ನಿಗದಿಗೊಳಿಸಲು ರಾಜ್ಯ ಸರ್ಕಾರ ಕರಡು ನಿಯಮ ಪ್ರಕಟಿಸಿ, ಆಕ್ಷೇಪಣೆ ಆಹ್ವಾನಿಸಿರುವಾಗಲೇ, ತಮಿಳು ಚಿತ್ರರಂಗದ ಸೂಪರ್ಸ್ಟಾರ್ ರಜನಿಕಾಂತ್ ಅವರ ಹೊಸ ಸಿನಿಮಾ ‘ಕೂಲಿ’ ಟಿಕೆಟ್ ದರ 2000 ರು.ವರೆಗೂ ಮಾರಾಟವಾಗಿದೆ.
ಒಂದು ಊಟದ ಬೆಲೆ ₹4200. ಕೇವಲ ಹದಿನಾಲ್ಕು ಮಂದಿಗೆ ಮಾತ್ರ ಪ್ರವೇಶ. ನೀವಾಗಿಯೇ ಅಲ್ಲಿಗೆ ಹೋಗುವಂತಿಲ್ಲ. ಅವರು ಒಪ್ಪಿದರೆ ಮಾತ್ರ ಹೋಗಬಹುದು. ವಾರಾಂತ್ಯದ ಮೂರು ದಿನ ಮಾತ್ರ ಇಲ್ಲಿ ಊಟ ದೊರೆಯುತ್ತದೆ.
8ನೇ ಶತಮಾನದ ಅಂತ್ಯದಲ್ಲಿ ಯುರೋಪಿಯನ್ ರಾಷ್ಟ್ರಗಳ ನಡುವಿನ ಬಾಲ್ಕನ್ ಮತ್ತು ಉತ್ತರ ಆಫ್ರಿಕಾದಲ್ಲಿನ ಸಂಘರ್ಷದ ಹೊರತಾಗಿಯೂ ವಿಶ್ವದ ಆರ್ಥಿಕತೆ ಏರುಗತಿಯಲ್ಲಿತ್ತು. ಆದರೆ..
2016ರಲ್ಲಿ ಕೃಷಿ ಸಚಿವರಾಗಿದ್ದ ಇಂದಿನ ಕಂದಾಯ ಸಚಿವ ಕೃಷ್ಣಬೈರೇಗೌಡರು ಆಸಕ್ತಿಯಿಂದ ಅಡಿಪಾಯ ಹಾಕಿದ ರೈತ ಉತ್ಪಾದನಾ ಸಹಕಾರಿ ಒಕ್ಕೂಟ ಇಂದು 25 ಕೋಟಿ ರೂಪಾಯಿ ವಹಿವಾಟಿನ ಕಂಪನಿಯಾಗಿ ಬೆಳೆದು ನಿಂತಿದೆ.
ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿದ ಉತ್ಖನನ ಪ್ರಕ್ರಿಯೆ ವೇಳೆ ಬಾಹುಬಲಿ ಬೆಟ್ಟದ ತಪ್ಪಲಿನಲ್ಲಿ ನಡೆದ ಅಗೆತ ಕಾರ್ಯಾಚರಣೆಯಲ್ಲಿ ಕಳೇಬರ ಪತ್ತೆಯಾಗದಿದ್ದರೆ ಅದು ಮುಸುಕುಧಾರಿ ಅನಾಮಿಕ ದೂರುದಾರನ ತಪ್ಪಲ್ಲ ಎಂದು ದೂರುದಾರೆ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್. ಹೇಳಿದ್ದಾರೆ.
ಧ್ರುವ ಸರ್ಜಾ ಅವರ ವಿರುದ್ಧ ಮುಂಬೈನಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ದರ್ಶನ್ ಅಭಿನಯದ ‘ಜಗ್ಗುದಾದ’ ಸಿನಿಮಾ ನಿರ್ದೇಶಿಸಿದ್ದ ರಾಘವೇಂದ್ರ ಹೆಗ್ಡೆ ಅವರು ಧ್ರುವ ಸರ್ಜಾ ಅವರು ರೂ.3.15 ಕೋಟಿ ವಂಚನೆ ಮಾಡಿದ್ದಾರೆಂದು ಆರೋಪಿಸಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು
ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿದೆ ಎಂದು ಘಂಟಾಘೋಷವಾಗಿ ದಾಖಲೆಗಳ ಸಹಿತ ಆರೋಪ ಮಾಡುತ್ತಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಈ ಬಗ್ಗೆ ಚುನಾವಣಾ ಆಯೋಗದ ಮುಂದೆ ತಮ್ಮ ಸಹಿಯೊಂದಿಗೆ ದೂರು ನೀಡಲು ಹಾಗೂ ಪ್ರಮಾಣ ಪತ್ರ ಸಲ್ಲಿಸಲು ಹಿಂದೇಟು ಹಾಕುತ್ತಿರುವುದೇಕೆ?
ಓಟಿಟಿಯಲ್ಲಿ ವಿದೇಶದ ವೆಬ್ ಸಿರೀಸ್ ವೀಕ್ಷಿಸಿ ಜಾನಪದ ಗಾಯಕಿ ಸವಿತಾ ಅವರ ಪುತ್ರ ಗಾಂಧಾರ್ ಆತ್ಮ*ತ್ಯೆ ಮಾಡಿಕೊಂಡಿರಬಹುದು ಎಂದು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರ ತನಿಖೆಯಲ್ಲಿ ಶಂಕೆ ವ್ಯಕ್ತವಾಗಿದೆ.
ಭಾನುವಾರ ಪ್ರಧಾನಿ ಮೋದಿ ನಗರಕ್ಕೆ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧೆಡೆ 35 ಕ್ಕೂ ಅಧಿಕ ಬೀದಿ ನಾಯಿಗಳನ್ನು ಬಿಬಿಎಂಪಿ ಸೆರೆ ಹಿಡಿದಿದೆ.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬರುವ ಪ್ರಧಾನಿ ಮೋದಿ ಬಳಿಕ ಹೆಲಿಕಾಪ್ಟರ್ ಮುಖಾಂತರ ಮೇಖ್ರಿ ವೃತ್ತದ ಬಳಿಯ ಮಿಲಿಟರಿ ಬೇಸ್ಗೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಳಗ್ಗೆ 11ಕ್ಕೆ ರೈಲು ನಿಲ್ದಾಣಕ್ಕೆ ಬರಲಿದ್ದಾರೆ.