ರೀಲ್ಸ್ ಮಾಡಲು ನಡು ರಸ್ತೆಯಲ್ಲಿ ಚಹಾ ಕುಡಿಯುತ್ತ ಕುಳಿತು ಹೀರೋಯಿಸಂ ತೋರಿಸಿದ್ದ ಟೆಂಪೋ ಚಾಲಕನೊಬ್ಬನನ್ನು ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಸೇಂಟ್ ಫಾನ್ಸೀಸ್ ಕ್ಸೇವೀಯರ್ ಕ್ಯಾಥೆಡ್ರಲ್ ಚರ್ಚ್ನಲ್ಲಿ ಗುರುವಾರ ಸಂಜೆ ಬೆಂಗಳೂರು ಧರ್ಮಪ್ರಾಂತ್ಯದ ಆರ್ಚ್ ಬಿಷಪ್ ಡಾ। ಪೀಟರ್ ಮಚಾದೋ ಅವರು ಪಾದ ತೊಳೆಯುವ ಸೇವೆ ಮಾಡಿದರು.
ಬನ್ನೇರುಘಟ್ಟ ಸಫಾರಿಯಲ್ಲಿರುವ ಸಾಕಾನೆಯೊಂದು ನಡುರಸ್ತೆಯಲ್ಲಿ ನಿಂತು ಸುಮಾರು ಒಂದು ಗಂಟೆಗೂ ಅಧಿಕ ಸಮಯ ಬಸ್ ಅಡ್ಡಗಟ್ಟಿ ಪ್ರಯಾಣಿಕರಿಗೆ ಆತಂಕದ ವಾತಾವರಣ ಸೃಷ್ಠಿಸಿದ ಘಟನೆ ನಡೆದಿದೆ.
ಒಂದನೇ ತರಗತಿ ಪ್ರವೇಶಕ್ಕೆ ಈ ವರ್ಷದ ಮಟ್ಟಿಗೆ ವಯೋಮಿತಿ ಸಡಿಲಿಸಿ 5.5 ವರ್ಷ ಪೂರ್ಣಗೊಂಡ ಮಕ್ಕಳನ್ನೂ ದಾಖಲಾತಿ ಮಾಡಿಕೊಳ್ಳಲು ಅವಕಾಶ ನೀಡಿರುವ ಶಿಕ್ಷಣ ಇಲಾಖೆ, ಪೂರ್ವ ಪ್ರಾಥಮಿಕ ಶಿಕ್ಷಣ ಪೂರೈಸಿರುವ ಮಕ್ಕಳಿಗೆ ಮಾತ್ರ ಇದು ಅನ್ವಯ ಎಂದು ಹೇಳಿರುವುದು ಮತ್ತೆ ಗೊಂದಲಕ್ಕೆ ಕಾರಣವಾಗಿದೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ‘ಜಾತಿ ಗಣತಿ’ ವರದಿಗೆ ಅಲ್ಪಸಂಖ್ಯಾತ ಹಾಗೂ ಹಿಂದುಳಿದ ಜಾತಿಗಳು ಖುಷಿಗೊಂಡಿದ್ದರೆ ಮುಂದುವರೆದ ಜಾತಿಗಳು ಅದರಲ್ಲೂ ವಿಶೇಷವಾಗಿ ಲಿಂಗಾಯತ, ಒಕ್ಕಲಿಗ ಹಾಗೂ ಬ್ರಾಹ್ಮಣ ಸಮುದಾಯಗಳ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ.
ನಾಡಿನ ಎಲ್ಲ ಸಮುದಾಯಗಳ ಜನರಿಗೂ ಸಾಮಾಜಿಕ, ಶೈಕ್ಷಣಿಕವಾಗಿ ನ್ಯಾಯ ಸಿಗಬೇಕು ಎನ್ನುವ ಉದ್ದೇಶದಿಂದ 165 ಕೋಟಿ ರುಪಾಯಿ ವೆಚ್ಚದಲ್ಲಿ 1.60 ಲಕ್ಷ ಅಧಿಕಾರಿ ಮತ್ತು ಸಿಬ್ಬಂದಿ 5,98,14,942 ಜನರನ್ನು ಸಂದರ್ಶಿಸಿ ಸಿದ್ಧಪಡಿಸಿರುವ ವರದಿಯು ಸಾರ್ಥಕತೆ ಆಗಬೇಕು ಎನ್ನುವುದೇ ನಮ್ಮ ಆಶಯವಾಗಿದೆ.
ಕೆಪಿಎಸ್ಸಿ ಕಾರ್ಯ ಚಟುವಟಿಕೆಯಲ್ಲಿ ಬದಲಾವಣೆ ತರುವ ಉದ್ದೇಶದೊಂದಿಗೆ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ಲೋಕಸೇವಾ ಆಯೋಗ ತಿದ್ದುಪಡಿ ವಿಧೇಯಕ-2025ರಲ್ಲಿನ ಅಂಶಗಳ ಕುರಿತು ಕಾನೂನು ಸಲಹೆ ಪಡೆದು ಮರು ಸಲ್ಲಿಸುವಂತೆ ರಾಜ್ಯಪಾಲರು ವಿಧೇಯಕವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಬಿಜೆಪಿಯವರು ಇ.ಡಿ, ಸಿಬಿಐ, ಐಟಿ ಸಂಸ್ಥೆಗಳನ್ನು ಗುರಾಣಿಯಂತೆ ಬಳಸಿ ಕಾಂಗ್ರೆಸ್ ಅನ್ನು ಹಣಿಯುವ ಯತ್ನಕ್ಕೆ ಮುಂದಾಗಿದ್ದಾರೆ. ಆದರೆ, ಬಿಜೆಪಿಯ ಈ ಕುತಂತ್ರಕ್ಕೆ ನಾವು ಜಗ್ಗೋದಿಲ್ಲ, ಬಗ್ಗೋದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.
ನಗರದಲ್ಲಿ ನಡೆದ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಭಾಷಣದಲ್ಲಿ ಬಾಂಗ್ಲಾದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣ ಎನ್ನಲಾದ ಅಲ್ಲಿನ ಪ್ರಧಾನಿ ಮೊಹ್ಮದ್ ಯೂನುಸ್ ಅವರ ಅಭಿಮಾನಿ ಎಂದು ಹೇಳಿಕೊಂಡು ಸರ್ವರ ಗಮನ ಸೆಳೆದರು
ಕೆ.ಆರ್.ನಗರದ ಮಹಿಳೆ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ವಿಚಾರಣಾ ಪ್ರಕ್ರಿಯೆ ಮುಂದೂಡುವಂತೆ ಸೆಷನ್ಸ್ ನ್ಯಾಯಾಲಯಕ್ಕೆ ಸೂಚಿಸಲು ಹೈಕೋರ್ಟ್ ಮೌಖಿಕವಾಗಿ ನಿರಾಕರಿಸಿತು.