ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಮತ್ತಷ್ಟು ಸಕ್ರಿಯರಾಗಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರು ಮಾಡುತ್ತಿರುವ ಆರೋಪವನ್ನು ಬಂಡವಾಳ ಮಾಡಿಕೊಳ್ಳುತ್ತಿರುವ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ತೀವ್ರಗೊಳಿಸಿದ್ದಾರೆ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕು ಎಂಬ ನಮ್ಮ ಬೇಡಿಕೆಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ರಾಜ್ಯ ಬಿಜೆಪಿಯ ಅತೃಪ್ತ ಬಣದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಮದ್ಯ ಮಾರಾಟಗಾರರ ಹೋರಾಟಕ್ಕೆ ಮಣಿದ ರಾಜ್ಯ ರಾಜ್ಯ ಸರ್ಕಾರ ಅಬಕಾರಿ ಸನ್ನದು ಶುಲ್ಕವನ್ನು ಶೇ.50ರಷ್ಟು ಇಳಿಕೆ ಮಾಡಿದೆ.
ನಗರದ ಪ್ರಮುಖ ಯಶವಂತಪುರ-ಚನ್ನಸಂದ್ರ ಜೋಡಿಹಳಿ ಯೋಜನೆ (21.7 ಕಿ.ಮೀ.) ಹಾಗೂ ಬೈಯ್ಯಪ್ಪನಹಳ್ಳಿ- ಹೊಸೂರು ಜೋಡಿ ಮಾರ್ಗ (48 ಕಿ.ಮೀ.) ಕಾಮಗಾರಿಗಳು ಕುಂಟುತ್ತಾ ಸಾಗಿವೆ.
ರಾಜ್ಯ ಕಾಂಗ್ರೆಸ್ನಲ್ಲಿ ಶಾಸಕರ ಅಸಮಾಧಾನ ಜೋರಾಗುತ್ತಿದ್ದು, ಹಿರಿಯ ಶಾಸಕ ಬಿ.ಆರ್.ಪಾಟೀಲ ಬಳಿಕ ಈಗ ಕಾಗವಾಡ ಶಾಸಕ ರಾಜು ಕಾಗೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಬಿಸಿ ವರ್ಗಕ್ಕೆ ಸೇರಿದ ಏಕ ಪೋಷಕಿಯ ಮಕ್ಕಳನ್ನು ಆಕೆಯ ವರ್ಗದಲ್ಲೇ ಪರಿಗಣಿಸಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ‘ಮುಖ್ಯ’ ಎಂದು ಕರೆದಿರುವ ಸುಪ್ರೀಂ ಕೋರ್ಟ್, ಅದಕ್ಕೆ ಪೂರಕವಾದ ಮಹತ್ವದ ಆದೇಶ ಹೊರಡಿಸಿದೆ.
ಇತ್ತೀಚೆಗೆ ನಡೆದ 4 ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಅಚ್ಚರಿಯ ರೀತಿಯಲ್ಲಿ ಬಿಜೆಪಿ ಆಡಳಿತದ ಗುಜರಾತ್ನ ವಿಸಾವದರ್ ಕ್ಷೇತ್ರದಲ್ಲಿ ಆಮ್ಆದ್ಮಿ ಪಕ್ಷ ಗೆಲುವು ಸಾಧಿಸಿದೆ.
ಅಗ್ಗದ ದರದಲ್ಲಿ ವಿಮಾನಯಾನ ಸೇವೆಯ ಕನಸು ನನಸಾಗುವ ಕ್ಷಣ ಸನ್ನಿಹಿತವಾಗಿದೆ. ವಿಶ್ವದ ಮೊದಲ ಎಲೆಕ್ಟ್ರಿಕ್ ವಿಮಾನದ ಸಂಚಾರ ಭಾನುವಾರ ಇಲ್ಲಿ ಯಶಸ್ವಿಯಾಗಿ ನಡೆದಿದೆ.
ಭಾರತದ ಇತಿಹಾಸದ ಕರಾಳ ಅಧ್ಯಾಯ ಎಂದೇ ಪರಿಗಣಿಸಲಾಗುವ ತುರ್ತು ಸ್ಥಿತಿ ಹೇರಿಕೆಯಾಗಿ ಬುಧವಾರಕ್ಕೆ 50 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ದೇಶವ್ಯಾಪಿ ‘ಸಂವಿಧಾನ ಹತ್ಯಾ ದಿವಸ’ ಆಚರಿಸಲು ಬಿಜೆಪಿ ಸಿದ್ಧತೆ ನಡೆಸಿದೆ.