ಶನಿವಾರ ಕೇವಲ 2 ಗಂಟೆ ಸುರಿದ ಮುಸಲಧಾರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ತತ್ತರಿಸಿದ್ದು, ಮಂಗಳೂರು ನಗರದ ರಸ್ತೆಗಳಂತೂ ಅಕ್ಷರಶಃ ಮುಳುಗಿಹೋಗಿದ್ದವು.
ಕಾಂತಾರಾ-2 ಸಿನಿಮಾ ಚಿತ್ರೀಕರಣ ಮುಗಿಸಿ ಬರುವಾಗ ದೋಣಿ ಮಗುಚಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸೇರಿ ಅವರ ತಂಡ ಅಪಾಯದಿಂದ ಪಾರಾಗಿದೆ.
ಪ್ರಧಾನಿ ನರೇಂದ್ರ ಮೋದಿ ಭಾನುವಾರದಿಂದ 4 ದಿನಗಳ ಕಾಲ ಕೆನಡಾ, ಸೈಪ್ರಸ್ ಮತ್ತು ಕ್ರೊವೇಷಿಯಾ ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಇರಾನ್ನ ಅಣ್ವಸ್ತ್ರ ಮತ್ತು ಸೇನಾ ನೆಲೆಗಳ ಮೇಲೆ ಶುಕ್ರವಾರ ಇಸ್ರೇಲ್ ದಾಳಿ ನಡೆಸಿದ ದಾಳಿಗೆ ಪ್ರತಿಯಾಗಿ ಶನಿವಾರ ಇರಾನ್ ಕೂಡಾ ಇಸ್ರೇಲ್ ಮೇಲೆ ಭಾರೀ ಪ್ರಮಾಣದ ದಾಳಿ ನಡೆಸಿದೆ.
ಕನ್ನಡಿಗರ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಕನ್ನಡದಲ್ಲಿ ಉತ್ತರ ಕೊಟ್ಟರೆಂಬ ಕಾರಣಕ್ಕೆ ಉಪನ್ಯಾಸಕನಿಂದ ರಾಜೀನಾಮೆ ಪಡೆದ ಘಟನೆ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದೆ. ಕನ್ನಡಪರ ಸಂಘಟನೆಗಳ ಮಧ್ಯಪ್ರವೇಶದಿಂದ ಘಟನೆ ಸುಖಾಂತ್ಯಗೊಂಡಿದೆ
ದುಬೈನ ಮರೀನಾದಲ್ಲಿರುವ 67 ಅಂತಸ್ತಿನ ಟೈಗರ್ ಟವರ್ ಕಟ್ಟಡದಲ್ಲಿ ಶುಕ್ರವಾರ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಗುಜರಾತಿನ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ ಏರಿಕೆಯಾಗುತ್ತಿದ್ದು, ಇದುವರೆಗೆ 270 ಜನರ ಶವಗಳು ಪತ್ತೆಯಾಗಿವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಸುಧಾರಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ, ಈ ಭಾಗಕ್ಕೆ ವಿಶೇಷ ಅನುದಾನ ನೀಡುವುದನ್ನು ಮುಂದುರೆಸುತ್ತೇವೆ. ಹಿಂದೆ ಕಲಬುರಗಿಗೆ ಬಂದಾಗ ಪ್ರತಿ ವರ್ಷ 5 ಸಾವಿರ ಕೋಟಿ ರು. ಕೊಡುವೆ ಅಂತ ಹೇಳಿದ್ದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ.
ಮೇ ಡೇ, ಮೇ ಡೇ, ಮೇ ಡೇ.. ಒತ್ತಡ ಸಾಕಾಗ್ತಿಲ್ಲ, ಶಕ್ತಿ ಇಲ್ಲ, ವಿಮಾನ ಮೇಲೆತ್ತಲು ಸಾಧ್ಯ ಆಗ್ತಿಲ್ಲ...
- ಗುಜರಾತ್ನ ಅಹಮದಾಬಾದ್ನಲ್ಲಿ ಗುರುವಾರ 270 ಜನರ ಬಲಿ ಪಡೆದ ನತದೃಷ್ಟ ಏರ್ ಇಂಡಿಯಾ ವಿಮಾನದ ಪೈಲಟ್ ಕಳುಹಿಸಿದ ಕೊನೆಯ ಸಂದೇಶ ಇದು.
ಗುತ್ತಿಗೆ ಆಧಾರದಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ 195 ಆಶಾ ಕಾರ್ಯಕರ್ತೆಯರ ಮಾರ್ಗದರ್ಶಕರನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.