ಮಲೆಮಹದೇಶ್ವರ ಬೆಟ್ಟವನ್ನು ಮದ್ಯಪಾನ ಮುಕ್ತ ಪ್ರದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಪಹಲ್ಗಾಂನಲ್ಲಿ ಉಗ್ರರ ದಾಳಿಗೆ ಜೀವತೆತ್ತ ಭರತ್ ಭೂಷಣ್ ಅಂತಿಮ ದರ್ಶನಕ್ಕಾಗಿ ಬಂದವರೆದುರು ತಂದೆ ಚನ್ನವೀರಪ್ಪ ಕಣ್ಣೀರು ಹಾಕುತ್ತಿದ್ದರು.
ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಿಂದ ಸಮಸ್ಯೆಗೆ ಸಿಲುಕಿದ್ದ 178 ಕನ್ನಡಿಗರನ್ನು ಹೊತ್ತು ಶ್ರೀನಗರದಿಂದ ಹೊರಟಿದ್ದ ವಿಶೇಷ ವಿಮಾನ ಗುರುವಾರ ಮಧ್ಯಾಹ್ನ 1.30ರ ವೇಳೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾನಕ್ಕೆ ಸುಕ್ಷಿತವಾಗಿ ಬಂದಿಳಿಯಿತು.
ಭಟ್ಕಳದಲ್ಲಿ 14 ಪಾಕಿಸ್ತಾನಿಯರಿದ್ದರೂ ಅವರು ಇಲ್ಲಿನವರನ್ನು ವಿವಾಹ ಆಗಿರುವುದರಿಂದ ಅವರು ದೇಶ ತೊರೆಯದೆ, ಇಲ್ಲೇ ವಾಸಿಸಬಹುದಾಗಿದೆ.
ಕ್ರೈಸ್ತರ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಭಾಗವಹಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್ ಹಾಗೂ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸವನ್ನು ಸ್ಯಾಂಡಲ್ವುಡ್ ಖಂಡಿಸಿದೆ. ಶಿವಣ್ಣ, ಯಶ್, ಸುದೀಪ್, ರಮ್ಯಾ, ರಿಷಬ್ ಶೆಟ್ಟಿ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ತಾರೆಯರು ಉಗ್ರರಿಂದ ಹತರಾದ ಕುಟುಂಬಕ್ಕೆ ಸಾಂತ್ವನದ ನುಡಿಗಳನ್ನಾಡಿದ್ದಾರೆ.
‘ಫೈರ್ ಫ್ಲೈ’ ಚಿತ್ರದ ಮೂಲಕ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಹೊಸ ಪ್ರತಿಭೆ ವಂಶಿ ನಿರ್ದೇಶಿಸಿ, ನಿರ್ಮಿಸಿರುವ ಈ ಚಿತ್ರ ನಿವೇದಿತಾ ತಾತ ಡಾ. ರಾಜ್ಕುಮಾರ್ ಜನ್ಮದಿನವಾದ ಇಂದು (ಏ.24) ಬಿಡುಗಡೆಯಾಗುತ್ತಿದೆ. ಆ ಹಿನ್ನೆಲೆಯಲ್ಲಿ ನಿವೇದಿತಾ ಜೊತೆಗೆ ಮಾತು.
ತವರಿನಲ್ಲಿ ಜಯದ ಸಿಹಿ ಸವಿಯಲು ಹಪಹಪಿಸುತ್ತಿರುವ ಆರ್ಸಿಬಿ, ಗುರುವಾರ ರಾಜಸ್ಥಾನ ರಾಯಲ್ಸ್ ವಿರುದ್ಧ ಸೆಣಸಲಿದೆ.
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ ಕಳವಳಕಾರಿಯಾಗಿದ್ದು, ಬಾಹ್ಯ ಶಕ್ತಿಗಳು ನಮ್ಮನ್ನು ಕೆರಳಿಸಿದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಇರುವುದು ಬಹಳ ಮುಖ್ಯ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಸೆಕೆ ಹೆಚ್ಚಾಗಿದ್ದು, ಇನ್ನೂ ಎರಡ್ಮೂರು ದಿನ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.