ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ಪ್ರದೇಶದಲ್ಲಿ ಆರೋಗ್ಯ ಸೇವೆಯ ಲಭ್ಯತೆ ಸುಧಾರಿಸಲು, ಪರಿಣಾಮಕಾರಿ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ₹873 ಕೋಟಿ ವೆಚ್ಚದಲ್ಲಿ 88 ವಿವಿಧ ಆಸ್ಪತ್ರೆಗಳ ನಿರ್ಮಾಣ ಹಾಗೂ ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ.
ರಾಜ್ಯಾದ್ಯಂತ ಬ್ರಾಹ್ಮಣ ಸಮುದಾಯದ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ಜನಿವಾರ ಪ್ರಕರಣದ ಪ್ರಮುಖ ಸಂತ್ರಸ್ತರಾದ ಬೀದರ್ನ ವಿದ್ಯಾರ್ಥಿ ಸಚಿವ್ರತ ಕುಲಕರ್ಣಿ ಸಮಸ್ಯೆ ಇತ್ಯರ್ಥವಾದಂತಾಗಿದೆ.
ತನ್ನ ತವರಿನಲ್ಲೇ ಎದುರಾದ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಾಯುತ್ತಿರುವ ಆರ್ಸಿಬಿ, ಭಾನುವಾರ ವಿರಾಟ್ ಕೊಹ್ಲಿಯ ತವರಿನಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಡಲಿದೆ.
ಹೈಕೋರ್ಟ್ ಆದೇಶದಂತೆ ಉಬರ್ ಇಂಡಿಯಾ ಸಿಸ್ಟಂ ಸೇರಿ ಇನ್ನಿತರ ಆ್ಯಪ್ ಆಧಾರಿತ ಸಂಸ್ಥೆಗಳಿಂದ ನೀಡಲಾಗುತ್ತಿರುವ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
5 ಬಾರಿ ಚಾಂಪಿಯನ್ ಎಂಬ ಖ್ಯಾತಿಯೊಂದಿಗೆ 18ನೇ ಆವೃತ್ತಿ ಐಪಿಎಲ್ಗೆ ಕಾಲಿಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ನ ಅಭಿಯಾನ ಲೀಗ್ ಹಂತದಲ್ಲೇ ಕೊನೆಗೊಳ್ಳುವುದು ಬಹುತೇಕ ಖಚಿತವಾಗಿದೆ. ಎಂ.ಎಸ್.ಧೋನಿ ನಾಯಕತ್ವದ ಸಿಎಸ್ಕೆ ಈ ಸಲ ಟೂರ್ನಿಯಲ್ಲಿ ಆಡಿರುವ 9 ಪಂದ್ಯಗಳ ಪೈಕಿ 7ರಲ್ಲಿ ಎದುರಾಳಿಗೆ ಶರಣಾಗಿದೆ.
ಕ್ರಿಮಿನಲ್ ಪ್ರಕರಣಗಳಲ್ಲಿ ದೋಷಿಯಾಗಿ ನಿರ್ಧಾರಗೊಂಡು ಜೈಲು ಶಿಕ್ಷೆಗೆ ಒಳಗಾದ ಸರ್ಕಾರಿ ನೌಕರ ಪುನಃ ಸೇವೆಯಲ್ಲಿ ಮುಂದುವರಿಯಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿ ಹೈಕೋರ್ಟ್ ಆದೇಶಿಸಿದೆ.
ರಾಜ್ಯ ಸರ್ಕಾರದ ಕೆಲ ಪ್ರಮುಖ ಇಲಾಖೆಗಳಲ್ಲಿ ಸಚಿವರು ಕಾಮಗಾರಿ ಬಿಲ್ ಪಾವತಿಗೆ ಸಂಬಂಧಿಸಿ ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಲೋಕೋಪಯೋಗಿ ಇಲಾಖೆಯಲ್ಲಿ ಕಾಮಗಾರಿಗಳ ಟೆಂಡರ್ನಲ್ಲಿ ಗುತ್ತಿಗೆದಾರರು ಪಾಲ್ಗೊಳ್ಳದಂತೆ ಬೆದರಿಕೆ ಹಾಕಿ ತಡೆ ಒಡ್ಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ.
ರಾಮನಗರ ಹೆಸರು ಬದಲಾವಣೆಯನ್ನು ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಡುಗಿದ್ದಾರೆ.
ಮುಂದಿನ ದಸರಾ ಹಬ್ಬದ ವೇಳೆಗೆ ಕೆಆರ್ಎಸ್ನಲ್ಲಿ ಕಾವೇರಿ ಆರತಿ ಆರಂಭಿಸಲು ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಪಕ್ಷ ಯಾವುದೇ ಇರಲಿ ಒಬ್ಬ ಮನುಷ್ಯನಿಗೆ ನೀಡುವ ಕಿರುಕುಳಕ್ಕೂ ಒಂದು ಮಿತಿ ಇರಬೇಕು ಎಂದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.